AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯೇಂದ್ರ-ಸತೀಶ್​ ಜಾರಕಿಹೊಳಿ ದಿಢೀರ್​ ಭೇಟಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಚಿವ ಸತೀಶ್​ ಜಾರಕಿಹೊಳಿ ಅವರನ್ನು ಧಿಡೀರ್​​ ಭೇಟಿಯಾಗಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ಬಿವೈ ವಿಜಯೇಂದ್ರ ಮತ್ತು ಸತೀಶ್​ ಜಾರಕಿಹೊಳಿ ಭೇಟಿಯಾಗಿದ್ದಾರೆ. ಇಬ್ಬರು ನಾಯಕರ ಭೇಟಿ ಭಾರಿ ಕುತೂಹಲ ಮೂಡಿಸಿದೆ.

ವಿಜಯೇಂದ್ರ-ಸತೀಶ್​ ಜಾರಕಿಹೊಳಿ ದಿಢೀರ್​ ಭೇಟಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ
ಸತೀಶ್​ ಜಾರಕಿಹೊಳಿ, ವಿಜಯೇಂದ್ರ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Oct 07, 2024 | 12:49 PM

Share

ಬೆಂಗಳೂರು, ಅಕ್ಟೋಬರ್​ 07: ಕರ್ನಾಟಕ ರಾಜಕಾರಣದಲ್ಲಿ (Karnataka Politics) ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijyayendra) ಅವರು ಸಚಿವ ಸತೀಶ್​ ಜಾರಕಿಹೊಳಿ ಅವರನ್ನು (Satish Jarkiholi) ದಿಢೀರ್​​ ಭೇಟಿಯಾಗಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ಬಿವೈ ವಿಜಯೇಂದ್ರ ಮತ್ತು ಸತೀಶ್​ ಜಾರಕಿಹೊಳಿ ಭೇಟಿಯಾಗಿದ್ದಾರೆ. ಇಬ್ಬರು ನಾಯಕರ ಭೇಟಿ ಭಾರಿ ಕುತೂಹಲ ಮೂಡಿಸಿದೆ.

ಮುಡಾ ಹಗರಣ ಪ್ರಕರಣದಲ್ಲಿ ಸಿದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆ, ಮುಖ್ಯಮಂತ್ರಿ ಬದಲಾವಣೆಯ ಕೂಗು ಕೇಳಿಬಂದಿದೆ. ಸಿಎಂ ಕುರ್ಚಿ ಮೇಲೆ ದಲಿತ ನಾಯಕನೇ ಕೂಡಬೇಕೆಂಬ ವಾದ ಜೋರಾದ ಹಿನ್ನೆಲೆಯಲ್ಲಿ ಆಕ್ಟಿವ್ ಆದ ಸತೀಶ್​​ ಜಾರಕಿಹೊಳಿ ಇತ್ತೀಚಿಗೆ ಹೈಕಮಾಂಡ್​​ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ್​​ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಇಲಾಖೆಯ ಕೆಲಸಕ್ಕೆ ಬಂದಿದ್ದೇನೆ: ವಿಜಯೇಂದ್ರ

ಟೋಲ್​ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವ​ರನ್ನು​ ಭೇಟಿಯಾಗಿದ್ದೇನೆ. ಶಿಕಾರಿಪುರ ಬಳಿ  ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್ ಬರುತ್ತವೆ. ಈ ಎರಡು ಟೋಲ್​ನಿಂದ ರೈತರಿಗೆ ಸಮಸ್ಯೆ ಆಗುತ್ತಿದೆ. ಟೋಲ್​ ಶಿಫ್ಟ್ ಮಾಡುವಂತೆ ಸಚಿವರಿಗೆ ಮನವಿ ಮಾಡಿದ್ದೇವೆ. ಸಚಿವರು ಸಕಾರಾತ್ಮಕವಾಗಿ ಭರವಸೆ ಕೊಟ್ಟಿದ್ದಾರೆ. ಈ ವಿಚಾರವಾಗಿ ಶೀಘ್ರದಲ್ಲೇ ಸಭೆ ಕರೆಯುವುದಾಗಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.

ಇದನ್ನೂ ಓದಿ: ಜಿಟಿಡಿ ಹೇಳಿಕೆ ಜೆಡಿಎಸ್ ಪಕ್ಷದ ಆಂತರಿಕ ವಿಚಾರ; ಬಿ.ವೈ ವಿಜಯೇಂದ್ರ

ರಾಜಕೀಯ ಟಚ್ ಕೊಡೋದು ಸರಿಯಲ್ಲ: ಸತೀಶ್​

ಬಿವೈ ವಿಜಯೇಂದ್ರ ಮತ್ತು ನನ್ನ ಭೇಟಿಗೆ ರಾಜಕೀಯ ಟಚ್ ಕೊಡೋದು ಸರಿಯಲ್ಲ. ಅದಕ್ಕೆ ಕಾರಣಗಳೂ ಏನೂ ಇಲ್ಲ. ವಿಪಕ್ಷದ ಶಾಸಕರು ಇಲಾಖೆ ಕೆಲಸ ಇದ್ದಾಗ ಬರಲೇಬೇಕಾಗುತ್ತದೆ. ಈಗ ಸಿಎಂ ಆಗುವಂತ ಅವಕಾಶವೂ ಇಲ್ಲ, ಸನ್ನಿವೇಶವೂ ಇಲ್ಲ. ಸಿಎಂ ಬದಲಾವಣೆ ವಿಚಾರವಾಗಿ ಕಳೆದ ದಸರಾದಿಂದಲೇ ಚರ್ಚೆ ಇದೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

ಬಸ್ ಅಲ್ಲಿಯೇ ನಿಂತಿದೆ, ನಾನೊಬ್ಬನೇ ಮೈಸೂರಿಗೆ ಹೋಗುತ್ತಿದ್ದೇನೆ. ಮುಡಾ ವಿವಾದ ಶುರುವಾಗಿದ್ದು ಈಗ ಮೂರು ತಿಂಗಳಿಂದ ಈಚೆಗೆ. ಅದಕ್ಕಿಂತ ಮೊದಲೂ ಹಲವು ಇಲಾಖೆಯ ಸಚಿವರನ್ನು ಭೇಟಿ ಮಾಡಿದ್ದೇನೆ. ಇಲಾಖೆ ಭೇಟಿ ಬಿಟ್ಟು ಬೇರೇನೂ ಇಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:44 pm, Mon, 7 October 24

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​