Karnataka Politics: ಸಿಎಂ ಸ್ಥಾನ ಉಳಿಸಿಕೊಳ್ಳಲು ವಲಸಿಗ ಸಚಿವರ ಮೂಲಕ ಒತ್ತಡ ಹಾಕಿದರಾ ಯಡಿಯೂರಪ್ಪ?

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಇಂದು ಸಚಿವ ಸಂಪುಟ ಸಭೆ ಮುಗಿಯುತ್ತಿದ್ದಂತೆ ವಲಸಿಗ ಸಚಿವರೆಲ್ಲರೂ ಒಟ್ಟಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Karnataka Politics: ಸಿಎಂ ಸ್ಥಾನ ಉಳಿಸಿಕೊಳ್ಳಲು ವಲಸಿಗ ಸಚಿವರ ಮೂಲಕ ಒತ್ತಡ ಹಾಕಿದರಾ ಯಡಿಯೂರಪ್ಪ?
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 22, 2021 | 6:23 PM

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಜುಲೈ 25ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಮಠಾಧೀಶರು ಸಿಎಂ ಯಡಿಯೂರಪ್ಪನವರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಕೆಲವು ದಿನಗಳಿಂದ ವಿವಿಧ ಸಮುದಾಯಗಳ ಮಠಾಧೀಶರು ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯಬೇಕೆಂದು ಬಹಿರಂಗವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ. ಅದರ ಬೆನ್ನಲ್ಲೇ ವಲಸಿಗ ಸಚಿವರಿಂದಲೂ ಈಗ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಾಗಿದೆ.

ಕರ್ನಾಟಕದ ನಾಯಕತ್ವ ಬದಲಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್​ ಆಗಿದೆ. ಬಿ.ಎಸ್. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಲೇಬೇಕೆಂದು ಒಂದು ಬಣದವರು ಹಠ ತೊಟ್ಟಿದ್ದರು. ಆದರೆ, ಯಡಿಯೂರಪ್ಪ ಮಾತ್ರ ನಾನು ಸಿಎಂ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಎಂದು ಹೇಳುತ್ತಲೇ ಬಂದಿದ್ದರು. ಆದರೆ, ಕೆಲವು ದಿನಗಳ ಹಿಂದೆ ತಮ್ಮ ಬಣದವರೊಂದಿಗೆ ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಅಮಿತ್ ಶಾ ಮುಂತಾದ ನಾಯಕರನ್ನು ಭೇಟಿಯಾಗಿ ಬಂದಿದ್ದ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಜುಲೈ 25ರಂದು ಹೈಕಮಾಂಡ್​ನಿಂದ ಬರುವ ಸಂದೇಶಕ್ಕಾಗಿ ಕಾಯುತ್ತಿದ್ದೇನೆ ಎನ್ನುವ ಮೂಲಕ ಸಿಎಂ ಪಟ್ಟದಿಂದ ಕೆಳಗಿಳಿಯುವ ಸೂಚನೆ ನೀಡಿದ್ದಾರೆ.

ಯಡಿಯೂರಪ್ಪನವರ ಮಾತನ್ನು ನಂಬಿ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಬಂದಿರುವ ವಲಸಿಗ ಸಚಿವರನ್ನು ಮುಂದಿಟ್ಟುಕೊಂಡು ಸಿಎಂ ಯಡಿಯೂರಪ್ಪ ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಒಂದುವೇಳೆ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ವಲಸಿಗ ಸಚಿವರು ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಪ್ರತ್ಯೇಕ ಪತ್ರಗಳೊಂದಿಗೆ ಸಿಎಂ ಯಡಿಯೂರಪ್ಪನವರ ಜೊತೆ ವಲಸಿಗ ಸಚಿವರು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆ ಪತ್ರಗಳಲ್ಲಿ ಏನಿದೆ? ಎಂಬುದು ಸದ್ಯದ ಕುತೂಹಲವಾಗಿದೆ. ರಾಜೀನಾಮೆ ಪತ್ರ ಹಿಡಿದು ಸಿಎಂ ಯಡಿಯೂರಪ್ಪನವರನ್ನು ವಲಸಿಗ ಸಚಿವರು ಭೇಟಿಯಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ವಲಸಿಗ ಸಚಿವರಾದ ಬಿ.ಸಿ. ಪಾಟೀಲ್, ಡಾ.ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ.

ತಮ್ಮನ್ನು ಬಿಜೆಪಿ ಪಕ್ಷಕ್ಕೆ ಕರೆಸಿಕೊಂಡು, ಚುನಾವಣೆಯಲ್ಲಿ ಟಿಕೆಟ್ ನೀಡಿ, ಸ್ವಪಕ್ಷೀಯರ ವಿರೋಧಧ ನಡುವೆಯೂ ಸಚಿವ ಸ್ಥಾನ ನೀಡಿರುವ ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ವಲಸಿಗ ಸಚಿವರ ಸ್ಥಿತಿ ಅತಂತ್ರವಾಗುವ ಆತಂಕ ಅವರನ್ನು ಕಾಡುತ್ತಿದೆ ಎನ್ನಲಾಗಿದೆ. ಆರೂ ಸಚಿವರು ಏಕಮಾದರಿಯ ಪತ್ರ ಹಿಡಿದು ಸಿಎಂ ಭೇಟಿ ಮಾಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ. ಆದರೆ, ಆ ಪತ್ರದಲ್ಲಿ ಏನಿದೆ ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ವಲಸಿಗ ಸಚಿವರ ನಡೆ ಕುತೂಹಲ ಮೂಡಿಸಿದೆ.

ಇಂದು ಸಚಿವ ಸಂಪುಟ ಸಭೆ ಮುಗಿದ ಬೆನ್ನಲ್ಲೇ ಸಿಎಂ ಕಚೇರಿಗೆ ದೌಡಾಯಿಸಿದ ಸಚಿವರು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ. ಮೊದಲು ಹತ್ತು ನಿಮಿಷ ಭೈರತಿ ಬಸವರಾಜ್ ಕೊಠಡಿಯಲ್ಲಿ ಚರ್ಚೆ ನಡೆಸಿದ ವಲಸಿಗರು ನಂತರ ಸಿಎಂ ಚೇಂಬರ್ ಗೆ ಒಟ್ಟಾಗಿ ಪತ್ರ ಹಿಡಿದು ತೆರಳಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.  ವಲಸಿಗ ಸಚಿವರು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾದ ಬೆನ್ನಲ್ಲೇ ಸಚಿವ ಸುಧಾಕರ್ ಜತೆ ಅಶೋಕ್​ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಸಿಎಂ ಕೊಠಡಿಯಲ್ಲೇ ಪ್ರತ್ಯೇಕವಾಗಿ ಸುಧಾಕರ್ ಜತೆ ಚರ್ಚೆ ನಡೆಸಿದ್ದಾರೆ. ಮತ್ತೊಂದು ಕಡೆ ವಲಸಿಗರ ಜತೆ ಸಿಎಂ ಬಿಎಸ್​​ವೈ ಚರ್ಚೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರನ್ನು ಎದುರು ಕೂರಿಸಿಕೊಂಡು ಚರ್ಚೆ ನಡೆಸಲಾಗಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ಮುಕ್ತಾಯ: 8 ಸಾವಿರ ಕೋಟಿ ವೆಚ್ಚದಲ್ಲಿ 2 ವರ್ಷದಲ್ಲಿ ಒಟ್ಟು 5 ಲಕ್ಷ ಮನೆ ನಿರ್ಮಾಣಕ್ಕೆ ತೀರ್ಮಾನ

Published On - 6:17 pm, Thu, 22 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ