Karnataka Politics: ಯಡಿಯೂರಪ್ಪ ಬಳಿಕ ಯಾರಾಗ್ತಾರೆ ಹೊಸ ಮುಖ್ಯಮಂತ್ರಿ?; ಈ 8 ನಾಯಕರತ್ತ ಹೈಕಮಾಂಡ್ ಒಲವು

BS Yediyurappa: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ನಾಳೆ ಬಹಳ ಮಹತ್ವದ ದಿನವಾಗಿದೆ. ಯಡಿಯೂರಪ್ಪನವರ ಬಳಿಕ ಯಾರಿಗೆ ಸಿಎಂ ಸ್ಥಾನ ನೀಡಬೇಕೆಂಬ ಬಗ್ಗೆ ಹೈಕಮಾಂಡ್ ಈಗಾಗಲೇ 8 ನಾಯಕರ ಹೆಸರನ್ನು ಪಟ್ಟಿಮಾಡಿಕೊಂಡಿದೆ. ಹಾಗಾದರೆ, ಯಾರಾಗಲಿದ್ದಾರೆ ಕರ್ನಾಟಕದ ಹೊಸ ಮುಖ್ಯಮಂತ್ರಿ?

Karnataka Politics: ಯಡಿಯೂರಪ್ಪ ಬಳಿಕ ಯಾರಾಗ್ತಾರೆ ಹೊಸ ಮುಖ್ಯಮಂತ್ರಿ?; ಈ 8 ನಾಯಕರತ್ತ ಹೈಕಮಾಂಡ್ ಒಲವು
ಬಿ.ಎಸ್.ಯಡಿಯೂರಪ್ಪ
Follow us
| Updated By: ಸುಷ್ಮಾ ಚಕ್ರೆ

Updated on:Jul 24, 2021 | 5:24 PM

ಬೆಂಗಳೂರು: ನಾಳೆ ಅಂದ್ರೆ ಜುಲೈ 25 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ (BS Yediyurappa) ಮಹತ್ವದ ದಿನ. ನಾಳೆ ಬಿಜೆಪಿ ಹೈಕಮಾಂಡ್​ನಿಂದ ಯಾವ ಸೂಚನೆ ಬರಲಿದೆ ಎಂಬುದರ ಮೇಲೆ ಯಡಿಯೂರಪ್ಪ ಕರ್ನಾಟಕದ ಮುಖ್ಯಮಂತ್ರಿಯಾಗಿ (Karnataka Chief Minister) ಮುಂದುವರೆಯುತ್ತಾರಾ, ಇಲ್ಲವಾ ಎಂಬುದು ನಿರ್ಧಾರವಾಗಲಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಯಡಿಯೂರಪ್ಪ ಈಗಾಗಲೇ ಮಾನಸಿಕವಾಗಿ ಸಿದ್ಧರಾಗಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬ ಕುತೂಹಲ ಹೆಚ್ಚಾಗಿದೆ. ನಾಳೆ ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ (BS Yediyurappa Resignation) ನೀಡುವುದು ಬಹುತೇಕ ಖಚಿತವಾಗಿರುವುದರಿಂದ ಸಿಎಂ ಖುರ್ಚಿಗಾಗಿ ಈಗಾಗಲೇ ಬಿಜೆಪಿಯಲ್ಲಿ ಲಾಬಿ ಶುರುವಾಗಿದೆ. ಸಿಎಂ ಸ್ಥಾನಕ್ಕಾಗಿ ಮಠಾಧೀಶರಿಂದ, ಕಾರ್ಯಕರ್ತರಿಂದ, ಬಿಜೆಪಿ ನಾಯಕರಿಂದ ಹೈಕಮಾಂಡ್ (BJP High Command) ಮೇಲೆ ಒತ್ತಡ ತರುವ ಪ್ರಯತ್ನಗಳೂ ನಡೆಯುತ್ತಿವೆ.

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಜಾಗಕ್ಕೆ ಲಿಂಗಾಯತ ನಾಯಕರನ್ನೇ ಕೂರಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ. ಲಿಂಗಾಯತ ಸಮುದಾಯದ ನಾಯಕರಾಗಿರುವ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಬೇರೊಬ್ಬರನ್ನು ಸಿಎಂ ಆಗಿ ಮಾಡಿದರೆ ಆ ಸಮುದಾಯದಲ್ಲಿ ಆಕ್ರೋಶಗಳು ಏಳುವ ಸಾಧ್ಯತೆ ಇರುವುದರಿಂದ ಮತ್ತು ಲಿಂಗಾಯತ ಸ್ವಾಮೀಜಿಗಳ ಒತ್ತಡವೂ ಹೆಚ್ಚಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ಇದರ ಜೊತೆಗೆ ಇತರೆ ಸಮುದಾಯದ ಕೆಲವು ಪ್ರಭಾವಿ ನಾಯಕರ ಹೆಸರೂ ಸಿಎಂ ಸ್ಥಾನದ ರೇಸ್​ನಲ್ಲಿವೆ.

ಬಿಜೆಪಿ ಹೈಕಮಾಂಡ್ ಈಗಾಗಲೇ 4 ಲಿಂಗಾಯತ ನಾಯಕರು ಸೇರಿ 8 ನಾಯಕರ ಹೆಸರನ್ನು ಅಂತಿಮಗೊಳಿಸಿದ್ದು, ಅವರಲ್ಲಿ ಯಾರು ಸಿಎಂ ಪಟ್ಟವೇರಲಿದ್ದಾರೆ ಎಂಬ ಕುತೂಹಲಕ್ಕೆ ನಾಳೆ ಅಥವಾ ಸೋಮವಾರದ ವೇಳೆಗೆ ತೆರ ಬೀಳುವ ಸಾಧ್ಯತೆಯಿದೆ. 2023ರಲ್ಲಿ ನಡೆಯುವ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯಡಿಯೂರಪ್ಪನವರ ಉತ್ತರಾಧಿಕಾರಿಯಾಗಿ ಲಿಂಗಾಯತ ಸಮುದಾಯದ ನಾಯಕನಿಗೆ ಸಿಎಂ ಪಟ್ಟ ಕಟ್ಟಲು ತಯಾರಿ ನಡೆಸಲಾಗುತ್ತಿದೆ. ಪಂಚಮಸಾಲಿ ಲಿಂಗಾಯತ ಸಮುದಾಯದ ನಾಯಕರಾದ ಧಾರವಾಡದ ಶಾಸಕ ಅರವಿಂದ್ ಬೆಲ್ಲದ್, ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವರಾದ ಮುರುಗೇಶ್ ನಿರಾಣಿ, ಬಸವರಾಜ ಬೊಮ್ಮಾಯಿ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿಬರುತ್ತಿವೆ. ಇವರ ಮೂಲಕ ಲಿಂಗಾಯತ ಸಮುದಾಯವನ್ನು ಒಗ್ಗೂಡಿಸಿದರೆ ಮುಂದಿನ ಚುನಾವಣೆಗೆ ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿದೆ ಹೈಕಮಾಂಡ್.

ಇದಿಷ್ಟೇ ಅಲ್ಲದೆ, ಲಿಂಗಾಯತರಲ್ಲದ ಬೇರೆ ನಾಯಕರ ಹೆಸರೂ ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿಬಂದಿವೆ. ಹೈಕಮಾಂಡ್ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಕೇಂದ್ರ ಸಚಿವರಾದ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್ ಜೋಷಿ, ಒಕ್ಕಲಿಗ ಸಮುದಾಯದ ಸಿ.ಟಿ. ರವಿ ಹೆಸರೂ ಇದೆ ಎನ್ನಲಾಗಿದೆ. ಅರವಿಂದ್ ಬೆಲ್ಲದ ಬಳಿಕ ಪ್ರಹ್ಲಾದ್ ಜೋಷಿ ಅವರ ಹೆಸರು ಬಿಜೆಪಿ ಹೈಕಮಾಂಡ್ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಇವಿಷ್ಟೇ ಅಲ್ಲದೆ, ಆರ್​ಎಸ್​ಎಸ್​ ನಾಯಕ ಬಿ.ಎಲ್. ಸಂತೋಷ್, ಡಿಸಿಎಂ ಲಕ್ಷ್ಮಣ ಸವದಿ ಹೆಸರು ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿಬರುತ್ತಿವೆ.

78 ವರ್ಷದ ಬಿ.ಎಸ್. ಯಡಿಯೂರಪ್ಪ ಜುಲೈ 26ಕ್ಕೆ ಮುಖ್ಯಮಂತ್ರಿಯಾಗಿ 2 ವರ್ಷಗಳನ್ನು ಪೂರೈಸಲಿದ್ದಾರೆ. ಹೀಗಾಗಿ, ಈಗಲೇ ಅವರ ಬದಲು ಬೇರೆ ಮುಖ್ಯಮಂತ್ರಿಯನ್ನು ಅಧಿಕಾರದಲ್ಲಿ ಕೂರಿಸಿದರೆ ಮುಂದಿನ ಚುನಾವಣೆ ವೇಳೆಗೆ ಹೆಚ್ಚು ಅನುಕೂಲವಾಗಲಿದೆ ಎಂಬುದು ಹೈಕಮಾಂಡ್ ಲೆಕ್ಕಾಚಾರಾ ಎನ್ನಲಾಗುತ್ತಿದೆ. ಸಂಪುಟದಲ್ಲೂ ಅನೇಕ ಸಚಿವರಿಗೆ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸರ್ವಾಧಿಕಾರಿ ಧೋರಣೆ ಬಗ್ಗೆ ಅಸಮಾಧಾನ ಹೆಚ್ಚಾಗಿದ್ದು, ವಿರೋಧ ಬಣದವರು ಈಗಾಗಲೇ ಹಲವು ಬಾರಿ ದೆಹಲಿಗೆ ದಂಡಯಾತ್ರೆ ನಡೆಸಿದ್ದಾರೆ. ಹೀಗಾಗಿ, ರಾಜ್ಯದ ಬಿಜೆಪಿ ನಾಯಕರ ಅಸಮಾಧಾನ ಶಮನ ಮಾಡಲು ಮತ್ತು ಮುಂದಿನ ಚುನಾವಣೆಯ ದೃಷ್ಟಿಯಿಂದ ಹೈಕಮಾಂಡ್ ಹೊಸ ಮುಖ್ಯಮಂತ್ರಿಯ ಅಸ್ತ್ರವನ್ನು ಪ್ರಯೋಗಿಸುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಬಿಜೆಪಿ ಪಕ್ಷದಲ್ಲಿ 75 ವರ್ಷ ದಾಟಿದವರಿಗೆ ಯಾರಿಗೂ ಅಧಿಕಾರ ಕೊಟ್ಟಿಲ್ಲ. ಆದರೆ, ನನ್ನ ಕೆಲಸವನ್ನು ನೋಡಿ, ಮೆಚ್ಚುಗೆಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಅವರಿನ್ನು ಯಾವ ಸೂಚನೆ ನೀಡುತ್ತಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಈ ವಿಚಾರದಲ್ಲಿ ಯಾರೂ ಅನಗತ್ಯವಾಗಿ ಗಲಾಟೆಯೆಬ್ಬಿಸಬಾರದು ಎಂದು ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಸಿಎಂ ಯಡಿಯೂರಪ್ಪ ಹೇಳಿರುವುದರಿಂದ ಅವರು ಮುಖ್ಯಮಂತ್ರಿ ಗಾದಿಯಿಂದ ಕೆಳಗಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.

ಇದನ್ನೂ ಓದಿ: Karnataka Politics: ಸಿಎಂ ಸ್ಥಾನ ಉಳಿಸಿಕೊಳ್ಳಲು ವಲಸಿಗ ಸಚಿವರ ಮೂಲಕ ಒತ್ತಡ ಹಾಕಿದರಾ ಯಡಿಯೂರಪ್ಪ?

BS Yediyurappa: ಕರ್ನಾಟಕದಲ್ಲಿ ಯಡಿಯೂರಪ್ಪ ನಂತರ ಬಿಜೆಪಿ ನಾಯಕ ಇವರೇನಾ? ಇಷ್ಟಕ್ಕೂ ಬಿಎಸ್​ವೈ ರಾಜೀನಾಮೆಗೆ ಕಾರಣವೇನು?

(BJP High Command Shortlists 8 Leaders Name as Karnataka CM Candidates after BS Yediyurappa’s Resignation)

Published On - 5:18 pm, Sat, 24 July 21

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್