BJP Meeting: ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ, ಇಂದಿನ ಸಭೆಯಲ್ಲಿ ಕಾರ್ಯಸೂಚಿಯ ಬಗ್ಗೆ ಚರ್ಚೆ
ಕರ್ನಾಟಕದಲ್ಲಿ ಪ್ರತಿ ಅಧಿಕಾರ ಕೇಂದ್ರವನ್ನೂ ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ಬಿಜೆಪಿಯ ಮೇಲುಗೈ ಇರುವಂತೆ ಮಾಡಬೇಕು ಎಂಬ ಹೈಕಮಾಂಡ್ ನಿರ್ದೇಶನದ ಹಿನ್ನೆಲೆಯಲ್ಲಿ ಇಂದಿನ ಸಭೆಯು ಮಹತ್ವ ಪಡೆದುಕೊಂಡಿದೆ.
ಬೆಂಗಳೂರು: ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳು ಮತ್ತು ವಿಧಾನಸಭೆ ಚುನಾವಣೆಗೆ (Karnataka Legislative Assembely Election 2023) ಬಿಜೆಪಿ ಈಗಾಗಲೇ ತಯಾರಿ ಆರಂಭಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ಬಳಿಯ ರೆಸಾರ್ಟ್ನಲ್ಲಿ ಚಿಂತನ-ಮಂಥನ ಶಿಬಿರದ ಹೆಸರಿನಲ್ಲಿ ಶುಕ್ರವಾರ (ಜುಲೈ 15) ನಡೆಯಲಿರುವ ಪ್ರಮುಖರ ಸಭೆಯಲ್ಲಿ ಚುನಾವಣಾ ಕಾರ್ಯಸೂಚಿ ಸಿದ್ಧಪಡಿಸಲು ಬಿಜೆಪಿ ಮುಂದಾಗಿದೆ. ಕರ್ನಾಟಕದಲ್ಲಿ ಪ್ರತಿ ಅಧಿಕಾರ ಕೇಂದ್ರವನ್ನೂ ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ಬಿಜೆಪಿಯ ಮೇಲುಗೈ ಇರುವಂತೆ ಮಾಡಬೇಕು ಎಂಬ ಹೈಕಮಾಂಡ್ ನಿರ್ದೇಶನದ ಹಿನ್ನೆಲೆಯಲ್ಲಿ ಇಂದಿನ ಸಭೆಯು ಮಹತ್ವ ಪಡೆದುಕೊಂಡಿದೆ.
ಕರ್ನಾಟಕ ಬಿಜೆಪಿಯ ಚುನಾವಣಾ ಕಾರ್ಯಸೂಚಿ ಸಿದ್ಧಪಡಿಸಲಿರುವ ಸಭೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೇಂದ್ರ ಸಚಿವರು, ರಾಜ್ಯದ ಸಚಿವರು ಮತ್ತು ಕೋರ್ ಕಮಿಟಿ ಸದಸ್ಯರು ಸೇರಿದಂತೆ ಸುಮಾರು 60 ಜನರು ಭಾಗವಹಿಸಲಿದ್ದಾರೆ.
ಪಕ್ಷ ಹಾಗೂ ಸರ್ಕಾರದ ನಡುವಿನ ಸಮನ್ವಯತೆ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ, ಇತ್ತೀಚಿನ ಚುನಾವಣಾ ಫಲಿತಾಂಶದ ಪರಿಣಾಮ, ಭವಿಷ್ಯದ ಚುನಾವಣೆಗಳಿಗೆ ಪಕ್ಷವನ್ನು ಸನ್ನದ್ದಗೊಳಿಸುವ ಕುರಿತು ಸಮಾಲೋಚನಾ ಸಭೆಯಲ್ಲಿ ವಿಸ್ತೃತ ಚರ್ಚೆ, ಆತ್ಮಾವಲೋಕನ ಪ್ರಯತ್ನ ನಡೆಯಲಿದೆ. ಇದೇ ಸಭೆಯಲ್ಲಿ ಸಚಿವರ ವರ್ಷದ ಸಾಧನೆ, ಇಲಾಖೆಗಳಲ್ಲಿನ ಪ್ರಗತಿ, ಜನಪ್ರಿಯತೆ ಕುರಿತು ಕೂಡಾ ಚರ್ಚೆ ನಡೆಯುವ ನಿರೀಕ್ಷೆಯಿದೆ.
Published On - 10:45 am, Fri, 15 July 22