AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah in Karnataka: ಲೋಕಸಭೆ ಗೆಲ್ಲಲು ಅಮಿತ್ ಶಾ ಮಾಸ್ಟರ್ ಪ್ಲ್ಯಾನ್, ಬಿಜೆಪಿ ನಾಯಕರಿಗೆ ಕೊಟ್ಟ ಸಲಹೆಗಳು ಇಲ್ಲಿವೆ

ಲೋಕಸಭೆ ಚುನಾವಣೆ ಗೆಲ್ಲುವುದಕ್ಕಾಗಿ ರಣತಂತ್ರ ರೂಪಿಸಲು ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ನಾಯಕರ ಜತೆ ಸಭೆ ನಡೆಸಿದರು. ಇದೇ ವೇಳೆ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಅವರು ಒಂದಷ್ಟು ಸಲಹೆ-ಸೂಚನೆಗಳನ್ನು ನೀಡಿದರು. ಆ ಕುರಿತ ವಿವರ ಇಲ್ಲಿದೆ.

Amit Shah in Karnataka: ಲೋಕಸಭೆ ಗೆಲ್ಲಲು ಅಮಿತ್ ಶಾ ಮಾಸ್ಟರ್ ಪ್ಲ್ಯಾನ್, ಬಿಜೆಪಿ ನಾಯಕರಿಗೆ ಕೊಟ್ಟ ಸಲಹೆಗಳು ಇಲ್ಲಿವೆ
Amit Shah
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on: Apr 02, 2024 | 1:27 PM

Share

ಬೆಂಗಳೂರು, ಏಪ್ರಿಲ್ 2: ಲೋಕಸಭೆ ಚುನಾವಣೆಗೆ (Lok Sabha Elections) ಸಿದ್ಧತೆ ಸಂಬಂಧ ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಿಜೆಪಿ (BJP) ಹಾಗೂ ಜೆಡಿಎಸ್ ನಾಯಕರ ಜತೆ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಿದರು. ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸೇರಿದಂತೆ ಇತರ ನಾಯಕರ ಜತೆ ಸಮಾಲೋಚನೆ ನಡೆಸಿದ ಶಾ, ಹಲವು ಸೂಚನೆಗಳನ್ನು ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದಕ್ಕಾಗಿ ಹಲವು ತಂತ್ರಗಳನ್ನು ರೂಪಿಸಿರುವ ಶಾ, ಹಿಂದುಳಿದ ಸಮುದಾಯಗಳ ಸೆಳೆಯಲು ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದಾರೆ.

ಬಿಜೆಪಿ, ಜೆಡಿಎಸ್ ನಾಯಕರಿಗೆ ಅಮಿತ್ ಶಾ ಸಲಹೆಗಳೇನು?

  • ಹಿಂದುಳಿದ ಸಮುದಾಯಗಳ ಸೆಳೆಯಲು ಕಾರ್ಯ ಪ್ರವೃತ್ತರಾಗಿ.
  • ಹಿಂದುಳಿದ ಸಮುದಾಯಗಳು ಇರುವಂಥ ಕ್ಷೇತ್ರಗಳ ಮೇಲೆ ಹೆಚ್ಚು ನಿಗಾ ವಹಿಸಿ ಕೆಲಸ ಮಾಡಿ.
  • ತಳ ಸಮುದಾಯಗಳ ಕ್ಷೇತ್ರಗಳಲ್ಲಿ ಮತ್ತಷ್ಟು ಸಂಘಟನೆ ಚುರುಕುಗೊಳಿಸಿ.
  • ಮೀಸಲಾತಿ ಇರುವ ಕ್ಷೇತ್ರಗಳಲ್ಲಿ ಹೆಚ್ಚು ಸಮಾವೇಶಗಳನ್ನು, ರೋಡ್ ಶೋಗಳನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಿ.
  • ಪ್ರಬಲ ಸಮುದಾಯಗಳ ಜೊತೆಗೆ ಎಲ್ಲಾ ಹಿಂದುಳಿದ ಸಮುದಾಯಗಳ ಮತಗಳನ್ನು ಕ್ರೂಡೀಕರಿಸಬೇಕು. ಈ ನಿಟ್ಟಿನಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಹೃತ್ಪೂರ್ವಕವಾಗಿ ಕೆಲಸ ಮಾಡಬೇಕು.
  • ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು.
  • ತಳಮಟ್ಟದ ಕಾರ್ಯಕರ್ತರಿಂದ ಮುಖಂಡರವರೆಗೂ ಯಾವುದೇ ಭಿನ್ನಾಭಿಪ್ರಾಯ, ಅಸಮಧಾನ ಇರಬಾರದು.
  • ಒಂದು ವೇಳೆ ಅಸಮಾಧಾನ ಇದ್ದರೂ ಬಗೆಹರಿಸಿಕೊಳ್ಳುವಂಥ ಕೆಲಸವನ್ನು ಎರಡು ಪಕ್ಷದ ಹಿರಿಯರು ಮಾಡಬೇಕು.

ಬೆಂಗಳೂರಿನ ಹೋಟೆಲ್​ನಲ್ಲಿ ನಡೆದ ಸಭೆಯ ಬಳಿಕ ಅಮಿತ್ ಶಾ, ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಗೆ ಹಾಜರಾದರು. ಇದೇ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ವೇದಿಕೆಯಲ್ಲಿ ಶಾ ಕಾಲು ಮುಟ್ಟಿ ನಮಸ್ಕರಿಸಿದರು. ವೇದಿಕೆಗೆ ಬಂದ ಕೂಡಲೇ ಸಮಯ ವಿಳಂಬ ಮಾಡದೇ ವೇದಿಕೆ ಮೇಲಿದ್ದ ಮುಖಂಡರನ್ನು ಕರೆದು ಜ್ಯೋತಿ ಬೆಳಗಿಸಿದ ಅಮಿತ್ ಶಾ, ಸಮಾವೇಶಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಅಮಿತ್ ಶಾ ಬ್ರೇಕ್‌ಫಾಸ್ಟ್ ಮೀಟಿಂಗ್; ಲೋಕ ಗೆಲ್ಲಲು ರಣತಂತ್ರ

ಅಮಿತ್ ಶಾಗೆ ಶಾಲು ಹೊದಿಸಿ, ಪೇಟ ತೊಡಿಸಿ, ಶ್ರೀಕೃಷ್ಣ ಮೂರ್ತಿ ನೀಡಿ ಸನ್ಮಾನ ಮಾಡಲಾಯಿತು. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ಅಭ್ಯರ್ಥಿಗಳು, ಪ್ರಮುಖರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ