AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಪಕ್ಕೆ ಅಡ್ಡಿ: ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅಮಾನತು

ಲೋಕಸಭೆಯಲ್ಲಿ ಭದ್ರತಾಲೋಪ ಖಂಡಿಸಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಧರಣಿ ನಡೆಸಿದ್ದರಿಂದ ಇಂದು ಮತ್ತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್​ ಸಹ ಅಮಾನತುಗೊಂಡಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಾಪಕ್ಕೆ ಅಡ್ಡಿ:  ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅಮಾನತು
ಡಿಕೆ ಸುರೇಶ್
ಹರೀಶ್ ಜಿ.ಆರ್​.
| Edited By: |

Updated on: Dec 21, 2023 | 4:21 PM

Share

ನವದೆಹಲಿ, (ಡಿಸೆಂಬರ್ 21): ಲೋಕಸಭೆ (parliament)ಭದ್ರತಾ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ಸ್ಪಷ್ಟನೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದು, ಈ ಸಂಬಂಧ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ವಾಕ್ಸಮರ ನಡೆದಿದೆ. ಇನ್ನು ವಿಪಕ್ಷ ನಾಯಕರು ಒಂದು ಹೆಜ್ಜೆ ಮುಂದೆ ಹೋಗಿ ಸಂಸತಿನಲ್ಲಿ ಪ್ರತಿಭಟನೆಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಡಿಸೆಂಬರ್ 21) ಮತ್ತೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ (DK Suresh)  ಸೇರಿದಂತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದೆ.

ನಿಯಮ ಮೀರಿ ಪ್ರತಿಭಟನೆ ಆರೋಪ ಹಿನ್ನೆಲೆ ಅಮಾನತು ಸಂಸದರನ್ನು ಅಮಾನತು ಮಾಡಲಾಗಿದೆ. ಸಚಿವ ಪ್ರಹ್ಲಾದ್ ಜೋಶಿ ಅಮಾನತು ಪ್ರಸ್ತಾವನೆ ಮಂಡಿಸಿದ್ರು. ಇದರೊಂದಿಗೆ ಉಭಯ ಸದನಗಳಲ್ಲಿ ಈವರೆಗೆ ಒಟ್ಟು 146 ಸಂಸದರನ್ನು ಸಂಸತ್​​​ ಅಧಿವೇಶನದಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಲೋಕಸಭಾ ಕಲಾಪಕ್ಕೆ ಅಡ್ಡಿ; ವಿಪಕ್ಷದ ಇಬ್ಬರು ಸಂಸದರು ಅಮಾನತು

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಪ್ರಜಾಪ್ರಭುತ್ವದ ದೇವಸ್ಥಾನದೊಳಗೆ ಕೆಲವರು ಅಕ್ರಮವಾಗಿ ದಾಳಿ ಮಾಡಿದ್ದಾರೆ. ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರು ಹಾಗೂ ಪ್ರಧಾನಮಂತ್ರಿಗಳು ಮಾತನಾಡಬೇಕು. ಮತ್ತು ತನಿಖೆಯಲ್ಲಿ ಪಾಸ್ ನೀಡಿದವರನ್ನು ಒಳಪಡಿಸಬೇಕು ಎಂದು ಆಗ್ರಹಿಸಿದ್ದೇವೆ. ಇಲ್ಲಿ ಸಂಸದರಿಗೆ ರಕ್ಷಣೆ ಇಲ್ಲ. ಬೇರೆಯವರಿಗೆ ರಕ್ಷಣೆ ಹೇಗೆ ಎಂದು ಪ್ರಶ್ನೆ ಮಾಡಿದ್ದೇವು. ಪ್ರತಿಭಟನೆ ನಡೆಸಿದ ಸಂಸದರನ್ನು ಅಮಾನತು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಯಮಗಳನ್ನು ಗಾಳಿಗೆ ತೂರಿ ಅಮಾನತು ಮಾಡಿದ್ದಾರೆ. ಇದೊಂದು ದುರ್ದೈವದ‌ ಸಂಗತಿ. ನಾವು ಮಾತನಾಡಲು ಸೂಕ್ತವಾದ ಅವಕಾಶ‌ ಕೇಳಿದ್ದೇವು. ಮಾತನಾಡುವ ಹಕ್ಕನ್ನು ಕಸಿಯುವ ಪ್ರಯತ್ನ ಲೋಕಸಭೆ ಮಾಡಲಾಗುತ್ತಿದೆ. ಇದನ್ನು ಖಂಡಿಸಿ ಬಾವಿಗಿಳಿದು ಪ್ರತಿಭಟನೆ ನಡೆಸಿದೆವು. ಇದಕ್ಕೆ ಸ್ಪೀಕರ್ ಅಸಮಧಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಇಂದು ಮೂವರನ್ನು ಅಮಾನತು ಮಾಡಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ಸದಸ್ಯನ ಹಕ್ಕು. ಅದನ್ನು ಕಿತ್ತು ಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಆಡಳಿತ ಪಕ್ಷ ತನ್ನ ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡುತ್ತಿದ್ದಾರೆ. ಆದ್ರೆ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಹಿಂದೆ ಬಿಜೆಪಿ ನಾಯಕರು ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ‌ನಡೆಸಿದ್ದರು. ಇತಿಹಾಸದಲ್ಲಿ ಮೊದಲ ಬಾರಿಗೆ ‌ಇಷ್ಟು ಜನರನ್ನು ಅಮಾನತು ಮಾಡಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಹಿಂದೆ ನಮ್ಮನ್ನು ವ್ಯಂಗ್ಯ ಮಾಡುವಾಗ ಬಿಜೆಪಿ ನಾಯಕರು ಎಂಜಾಯ್ ಮಾಡಿದ್ದಾರೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ