Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳು ಕಳೆದರೂ ಬರ ಪರಿಹಾರ ನೀಡಿಲ್ಲ, ಅಮಿತ್ ಶಾಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ: ಸಿದ್ದರಾಮಯ್ಯ ಪ್ರಶ್ನೆ

ಅಮಿತ್ ಶಾ ಅವರೆ ನೀವು ಕರ್ನಾಟಕಕ್ಕೆ ಬರುವುದು ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ಎಂಬ ಪ್ರಶ್ನೆ ಕನ್ನಡಿಗರ ಮನಸ್ಸಿನಲ್ಲಿ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಿ ಆರು ವರ್ಷಗಳಾಯಿತು. ಇಲ್ಲಿಯವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ, ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

4 ತಿಂಗಳು ಕಳೆದರೂ ಬರ ಪರಿಹಾರ ನೀಡಿಲ್ಲ, ಅಮಿತ್ ಶಾಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ: ಸಿದ್ದರಾಮಯ್ಯ ಪ್ರಶ್ನೆ
ಅಮಿತ್​ ಶಾ, ಸಿದ್ದರಾಮಯ್ಯ
Follow us
Anil Kalkere
| Updated By: ವಿವೇಕ ಬಿರಾದಾರ

Updated on: Apr 02, 2024 | 2:28 PM

ಬೆಂಗಳೂರು, ಏಪ್ರಿಲ್​ 02: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ ಅಥವಾ ಕಿತ್ತುಕೊಳ್ಳುವುದಕ್ಕೋ? ಬರ ಪರಿಹಾರಕ್ಕೆ ಮನವಿ ಮಾಡಿ ನಾಲ್ಕು ತಿಂಗಳು ಕಳೆದರೂ ನಯಾಪೈಸೆ ಕೊಟ್ಟಿಲ್ಲ. ಹಿಂದೆ ಬಿಜೆಪಿಯೇ (BJP) ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗಲೂ ಹೀಗೆಯೇ ಅನ್ಯಾಯ ಮಾಡಿದ್ದಿರಿ. ನಿಮಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2019ರಲ್ಲಿ ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ? ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಿ ಆರು ವರ್ಷಗಳಾಯಿತು. ಇಲ್ಲಿಯವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ, ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು ಎಂದು ಕಿಡಿಕಾರಿದರು.

ನೀವು ಕರ್ನಾಟಕಕ್ಕೆ ಬರುವುದು ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ಎಂಬ ಪ್ರಶ್ನೆ ಕನ್ನಡಿಗರ ಮನಸ್ಸಿನಲ್ಲಿ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು 33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ 17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕ ಸರ್ಕಾರ ಬೇಡಿಕೆ ಇಟ್ಟಿದೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಾನು ಇರಬೇಕೋ, ಬೇಡ್ವೋ? ವರುಣದಲ್ಲಿ ಸಿಎಂ ಎಮೋಷನಲ್ ಕಾರ್ಡ್​ ಹಿಂದೆ ಇದೆಯಾ ಆ 9 ಸಾವಿರ ಮತಗಳ ಟೆನ್ಷನ್​​

ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್​ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನು ಕರೆದಿಲ್ಲ, ಬರಪರಿಹಾರವನ್ನು ನೀಡಿಲ್ಲ ಯಾಕೆ?ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ ಬಂದಿತ್ತು. ಇದರಿಂದಾಗಿ ಅಂದಾಜು 30,000 ಕೋಟಿಯಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ 1,435 ಕೋಟಿ ಪರಿಹಾರ ನೀಡಿದೆ. ಅದೇ ವರ್ಷ ಮಹಾರಾಷ್ಟ್ರಕ್ಕೆ 8,195 ಕೋಟಿ ಮತ್ತು ಗುಜರಾತ್‌ಗೆ 3,894 ಕೋಟಿ ಪರಿಹಾರ ನೀಡಲಾಗಿತ್ತು ಎಂದು ವಾಗ್ದಾಳಿ ಮಾಡಿದರು.

ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್. ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನ ನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡದ್ದು ಗುಜರಾತ್​ನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಅನ್ನು ಗುಜರಾತ್​ನ ಅಮುಲ್ ಜೊತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯ ಮಾಡಿ, ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ? ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ