AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದ್ದಿ ವಿಶ್ಲೇಷಣೆ: ಶಾಸಕ ರಮೇಶ್ ಜಾರಕಿಹೊಳಿ ಈಗ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಇಲ್ಲಿದೆ ಕುತೂಹಲಕರ ವಿವರ

Karnataka Politics: ಇಂದು ಅಥವಾ ನಾಳೆ ಮುಂಬೈನಲ್ಲಿ ಮಹಾರಾಷ್ಟ್ರ ಬಿಜೆಪಿ ನಾಯಕ, ಅಲ್ಲಿಯ ವಿಪಕ್ಷ ನಾಯಕ ದೇವೆಂದ್ರ ಪಡ್ನವಿಸ್​ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಟಿವಿ9ಗೆ ತಲುಪಿದೆ.

ಸುದ್ದಿ ವಿಶ್ಲೇಷಣೆ: ಶಾಸಕ ರಮೇಶ್ ಜಾರಕಿಹೊಳಿ ಈಗ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಇಲ್ಲಿದೆ ಕುತೂಹಲಕರ ವಿವರ
ಸಾಂಕೇತಿಕ ಚಿತ್ರ
Follow us
Guruganesh Bhat
| Updated By: guruganesh bhat

Updated on:Jun 20, 2021 | 4:20 PM

ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಸದ್ಯ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗಳಿಗೆ ರಾಜ್ಯದ ಸಾವಿರಾರು ರಾಜಕೀಯ ಆಸಕ್ತರ ಮನಸು ಉತ್ತರ ಹುಡುಕುತ್ತಿರಬಹುದು. ಅವರ ಸುತ್ತ ಸಿಡಿ ಪ್ರಕರಣ ಸುತ್ತಿಕೊಂಡಿರುವ ಈ ಹೊತ್ತಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲೂ ನಾಯಕತ್ವ ಬದಲಾವಣೆಯ ಪ್ರಹಸನಗಳು ಅತ್ಯಂತ ವಿಫುಲವಾಗಿ ನಡೆಯುತ್ತಿವೆ. ಯಡಿಯೂರಪ್ಪ ಈಗ ಮುಖ್ಯಮಂತ್ರಿ ಗಾದಿಯಲ್ಲಿ ಕೂರಲು ಕಾರಣರಲ್ಲಿ ಅವರೂ ಒಬ್ಬರು.  ಬಣ ರಾಜಕೀಯದಿಂದ ಇದೀಗ ಸಿಎಂ ಯಡಿಯೂರಪ್ಪ ಅವರ ಖುರ್ಚಿಯೂ ಕೊಂಚ ಅಲುಗಾಡುತ್ತಿದೆ ಎಂಬುದನ್ನು ಶಾಸಕ ರಮೇಶ್ ಜಾರಕಿಹೊಳಿ ಅರಿತಿದ್ದಾರೆ. ಆದರೂ ಸದ್ಯ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಅವರು ಮತ್ತೆ ಸಚಿವ ಸ್ಥಾನ ಪಡೆಯಲು ಲಾಬಿ ಆರಂಭಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸಿಡಿ ಪ್ರಕರಣದ ಪ್ರಗತಿಯ ಬಗ್ಗೆ ಶಾಸಕ ರಮೇಶ್ ಜಾರಕಿಹೊಳಿಗೆ ಅಸಮಾಧಾನ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲದೇ, ರಾಜ್ಯ ಬಿಜೆಪಿ ನಾಯಕರ ಬಗ್ಗೆ ರಮೇಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ. ಇಂದು ಅಥವಾ ನಾಳೆ ಮುಂಬೈನಲ್ಲಿ ಮಹಾರಾಷ್ಟ್ರ ಬಿಜೆಪಿ ನಾಯಕ, ಅಲ್ಲಿಯ ವಿಪಕ್ಷ ನಾಯಕ ದೇವೆಂದ್ರ ಪಡ್ನವಿಸ್​ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಟಿವಿ9ಗೆ ತಲುಪಿದೆ.

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ ಮತ್ತೆ ತಮ್ಮನ್ನು ಸೇರಿಸಿಕೊಳ್ಳುವಂತೆ ಮಹಾರಾಷ್ಟ್ರ ಬಿಜೆಪಿ ನಾಯಕ ದೇವೆಂದ್ರ ಪಡ್ನವಿಸ್ ಮೂಲಕ ಒತ್ತಡ ಹೇರುವ ಕಾರ್ಯತಂತ್ರವನ್ನು ರಮೇಶ್ ಜಾರಕಿಹೊಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಒತ್ತಡ ಸೃಷ್ಟಿಸಲು ಅವರು ಕೆಲವು ಪ್ರಮುಖ ಕಾರಣಗಳನ್ನೇ ಹುಡುಕಿಕೊಂಡಿದ್ದಾರೆ.

ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

ಬೆಳಗಾವಿಯ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ದೊಡ್ಡ ಪಾತ್ರ ವಹಿಸಿದ್ದರು. ಇದನ್ನು ರಮೇಶ್ ಜಾರಕಿಹೊಳಿ ಅಂಕಿ ಅಂಶಗಳ ಮೂಲಕವೇ ಮುಂದಿಡಲಿದ್ದಾರೆ. ಅವರು ಪ್ರತಿನಿಧಿಸುವ ಗೋಕಾಕ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ 27ಸಾವಿರಕ್ಕೂ ಹೆಚ್ಚಿನ ಮತಗಳ ಲೀಡ್ ಬಂದಿತ್ತು. ಸಿಡಿ ಪ್ರಕರಣ ಹೊರಬಿದ್ದ ಕೆಲದಿನಗಳಲ್ಲೇ ಈ ಚುನಾವಣೆ ನಡೆದಿದ್ದರೂ ಗೋಕಾಕ್​ನಲ್ಲಿ ಬಿಜೆಪಿಗೆ ಮುನ್ನಡೆ ಒದಗಿಸಿಕೊಡಲು ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದರು. ಇದು ತಾನು ಜನರ ಮನಸಲ್ಲಿ ನೆಲಕಚ್ಚಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ ಎಂಬುದು ಅವರ ವಾದ. ಆದರೂ ತನ್ನನ್ನು ಸಂಪುಟಕ್ಕೆ ಸೇರಿಸಿಕೊಂಡಿಲ್ಲ ಎಂಬುದು ಸದ್ಯದ ಅಸಮಾಧಾನ. ಹೀಗಾಗಿಯೇ ಶಾಸಕ ರಮೇರ್ ಜಾರಕಿಹೊಳಿ ತೆರೆಮರೆಯಲ್ಲಿ ಸಂಪುಟಕ್ಕೆ ಸೇರಲು ಕಸರತ್ತು ನಡೆಸುತ್ತಿದ್ದಾರೆ.

ಸಿಡಿ ಪ್ರಕರಣದಲ್ಲಿ ಯುವತಿಯ ಜತೆ ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸಿದ್ದೆ, ಅತ್ಯಾಚಾರ ಮಾಡಿಲ್ಲ ಎಂದು ಎಸ್​ಐಟಿ ತನಿಖೆಯಲ್ಲಿ ಅವರು ಹೇಳಿರುವುದು ಸಹ ಸಚಿವ ಸ್ಥಾನವನ್ನು ಮರು ಗಿಟ್ಟಿಸಿಕೊಳ್ಳುವ ಪ್ರಯತ್ನದ ಭಾಗವೇ ಆಗಿರುವ ಸಾಧ್ಯತೆಯಿದೆ. ಈ ಹೇಳಿಕೆಯ ಮೂಲಕ ಸಿಡಿ ಪ್ರಕರಣವನ್ನು ಇತ್ಯರ್ಥಗೊಳಿಸಿ ಮತ್ತೊಮ್ಮೆ ಸಿಎಂ ಯಡಿಯೂರಪ್ಪರ ಕ್ಯಾಬಿನೆಟ್​ಗೆ ಮತ್ತೆ ಜಿಗಿಯುವ ಯತ್ನ ಅವರದು. ಜತೆಗೆ ಸಚಿವ ಸ್ಥಾನ ಪಡೆಯಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಬಲ ಅಸ್ತ್ರ ಪ್ರಯೋಗಕ್ಕೂ ರಮೇಶ್ ಜಾರಕಿಹೊಳಿ ಮುಂದಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ವೈಯಕ್ತಿಕ ಹೇಳಿಕೆ: ಜಮೀರ್ ಅಹ್ಮದ್

(Karnataka Politics analysis where is Ramesh Jarkiholi and what’s he doing in Mumbai)

Published On - 4:16 pm, Sun, 20 June 21

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ