Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಭಾನುವಾರ ಸಭೆ; ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ?

ಬಿಜೆಪಿ ಮೂಲಗಳ ಪ್ರಕಾರ, ಶಾಸಕಾಂಗ ಪಕ್ಷದ ಹೊಸ ನಾಯಕನನ್ನು ಆಯ್ಕೆ ಮಾಡಲು ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಆಯ್ಕೆಯಾಗುವವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಭಾನುವಾರ ಸಭೆ; ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ?
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Jun 30, 2023 | 6:42 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದು ಹಲವಾರು ದಿನಗಳ ನಂತರ ಇದೀಗ ಬಿಜೆಪಿಯು (BJP) ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಮುಂದಾಗಿದೆ. ಭಾನುವಾರದಂದು (ಜುಲೈ 2) ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಪಕ್ಷದ ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಭಾಗವಹಿಸುವ ಸಾಧ್ಯತೆಯಿದೆ.

ಜುಲೈ 3 ರಂದು ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ನಾಮನಿರ್ದೇಶನ ಮಾಡಿಲ್ಲ.

ಬಿಜೆಪಿ ಮೂಲಗಳ ಪ್ರಕಾರ, ಶಾಸಕಾಂಗ ಪಕ್ಷದ ಹೊಸ ನಾಯಕನನ್ನು ಆಯ್ಕೆ ಮಾಡಲು ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ‘ನ್ಯೂಸ್ 9’ ವರದಿ ಮಾಡಿದೆ. ಸಭೆಯಲ್ಲಿ ಆಯ್ಕೆಯಾಗುವವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪಕ್ಷದ ಹಲವು ಹಿರಿಯ ನಾಯಕರು ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಈ ನಿರ್ಧಾರ ನಿರ್ಣಾಯಕವಾಗಲಿದೆ ಎಂದೇ ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್. ಅಶೋಕ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದು, ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಸಂಬಂಧಿಸಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ 11 ಮಂದಿ ಮುಖಂಡರಿಗೆ ರಾಜ್ಯ ಬಿಜೆಪಿ ಘಟಕ ಸಮನ್ಸ್ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಈ ನಾಯಕರಿಂದ ಸ್ಪಷ್ಟನೆ ಕೇಳಿದ್ದಾರೆ.

ಸಮನ್ಸ್ ದೊರೆತ 11 ಮಂದಿಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸೇರಿದಂತೆ ಐವರು ಬೆಂಗಳೂರಿನಲ್ಲಿದ್ದರೂ ಶುಕ್ರವಾರದ ಬಿಜೆಪಿ ಸಭೆಗೆ ಗೈರಾಗಿದ್ದಾರೆ. ಸಭೆಗೆ ಗೈರಾದ ರೇಣುಕಾಚಾರ್ಯ ಹಾಗೂ ಇತರರೊಂದಿಗೆ ಖುದ್ದು ಮಾತನಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇದನ್ನೂ ಓದಿ: MP Renukacharya: ಬಿಜೆಪಿ ಸೋಲಿಗೆ ಎಳೆಎಳೆಯಾಗಿ ಕಾರಣ ಬಿಚ್ಚಿಟ್ಟ ರೇಣುಕಾಚಾರ್ಯ

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಸಂಸದ ಪ್ರತಾಪಸಿಂಹ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಕೆಲವು ನಾಯಕರು ಬಿಜೆಪಿ ನಾಯಕರ ಮುಂದೆ ಸಮನ್ಸ್​​ಗೆ ಉತ್ತರಿಸಿದ್ದಾರೆ.

ಪಕ್ಷಕ್ಕೆ ಮುಜುಗರ ಉಂಟು ಮಾಡುವ ಬಹಿರಂಗ ಹೇಳಿಕೆಗಳನ್ನು ನೀಡಬೇಡಿ ಎಂದು ರಾಜ್ಯಾಧ್ಯಕ್ಷ ಹಾಗೂ ಯಡಿಯೂರಪ್ಪ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ