ಇಂದಿರಾ ಗಾಂಧಿಗಾಗಿ ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಡಿಬಿ ಚಂದ್ರೇಗೌಡ; ರಾಜಕೀಯ ಜೀವನ ಹೀಗಿದೆ

ಕರ್ನಾಟಕ ಹಿರಿಯ ರಾಜಕೀಯ ಮುತ್ಸದಿ ಡಿ.ಬಿ ಚಂದ್ರೇಗೌಡ ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ (87) ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಇವರ ಜೀವನ ಹಾಗೂ ರಾಜಕೀಯ ಹಾದಿ ಹೇಗಿತ್ತು ಎನ್ನುವುದು ಈ ಕೆಳಗಿನಂತಿದೆ ನೋಡಿ.

ಇಂದಿರಾ ಗಾಂಧಿಗಾಗಿ ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಡಿಬಿ ಚಂದ್ರೇಗೌಡ; ರಾಜಕೀಯ ಜೀವನ ಹೀಗಿದೆ
ಇಂದಿರಾ ಗಾಂಧಿ, ಚಂದ್ರೇಗೌಡ
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Nov 07, 2023 | 9:34 AM

ಬೆಂಗಳೂರು, (ನವೆಂಬರ್ 07): ಕರ್ನಾಟಕ ಹಿರಿಯ ರಾಜಕೀಯ ಮುತ್ಸದಿ ಡಿ.ಬಿ ಚಂದ್ರೇಗೌಡ (DB chandre gowda ) ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ (87) ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು 1936, ಆಗಸ್ಟ್ 26ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲಿ ಡಿ.ಎ.ಬೈರೇಗೌಡ ಮತ್ತು ಪುಟ್ಟಮ್ಮ ದಂಪತಿಗಳಪುತ್ರನಾಗಿ ಜನಿಸಿ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಎಲ್.ಎಲ್.ಬಿ. ಪೂರ್ಣಗೊಳಿಸಿದ್ದರು. 22 ಮೇ 1966 ರಂದು ಪೂರ್ಣ ಎನ್ನುವರನ್ನು ವಿವಾಹವಾದ್ದರು.

ಇಂದಿರಾ ಗಾಂಧಿಗಾಗಿ ರಾಜೀನಾಮೆ ನೀಡಿದ್ದ ಚಂದ್ರೇಗೌಡ್ರು

ವಕೀಲರಾಗಿ ವೃತ್ತಿ ಆರಂಭಿಸಿದ್ದ ಡಿ.ಬಿ.ಚಂದ್ರೇಗೌಡ ಅವರು ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದರು. 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. 1977 ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರ ಗಾಂಧಿ ಗೆ ಚಿಕ್ಕಮಗಳೂರಿನಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದರು.

ಇದನ್ನೂ ಓದಿ: DB Chandregowda Passes Away: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ನಿಧನ

ಚಂದ್ರೇಗೌಡರ ರಾಜಕೀಯ ಜರ್ನಿ

ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್, ಮೂರು ಅವಧಿಗೆ ಶಾಸಕ, ಒಂದು-ಅವಧಿಯ ವಿಧಾನಪರಿಷತ್ ಮತ್ತು 3 ಬಾರಿ ಸಂಸತ್ ಸದಸ್ಯರಾಗಿದ್ದರು. ಅವರು ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮತ್ತು ಕರ್ನಾಟಕ ಸರ್ಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವಾರು ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸಿದ್ದರು. ಪ್ರಜಾ ಸಮಾಜವಾದಿ ಪಕ್ಷ, ಜನತಾ ದಳ, ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದಲ್ಲಿದ್ದರು.

  • 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಗೆದ್ದಿದ್ದರು.
  • 1977ರಲ್ಲಿ ಮತ್ತೆ ಅದೇ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದರು.
  • 1978ರಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾ ಗಾಂಧಿಯವರಿಗೆ ಅವಕಾಶ ಮಾಡಿಕೊಟ್ಟಿದ್ದರು.
  • 1978-1983: ಕರ್ನಾಟಕ ವಿಧಾನಪರಿಷತ್​ ಸದಸ್ಯರಾಗಿದ್ದರು. ಬಳಿಕ ದೇವರಾಜ್ ಅರಸ್ ಅವರ ಕ್ರಾಂತಿರಂಗಕ್ಕೆ ಸೇರ್ಪಡೆಯಾಗಿದ್ದರು.
  • 1983ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಶಾಸಕರಾಗಿ(ಜನತಾ ಪಕ್ಷ) ಆಯ್ಕೆಯಾಗಿದ್ದರು.
  • 1983 ರಿಂದ 1985 ರವರೆಗೆ ವಿಧಾನಸಭೆಯಲ್ಲಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.
  • 1986ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು (ಜನತಾದಳ).
  • 1989ರಲ್ಲಿ ಮತ್ತೆ ತೀರ್ಥಹಳ್ಳಿಯಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ (ಜನತಾ ದಳ) ಆಯ್ಕೆಯಾಗಿದ್ದರು.
  • 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
  • 2008ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.
  • 2009ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

Published On - 9:03 am, Tue, 7 November 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್