Karnataka New DCM: ಕರ್ನಾಟಕ ಉಪಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ?

ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ.

Karnataka New DCM: ಕರ್ನಾಟಕ ಉಪಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ?
ಆರ್. ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು
Follow us
TV9 Web
| Updated By: ganapathi bhat

Updated on:Jul 27, 2021 | 9:07 PM

ಬೆಂಗಳೂರು: ಮುಖ್ಯಮಂತ್ರಿ ಘೋಷಣೆ ಬಳಿಕ ಮೂವರು ಉಪಮುಖ್ಯಮಂತ್ರಿಗಳ ಹೆಸರು ಪರಿಗಣಿಸಲಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಮೊದಲು ಕಂದಾಯ ಸಚಿವರಾಗಿದ್ದ ಹಾಗೂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಹೆಸರು ಘೋಷಣೆ ಬಳಿಕ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ. ನಿಯೋಜಿತ ಸಿಎಂ, ನಿರ್ಗಮಿತ ಮುಖ್ಯಮಂತ್ರಿಯ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ.

ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಬೆಂಬಲಿಗರಿಂದ ಸಂಭ್ರಮಾಚರಣೆ ಆರಂಭವಾಗಿದೆ. ನೂತನ ಸಿಎಂ ಆಗಿ ಬೊಮ್ಮಾಯಿ ಘೋಷಣೆ ಮಾಡಿರುವ ಕಾರಣ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ನಡೆದಿದೆ. ಬಸವರಾಜ ಬೊಮ್ಮಾಯಿ ಭಾವಚಿತ್ರ ಹಿಡಿದು, ಬೆಂಬಲಿಗರು ನೂತನ ಮುಖ್ಯಮಂತ್ರಿಗೆ ಜೈಕಾರ ಕೂಗಿದ್ದಾರೆ.

ಇದೀಗ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ರಾಜಭವನಕ್ಕೆ ತೆರಳಿದ್ದಾರೆ. ಐವರು ನಾಯಕರೊಂದಿಗೆ ಬೊಮ್ಮಾಯಿ ರಾಜಭವನಕ್ಕೆ ತೆರಳಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಇದನ್ನೂ ಓದಿ: Basavaraj Bommai: ಯಡಿಯೂರಪ್ಪ ಉತ್ತರಾಧಿಕಾರಿ ಬಸವರಾಜ ಬೊಮ್ಮಾಯಿ, ಹೋರಾಟದ ಹಾದಿಯಲ್ಲಿ ಅರಳಿದ ನಾಯಕ

Karnataka New CM: ಬಸವರಾಜ ಬೊಮ್ಮಾಯಿ ಕರ್ನಾಟಕದ ಹೊಸ ಮುಖ್ಯಮಂತ್ರಿ

(Karnataka New DCM R Ashok Govinda Karajola B Sriramulu Karnataka BJP Politics)

Published On - 8:42 pm, Tue, 27 July 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ