ಸಿದ್ದರಾಮಯ್ಯ ಬಿಜೆಪಿಗೆ? ಸಂಚಲನ ಮೂಡಿಸಿದ ಶಾಸಕ ರಾಜುಗೌಡ ಹೇಳಿಕೆ
Karnataka Politics: ಕಾಂಗ್ರೆಸ್ ಪಕ್ಷದ ನಾಯಕರೇ ನಮ್ಮ ಪಕ್ಷಕ್ಕೆ ಬರುವುದಾಗಿ ಕೇಳುತ್ತಿದ್ದಾರೆ. ಆದರೆ ಇಲ್ಲಿ ಇರುವವರಿಗೇ ಅವಕಾಶ ಸಿಗುತ್ತಿಲ್ಲ. ಅದಕ್ಕೆ ನಾವೇ ಬೇಡ ಅಂತಿದ್ದೇವೆ ಎಂದು ಅವರು ತಿಳಿಸಿದರು.
ಬೆಂಗಳೂರು: ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಕಾಂಗ್ರೆಸ್‌ನವರೇ ನಮ್ಮ ಪಕ್ಷಕ್ಕೆ ಬರುವುದಾಗಿ ಕೇಳುತ್ತಿದ್ದಾರೆ. ಆದರೆ ಇಲ್ಲಿ ಇರುವವರಿಗೇ ಅವಕಾಶ ಸಿಗುತ್ತಿಲ್ಲ. ಆದರೂ ಸಿದ್ದರಾಮಯ್ಯರನ್ನು ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇನೆ. ಈ ಪ್ರಯತ್ನದಲ್ಲಿ ಯಶಸ್ವಿಯಾಗುವ ವಿಶ್ವಾಸ ಇದೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ರಾಜುಗೌಡ ತಿಳಿಸಿದರು.
ಆಪರೇಷನ್ ಕಾಂಗ್ರೆಸ್ ಬಗ್ಗೆ ಬಿಎಸ್‌ವೈ ಪ್ರಸ್ತಾಪ ವಿಚಾರದ ಕುರಿತೂ ಪ್ರಸ್ತಾಪಿಸಿದ ಅವರು, ಬಿ.ಎಸ್.ಯಡಿಯೂರಪ್ಪ ಅವರು ಎದುರಾಳಿಗಳನ್ನು ಕಡೆಗಣಿಸುವಂತಿಲ್ಲ ಎಂದು ಹೇಳಿದ್ದಾರೆ. ಅವರು ಹೇಳಿದ್ದು ಯಾರನ್ನೂ ನಿರ್ಲಕ್ಷ್ಯ ಮಾಡಬೇಡಿ ಎಂಬ ಅರ್ಥದಲ್ಲಿ. ಕಾಂಗ್ರೆಸ್ ಪಕ್ಷದ ನಾಯಕರೇ ನಮ್ಮ ಪಕ್ಷಕ್ಕೆ ಬರುವುದಾಗಿ ಕೇಳುತ್ತಿದ್ದಾರೆ. ಆದರೆ ಇಲ್ಲಿ ಇರುವವರಿಗೇ ಅವಕಾಶ ಸಿಗುತ್ತಿಲ್ಲ. ಅದಕ್ಕೆ ನಾವೇ ಬೇಡ ಅಂತಿದ್ದೇವೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್‌ಗೆ ಹೋಗಲ್ಲ: ಶಾಸಕ ಎಂ.ಪಿ. ಕುಮಾರಸ್ವಾಮಿ ನನಗೆ ಬಿಜೆಪಿಯಲ್ಲಿ ಯಾವುದೇ ರೀತಿಯ ಬೇಸರವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಅನಿವಾರ್ಯತೆ ನನಗಿಲ್ಲ ಎಂದು ವಿಧಾನಸೌಧದಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿಲ್ಲ ಎಂದು ಸಹ ಅವರು ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಮೂಲ ಬಿಜೆಪಿಗ. ನಮ್ಮ ಪಕ್ಷದಲ್ಲೇ ನನಗೆ ಆಗದವರು ಪದೇ ಪದೇ ನನ್ನ ಹೆಸರನ್ನು ಕಾಂಗ್ರೆಸ್‌ಗೆ ಹೋಗುವ ಸಾಲಿನಲ್ಲಿ ತರುತ್ತಿದ್ದಾರೆ. ಬಿಜೆಪಿ ನನ್ನ ಗೌರವದಿಂದ ನಡೆಸಿಕೊಂಡಿದೆ. ನನಗೆ ಬಿಜೆಪಿಯಲ್ಲಿ ಯಾವುದೇ ಬೇಸರವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಅನಿವಾರ್ಯತೆ ನನಗಿಲ್ಲ ಎಂದು ಅವರು ಖಚಿಪಡಿಸಿದ್ದಾರೆ.
ಇದನ್ನೂ ಓದಿ:
2014ರಿಂದ 2021ರವರೆಗೆ ಯಾವ ಪಕ್ಷದಿಂದ ಎಷ್ಟು ಜನಪ್ರತಿನಿಧಿಗಳು ಪಕ್ಷಾಂತರ ಮಾಡಿದ್ದಾರೆ?
(Karnataka Politics BJP MLA Raju Gowda says trying to bring Siddaramaiah to BJP)
Published On - 11:32 am, Mon, 20 September 21