ಮೂರು ತಂಡಗಳಲ್ಲಿ ಬಿಜೆಪಿ ನಾಯಕರ ಕರ್ನಾಟಕ ಪ್ರವಾಸ: ಸಂಘಟನೆಗೆ ಬಲ ತುಂಬಲು ಪ್ರಯತ್ನ

ಏಪ್ರಿಲ್ 12ರಿಂದ ಬಿಜೆಪಿ ನಾಯಕರು ಮೂರು ತಂಡಗಳಾಗಿ ರಾಜ್ಯ ಪ್ರವಾಸ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಮೂರು ತಂಡಗಳಲ್ಲಿ ಬಿಜೆಪಿ ನಾಯಕರ ಕರ್ನಾಟಕ ಪ್ರವಾಸ: ಸಂಘಟನೆಗೆ ಬಲ ತುಂಬಲು ಪ್ರಯತ್ನ
ಬಿಜೆಪಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 05, 2022 | 2:07 PM

ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಚುರುಕಿನ ರಾಜಕೀಯ ಚಟುವಟಿಕೆಗಳು ಕಂಡು ಬರುತ್ತಿದ್ದು ಮುಂದಿನ ಚುನಾವಣೆಗೆ ಮೂರೂ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಏಪ್ರಿಲ್ 12ರಿಂದ ಬಿಜೆಪಿ ನಾಯಕರು ಮೂರು ತಂಡಗಳಾಗಿ ರಾಜ್ಯ ಪ್ರವಾಸ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮುಖಂಡರು ರಾಜ್ಯ ಪ್ರವಾಸ ನಡೆಸಲಿದ್ದಾರೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಈ ನಾಯಕರು ಎರಡು ಹಂತಗಳಲ್ಲಿ ಪ್ರವಾಸ ನಡೆಸಲಿದ್ದಾರೆ. ಏಪ್ರಿಲ್ 12ರಿಂದ 15ರವರೆಗೆ ಮೊದಲ ಹಂತ, ಏಪ್ರಿಲ್ 19ರಿಂದ 21ರವರೆಗೆ ಎರಡನೇ ಹಂತದಲ್ಲಿ ಪ್ರವಾಸ ನಡೆಯಲಿದೆ.

ರಾಜ್ಯ ಪ್ರವಾಸದ ಸಂಯೋಜಕರಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್, ರಾಜ್ಯ ಕಾರ್ಯದರ್ಶಿಗಳಾದ ತುಳಸಿ ಮುನಿರಾಜು ಗೌಡ, ಕೆ.ಎಸ್.ನವೀನ್ ಮತ್ತು ಹೇಮಲತಾ ನಾಯ್ಕ್ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಪ್ರವಾಸದ ಪೂರ್ವ ಸಿದ್ಧತೆ ಕುರಿತು ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಪ್ರವಾಸ ಸಂಯೊಜಕರ ಸಭೆ ನಡೆಯಲಿದೆ.

‘ರಾಜ್ಯ ಮತ್ತು ರಾಷ್ಟ್ರೀಯ ನಾಯಕರನ್ನು ಒಳಗೊಂಡ ತಂಡವು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ ಬಲವರ್ಧನೆಗೆ ಏಪ್ರಿಲ್ 12ರಿಂದ 24ರವರೆಗೆ ಮೂರು ತಂಡಗಳಲ್ಲಿ ಪ್ರವಾಸ ನಡೆಸಲಿದೆ. ಈ ತಂಡಗಳು ವಿಭಾಗ ಕೇಂದ್ರದಲ್ಲಿ ಎರಡು ದಿನಗಳ ಕಾರ್ಯಕ್ರಮ ಸಂಘಟಿಸಲಿವೆ. ಪ್ರತಿ ಜಿಲ್ಲಾ ಕೇಂದ್ರದಲ್ಲೂ ಕೋರ್‌ ಕಮಿಟಿ ಸಭೆ ನಡೆಯಲಿದೆ. ಸಭೆಯ ನಂತರ ಜಿಲ್ಲಾ ಮಟ್ಟದ ಪದಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು. ಜಿಲ್ಲೆಯ ಪ್ರಮುಖರೊಂದಿಗೆ ವೈಯಕ್ತಿಕ ಮಾತುಕತೆಗೆ ಅವಕಾಶ ಮಾಡಿಕೊಡಲಾಗುವುದು. ಈ ತಂಡಗಳು ವಿಭಾಗ ಕೇಂದ್ರದ ಮಂಡಲಗಳ ಬೂತ್‌ ಅಧ್ಯಕ್ಷರು ಮತ್ತು ಶಕ್ತಿ ಕೇಂದ್ರದ ಪ್ರಮುಖರೊಂದಿಗೂ ಸಂವಾದ ನಡೆಸಲಿವೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನ ಮಾಹಿತಿ ನೀಡಿದ್ದಾರೆ.

ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಗುಜರಾತ್ ಚುನಾವಣೆ ಆತಂಕ

ಕರ್ನಾಟಕ ಸಚಿವ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತು ಕೈಬಿಡಬಹುದು ಎನ್ನಲಾಗಿರುವ ಸಚಿವರಿಗೆ ಗುಜರಾತ್ ಚುನಾವಣೆ ಹೊಸ ಆತಂಕ ತಂದೊಡ್ಡಿದೆ. ಡಿಸೆಂಬರ್ ತಿಂಗಳಲ್ಲಿ ಗುಜರಾತ್ ಚುನಾವಣೆ ನಡೆಯಲಿದೆ. ಬಿಜೆಪಿ ಹೈಕಮಾಂಡ್ ಗುಜರಾತ್ ಚುನಾವಣಾ ತಯಾರಿಯಲ್ಲಿ ಬ್ಯುಸಿಯಾದರೆ ವರಿಷ್ಠರ ಭೇಟಿಗೂ ಸಮಯಾವಕಾಶ ಸಿಗುವುದು ಕಷ್ಟ. ಹೀಗಾಗಿ ಸಂಪುಟದಲ್ಲಿ ಮುಂದುವರಿಯುವ ಅಥವಾ ಸೇರ್ಪಡೆಯಾಗುವ ಪ್ರಯತ್ನ ಈಗಲೇ ಚುರುಕುಗೊಳಿಸಬೇಕು ಎಂದುಕೊಂಡಿರುವವರು ದೆಹಲಿಗೆ ದೌಡಾಯಿಸಿಯಿದ್ದಾರೆ. ಮುಖ್ಯಮಂತ್ರಿ ದೆಹಲಿ ಯಾತ್ರೆಯೂ ಈ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಮೂರು ತಂಡಗಳಲ್ಲಿ ಬಿಜೆಪಿ ನಾಯಕರ ಕರ್ನಾಟಕ ಪ್ರವಾಸ: ಸಂಘಟನೆಗೆ ಬಲ ತುಂಬಲು ಪ್ರಯತ್ನ

ಇದನ್ನೂ ಓದಿ: ವಿಭಜಿಸುವ, ಧ್ರುವೀಕರಣ ಅಜೆಂಡಾಕ್ಕಾಗಿ ಬಿಜೆಪಿ ಇತಿಹಾಸವನ್ನೇ ತಿರುಚಿದೆ: ಸೋನಿಯಾ ಗಾಂಧಿ

Published On - 2:06 pm, Tue, 5 April 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ