AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ: ಯಡಿಯೂರಪ್ಪ

ಗುರುವಾರ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿತ್ತು. ಮತ್ತು ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ, ತೆರಿಗೆ ಹಣ ನೀಡದೆ ಚೊಂಬು ನೀಡಿದೆ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರ ಜಾಹಿರಾತು ನೀಡುತ್ತಿದೆ. ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್​ ಯಡಿಯೂರಪ್ಪ, ಸದಾನಂದಗೌಡ ಮತ್ತು ಬಸವರಾಜ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ: ಯಡಿಯೂರಪ್ಪ
ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Apr 21, 2024 | 12:14 PM

Share

ಬೆಂಗಳೂರು, ಏಪ್ರಿಲ್​ 21: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ (Siddaramaiah Government) ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ಕೊಲೆ, ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇದೊಂದು ಕ್ರೂರ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ (BS Yediyurappa) ಕಿಡಿಕಾರಿದರು. ಬೆಂಗಳೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆ ನಡೆದಿದೆ. ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಕೊಡಿಸಿಲ್ಲ ಎಂದು ವಾಗ್ದಾಳಿ ಮಾಡಿದರು.

ಭಾರತದ ಭವಿಷ್ಯಕ್ಕೆ ಮತ ಕೇಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಕಾರು ಹಾಯಿಸಿದ್ದಾರೆ. ಕಲಾವಿದರಾದ ಹರ್ಷಿಕಾ ಪೂಣಚ್ಚ ಮೇಲೆ ಹಲ್ಲೆ ಮಾಡಿದ್ದಾರೆ. ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಅಮಾನುಷವಾಗಿ ನಡೆದುಕೊಂಡರೂ ಕ್ರಮ ಕೈಗೊಂಡಿಲ್ಲ. ಕೋಲಾರ ಮತ್ತು ಶಿವಮೊಗ್ಗದಲ್ಲಿ ಔರಂಗಜೇಬ್ ಕಟೌಟ್​​ ಹಾಕಿದ್ದರು. ಮಂಡ್ಯದಲ್ಲಿ ಪೊಲೀಸ್​ ಅಧಿಕಾರಿಗಳ ಮೂಲಕ ಹನುಮ ಧ್ವಜ ಇಳಿಸಿದ್ದಾರೆ. ಇದೊಂದು ಕ್ರೂರ ಸರ್ಕಾರ. ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ಮಾಡಿದರು.

ಜನರು ಸರ್ಕಾರದ ಗ್ಯಾರಂಟಿ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ. ಜನರಿಗೆ ನೀರು, ವಿದ್ಯುತ್ ಗ್ಯಾರಂಟಿ ಇಲ್ಲ. ತೆರಿಗೆ ಹೆಚ್ಚಳವಾಗಿದೆ. ಸಿದ್ದರಾಮಯ್ಯ ಸರ್ಕಾರ ಮತಾಂಧ ಶಕ್ತಿಯನ್ನು ತಮ್ಮ ಆಡಳಿತದ ಭಾಗವಾಗಿ ಮಾಡಿಕೊಂಡಿದೆ. ಸರ್ಕಾರ ಬಂದು ಒಂದೇ ವರ್ಷದಲ್ಲಿ ಮತಾಂಧರು ರಾಜ್ಯವನ್ನು ಯುದ್ಧಭೂಮಿ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜ್ಯದ ಎಲ್ಲ 28 ಸ್ಥಾನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಕಾಣಲಿದ್ದಾರೆ: ಬಿಎಸ್ ಯಡಿಯೂರಪ್ಪ

ರೈತರ ಆತ್ಮಹತ್ಯೆ ಹೆಚ್ಚಳವಾಗಿದೆ. ಕಿಸಾನ್ ಸಮ್ಮಾನ್ ಯೋಜನೆಗೆ ನೀಡುತ್ತಿದ್ದ ಹಣ ನಿಲ್ಲಿಸಿದ್ದಾರೆ. ಇದೊಂದು ಕಲ್ಲು ಬಂಡೆ ಸರ್ಕಾರ. ಸರ್ಕಾರ ದಿವಾಳಿಯಾಗಿದೆ. ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ. ನೀರಾವರಿ ವ್ಯವಸ್ಥೆ ನೆಲ ಕಚ್ಚಿದೆ. ಕನಿಷ್ಠ ಒಂದು ಕಿಮೀನಷ್ಟೂ ರಸ್ತೆ ಮಾಡಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಾಹೀರಾತು ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್​ ನಾಯಕರ ಕಾರ್ಯಕ್ರಮಗಳಲ್ಲಿ ಜನ ಸೇರುತ್ತಿಲ್ಲ. ಅದಕ್ಕೆ ಜಾಹೀರಾತು ನೀಡುತ್ತಿದ್ದಾರೆ. ಪೊಳ್ಳು ಭರವಸೆ ನೀಡುವ ಜಾಹೀರಾತು ಯಾರು ನಂಬಲ್ಲ. ಚುನಾವಣೆ ಬಳಿಕ ನಾವೆಲ್ಲ ಸೇರೋಣ. ಆಗ ವಾತಾವರಣ ಸ್ಪಷ್ಟವಾಗಿ ತಿಳಿಯುತ್ತೆ. ಜನ ಮೋದಿ ಮೋದಿ ಅಂತಿದ್ದಾರೆ. ಕಾಂಗ್ರೆಸ್​ನವರು ಹತಾಶರಾಗಿದ್ದಾರೆ. ಕಾಂಗ್ರೆಸ್​ನವರು ಗೆಲ್ಲುವ ನಾಲ್ಕೈದು ಕ್ಷೇತ್ರ ಯಾವುದು ಅಂತ ತಿಳಿಸಲಿ ಎಂದರು.

ಇಡೀ ದೇಶದಲ್ಲಿ ಮೋದಿ ವಾತಾವರಣವಿದೆ. ಕರ್ನಾಟಕದಲ್ಲಿ ಕಾಂಗ್ರೆಸ್​ ಒಂದೂ ಕ್ಷೇತ್ರ ಕೂಡ ಗೆಲ್ಲಲ್ಲ. ಇಂದಿನಿಂದ ನಾನು ಮತ್ತೆ ಪ್ರವಾಸ ಮಾಡುತ್ತಿದ್ದೇನೆ. ನಮ್ಮ ಕಾರ್ಯಕ್ರಮಗಳಲ್ಲಿ ಜನರು ನಿರೀಕ್ಷೆಗೆ ಮೀರಿ‌ ಸೇರುತ್ತಿದ್ದಾರೆ. ಜನರು ನಮ್ಮ ಪರವಾಗಿ ಇದ್ದಾರೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:08 pm, Sun, 21 April 24

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್