ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ: ಅರುಣ್ ಸಿಂಗ್
Karnataka Next CM: ಬಿಜೆಪಿ ಸಂಸದೀಯ ಮಂಡಳಿ ಸಭೆ ಬಗ್ಗೆ ನಿರ್ಧಾರವಾಗಿಲ್ಲ. ಬೆಂಗಳೂರಿಗೆ ನಾನು ತೆರಳುವ ಬಗ್ಗೆಯೂ ಇನ್ನೂ ನಿರ್ಧರಿಸಿಲ್ಲ ಎಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಿಎಂ ಬಗ್ಗೆ ಚರ್ಚೆ ಮಾಡಲಾಗುವುದು. ಬಳಿಕ, ಕರ್ನಾಟಕ ಸಿಎಂ ಬಗ್ಗೆ ಸಂಸದೀಯ ಮಂಡಳಿ ಸಭೆ ನಿರ್ಧಾರ ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.
ಆದರೆ, ಬಿಜೆಪಿ ಸಂಸದೀಯ ಮಂಡಳಿ ಸಭೆ ಬಗ್ಗೆ ನಿರ್ಧಾರವಾಗಿಲ್ಲ. ಬೆಂಗಳೂರಿಗೆ ನಾನು ತೆರಳುವ ಬಗ್ಗೆಯೂ ಇನ್ನೂ ನಿರ್ಧರಿಸಿಲ್ಲ ಎಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಮುಂದೆ ಮುಖ್ಯಮಂತ್ರಿ ಆಗುವವರಿಗೆ ಯಡಿಯೂರಪ್ಪ ಸ್ಫೂರ್ತಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯಿಂದ ನಮಗೆ ಬೇಸರವಾಗಿಲ್ಲ. ನಮ್ಮ ಕುಟುಂಬದ ಯಾರಿಗೂ ಬೇಸರವಾಗಿಲ್ಲ ಎಂದು ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರಿ ಅರುಣಾದೇವಿ ಟಿವಿ9ಗೆ ಹೇಳಿಕೆ ನೀಡಿದ್ದಾರೆ. ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ. ರಾಜಕೀಯ ನಿರ್ಧಾರಗಳ ಬಗ್ಗೆ ಅವರು ಕುಟುಂಬಕ್ಕೆ ಮಾಹಿತಿ ಹೇಳುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.
ಕೊವಿಡ್ ಸಂಕಷ್ಟದಲ್ಲಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನಗುಮುಖದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ರಾತ್ರಿ ತುಂಬಾ ಆಲೋಚನೆ ಮಾಡಿ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ. ಯಾವುದು ಸರಿ ಅನಿಸುತ್ತೆ ಅದನ್ನು ಅವರೇ ನಿರ್ಧರಿಸುತ್ತಾರೆ. ರಾಜೀನಾಮೆ ನೀಡಿದ ಬಗ್ಗೆಯೇ ಬಿಎಸ್‌ವೈ ಚಿಂತಿಸುತ್ತಿಲ್ಲ ಎಂದು ಅರುಣಾದೇವಿ ಹೇಳಿದ್ದಾರೆ.
ನಾಳೆಯಿಂದ ಏನು ಮಾಡಬಹುದು ಎಂದು ಅವರು ಚಿಂತಿಸುತ್ತಿದ್ದಾರೆ. ಅಧಿಕಾರ ಇರಲಿ, ಇಲ್ಲದಿರಲಿ ಹೋರಾಟ ಮಾಡಿದ್ದಾರೆ. ರೈತರು, ಬಡವರ ಪರ ನಿರಂತರ ಹೋರಾಟ ಮಾಡ್ತಿದ್ದಾರೆ. ಮುಂದೆ ಮುಖ್ಯಮಂತ್ರಿ ಆಗುವವರಿಗೆ ಯಡಿಯೂರಪ್ಪ ಸ್ಫೂರ್ತಿ ಎಂದು ಟಿವಿ9ಗೆ ಬಿಎಸ್‌ವೈ ಪುತ್ರಿ ಅರುಣಾದೇವಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ: ಬಿಎಸ್ ಯಡಿಯೂರಪ್ಪ ಪುತ್ರಿ ಅರುಣಾದೇವಿ ಪ್ರತಿಕ್ರಿಯೆ
(Karnataka Next CM after BS Yediyurappa State BJP Incharge Arun Singh)
Published On - 3:27 pm, Mon, 26 July 21