ಬೆಂಗಳೂರು, ಏಪ್ರಿಲ್ 2: ಲೋಕಸಭೆ ಚುನಾವಣೆಗೆ (Lok Sabha Elections) ಸಿದ್ಧತೆ ಸಂಬಂಧ ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಿಜೆಪಿ (BJP) ಹಾಗೂ ಜೆಡಿಎಸ್ ನಾಯಕರ ಜತೆ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದರು. ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಇತರ ನಾಯಕರ ಜತೆ ಸಮಾಲೋಚನೆ ನಡೆಸಿದ ಶಾ, ಹಲವು ಸೂಚನೆಗಳನ್ನು ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದಕ್ಕಾಗಿ ಹಲವು ತಂತ್ರಗಳನ್ನು ರೂಪಿಸಿರುವ ಶಾ, ಹಿಂದುಳಿದ ಸಮುದಾಯಗಳ ಸೆಳೆಯಲು ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಹೋಟೆಲ್ನಲ್ಲಿ ನಡೆದ ಸಭೆಯ ಬಳಿಕ ಅಮಿತ್ ಶಾ, ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಗೆ ಹಾಜರಾದರು. ಇದೇ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ವೇದಿಕೆಯಲ್ಲಿ ಶಾ ಕಾಲು ಮುಟ್ಟಿ ನಮಸ್ಕರಿಸಿದರು. ವೇದಿಕೆಗೆ ಬಂದ ಕೂಡಲೇ ಸಮಯ ವಿಳಂಬ ಮಾಡದೇ ವೇದಿಕೆ ಮೇಲಿದ್ದ ಮುಖಂಡರನ್ನು ಕರೆದು ಜ್ಯೋತಿ ಬೆಳಗಿಸಿದ ಅಮಿತ್ ಶಾ, ಸಮಾವೇಶಕ್ಕೆ ಚಾಲನೆ ನೀಡಿದರು.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಅಮಿತ್ ಶಾ ಬ್ರೇಕ್‌ಫಾಸ್ಟ್ ಮೀಟಿಂಗ್; ಲೋಕ ಗೆಲ್ಲಲು ರಣತಂತ್ರ
ಅಮಿತ್ ಶಾಗೆ ಶಾಲು ಹೊದಿಸಿ, ಪೇಟ ತೊಡಿಸಿ, ಶ್ರೀಕೃಷ್ಣ ಮೂರ್ತಿ ನೀಡಿ ಸನ್ಮಾನ ಮಾಡಲಾಯಿತು. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ಅಭ್ಯರ್ಥಿಗಳು, ಪ್ರಮುಖರು ಸಮಾವೇಶದಲ್ಲಿ ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ