ಕರ್ನಾಟಕ ರಾಜಕೀಯ; ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ VS ಬಿಎಲ್ ಸಂತೋಷ್ ಬಣ ಸಂಘರ್ಷ ಮತ್ತೆ ಮುನ್ನೆಲೆಗೆ

Karnataka Politics; ಸಂತೋಷ್ ವಿರುದ್ಧ ಯಡಿಯೂರಪ್ಪ ಅವರ ಆಪ್ತ, ಮಾಜಿ ಸಚಿವರಾದ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಸಭೆ ನಡೆಸಿದ್ದಕ್ಕಾಗಿ ಸಂತೋಷ್ ಅವರನ್ನು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಪಕ್ಷದ ಆಂತರಿಕ ಭಿನ್ನಮತವನ್ನು ಮತ್ತೆ ಬಹಿರಂಗಗೊಳಿಸಿದೆ.

ಕರ್ನಾಟಕ ರಾಜಕೀಯ; ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ VS ಬಿಎಲ್ ಸಂತೋಷ್ ಬಣ ಸಂಘರ್ಷ ಮತ್ತೆ ಮುನ್ನೆಲೆಗೆ
ಬಿಎಲ್ ಸಂತೋಷ್ ಹಾಗೂ ಬಿಎಸ್ ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
Ganapathi Sharma
|

Updated on: Sep 02, 2023 | 3:43 PM

ಬೆಂಗಳೂರು, ಸೆಪ್ಟೆಂಬರ್ 2: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santhosh) ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರ ಬಣಗಳ ನಡುವಿನ ಶೀತಲ ಸಮರ, ಹಣಾಹಣಿ ಮತ್ತೆ ಮುನ್ನೆಲೆಗೆ ಬಂದಿದೆ. ಬಿಎಲ್ ಸಂತೋಷ್ ಅವರು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆಸಿದ ಸಭೆಯ ನಂತರ ಉಭಯ ಬಣಗಳ ಬೇಗುದಿ ಸ್ಪೋಟಗೊಳ್ಳಲಾರಂಭವಾಗಿದೆ. ಸಂತೋಷ್ ವಿರುದ್ಧ ಯಡಿಯೂರಪ್ಪ ಅವರ ಆಪ್ತ, ಮಾಜಿ ಸಚಿವರಾದ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಸಭೆ ನಡೆಸಿದ್ದಕ್ಕಾಗಿ ಸಂತೋಷ್ ಅವರನ್ನು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಪಕ್ಷದ ಆಂತರಿಕ ಭಿನ್ನಮತವನ್ನು ಮತ್ತೆ ಬಹಿರಂಗಗೊಳಿಸಿದೆ.

ಬಿಎಲ್ ಸಂತೋಷ್ ಗುರುವಾರ ಪಕ್ಷದ ನಾಯಕರ ಸಭೆ ನಡೆಸಿ, ‘2013 ರಲ್ಲಿ ಕೇಸರಿ ಪಕ್ಷವು ಕಣ್ಮರೆಯಾಗುತ್ತದೆ ಎಂದು ಹಲವರು ಹೇಳಿದ್ದರು. ಆದರೆ ಆಗ ಪಕ್ಷವು 40 ವಿಧಾನಸಭಾ ಸ್ಥಾನಗಳನ್ನು ಗೆದ್ದಿತ್ತು. ಈ ಚುನಾವಣೆಯಲ್ಲಿ 66 ಸ್ಥಾನ ಗೆದ್ದಿದ್ದೇವೆ. ಈಗ ವಿಪಕ್ಷವಾಗಿ ಇನ್ನಷ್ಟು ಶಕ್ತಿಯುತವಾಗಿದ್ದೇವೆ’ ಎಂದು ಒತ್ತಿ ಹೇಳಿದ್ದರು. ಯಡಿಯೂರಪ್ಪ ಅವರು ಬಿಜೆಪಿ ತೊರೆದು 2013 ರಲ್ಲಿ ತಮ್ಮದೇ ಆದ ಕರ್ನಾಟಕ ಜನತಾ ಪಕ್ಷವನ್ನು ಸ್ಥಾಪಿಸಿದ್ದರು ಎಂಬ ಅಂಶವನ್ನು ಎತ್ತಿ ತೋರಿಸಲು ಈ ಉಲ್ಲೇಖವನ್ನು ಸಂತೋಷ್ ಮಾಡಿದ್ದಾರೆ ಎಂದು ಬಿಜೆಪಿಯ ಕೆಲವು ಮೂಲಗಳು ಹೇಳಿರುವುದಾಗಿ ‘ಐಎಎನ್​ಎಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.

2013ರಲ್ಲಿ ಬಿಎಸ್​ ಯಡಿಯೂರಪ್ಪ ನಾಯಕತ್ವವನ್ನು ಹೊರತುಪಡಿಸಿ ಬಿಜೆಪಿ ಎದುರಿಸಿದ ಮೊದಲ ಚುನಾವಣೆ ಆಗಿತ್ತು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 60ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದು ಸಂತೋಷ್ ಹೇಳಿರುವುದು ಯಡಿಯೂರಪ್ಪ ಅವರನ್ನು ಕೆಣಕಲು ಎಂದು ಮೂಲಗಳು ತಿಳಿಸಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ 72 ಹೊಸ ಮುಖಗಳಿಗೆ ಪಕ್ಷದ ಟಿಕೆಟ್ ಏಕೆ ನೀಡಲಾಯಿತು ಎಂದು ಪ್ರಶ್ನಿಸಿರುವ ರೇಣುಕಾಚಾರ್ಯ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಮುಖ್ಯಮಂತ್ರಿಯಾಗಲು ಬಯಸುತ್ತಾರೆ ಮತ್ತು ಪಕ್ಷವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

‘ಅವರು (ಬಿಎಲ್ ಸಂತೋಷ್) ಎಂದಿಗೂ ಜನರಿಂದ ಆಯ್ಕೆಯಾಗದ ನಾಯಕರ ಗುಂಪನ್ನು ರಚಿಸಿದ್ದಾರೆ ಮತ್ತು ಯಡಿಯೂರಪ್ಪ ಅವರನ್ನು ಬದಿಗಿಟ್ಟಿದ್ದಾರೆ. ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಸೇವೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ದೂರವಿರುವ ದಿನದಂದೇ ಪಕ್ಷದ ಸಭೆಯನ್ನು ನಿಗದಿಪಡಿಸಿರುವುದು ಏಕೆ’ ಎಂದು ಅವರು ಪ್ರಶ್ನಿಸಿದ್ದಾರೆ.

ಬಿಜೆಪಿಯ ಹೀನಾಯ ಸೋಲಿಗೆ ಯಡಿಯೂರಪ್ಪನವರ ಶಾಪವೇ ಕಾರಣ. ಸಭೆ ನಡೆಸಿದವರು ಪಕ್ಷ ಕಟ್ಟಿಲ್ಲ, 2006-07ರಲ್ಲಿ ಸಂಘ ಪರಿವಾರದಿಂದ ಬಂದು ಮುಖ್ಯಮಂತ್ರಿ ಆಗಬೇಕು ಎಂದು ಬಯಸಿ ಇಡೀ ಪಕ್ಷವನ್ನು ನಿಯಂತ್ರಿಸುತ್ತಿದ್ದಾರೆ. ಅವರು ತಮ್ಮದೇ ಆದ ಗ್ಯಾಂಗ್ ಹೊಂದಿದ್ದಾರೆ. ಅವರು ಎಂದಿಗೂ ಜನರಿಂದ ಆಯ್ಕೆಯಾಗುವುದಿಲ್ಲ, ಅವರು ಎಂದಿಗೂ ಪಕ್ಷವನ್ನು ಕಟ್ಟಲಿಲ್ಲ ಎಂದು ರೇಣುಕಾಚಾರ್ಯ ಸಂತೋಷ್ ಅವರನ್ನು ಗುರಿಯಾಗಿಸಿಕೊಂಡು ಹೇಳಿರುವುದು ಬಣ ರಾಜಕೀಯ ಮತ್ತೆ ಗಟ್ಟಿಯಾಗುವ ಸುಳಿವು ನೀಡಿದೆ.

ಪಕ್ಷದ ಮೇಲಿನ ಹಿಡಿತವು ತಮ್ಮ (ಸಂತೋಷ್) ಬೆಂಬಲಿಗರ ಮೇಲಿದೆ ಎಂದು ಖಚಿತಪಡಿಸಿಕೊಳ್ಳಲು ಅವರು ಯಡಿಯೂರಪ್ಪ ಅವರನ್ನು ಕ್ರಮೇಣ ಬದಿಗಿಟ್ಟರು. ಅವರು ಬಿಜೆಪಿಯಲ್ಲಿ ಲಿಂಗಾಯತ ನಾಯಕತ್ವವನ್ನು ಮುಗಿಸಿದರು. ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನಿರಾಕರಿಸಿದರು. ಅವರ ತಂದೆ ಜನಸಂಘದಲ್ಲಿದ್ದರು. ಶೆಟ್ಟರ್ ಸೇವೆ ಸಲ್ಲಿಸಿದ್ದಾರೆ. ಸ್ಪೀಕರ್, ವಿರೋಧ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿಯಾಗಿ ಅವರು ಯಾವುದೇ ತೊಂದರೆ ಎದುರಿಸದಿದ್ದರೂ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದರು ಎಂದು ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 40 – 45 ಜನ ಸಂಪರ್ಕದಲ್ಲಿದ್ದಾರೆ, ಒಪ್ಪಿಗೆ ಸಿಕ್ಕರೆ ಒಂದು ದಿನದ ಕೆಲಸ, ಆದರೆ; ಬಿಎಲ್​ ಸಂತೋಷ್ ಸ್ಫೋಟಕ ಹೇಳಿಕೆ

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕುರುಬ ಸಮುದಾಯದ ಏಕೈಕ ದೊಡ್ಡ ನಾಯಕರಾಗಿದ್ದು, ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೂ ಟಿಕೆಟ್ ನಿರಾಕರಿಸಲಾಗಿದೆ. ನೇಮಿರಾಜ ನಾಯ್ಕ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರು ಜೆಡಿಎಸ್ ನಿಂದ ಗೆದ್ದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ನಿಯಂತ್ರಿಸಲಾಯಿತು. ಈ ಗ್ಯಾಂಗ್ ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ಅಪಾಯಿಂಟ್​ಮೆಂಟ್ ಖಾತ್ರಿಪಡಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಯಡಿಯೂರಪ್ಪ ಅವರನ್ನು ವಿರೋಧಿಸುವವರಿಗೆ ಮಾತ್ರ ಅವಕಾಶ ನೀಡಲಾಗುತ್ತಿತ್ತು ಎಂದು ರೇಣುಕಾಚಾರ್ಯ ಟೀಕಿಸಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಯಾಗುವ ಏಕೈಕ ಉದ್ದೇಶದಿಂದ ಬಿಎಲ್ ಸಂತೋಷ್ ಗುಂಪುಗಾರಿಕೆ ನಡೆಸಿ 72 ಹೊಸಮುಖಗಳಿಗೆ ಟಿಕೆಟ್ ಕೊಡಿಸಿದರು: ಎಂಪಿ ರೇಣುಕಾಚಾರ್ಯ

2024ರ ಲೋಕಸಭೆ ಚುನಾವಣೆ ವೇಳೆಗೆ ಯಡಿಯೂರಪ್ಪ ಬಿಜೆಪಿ ಅಧಿಕಾರ ವಹಿಸಿಕೊಂಡರೆ ಪಕ್ಷ ಉತ್ತಮ ಪ್ರದರ್ಶನ ನೀಡಲಿದೆ. ಆದರೆ, ಯಡಿಯೂರಪ್ಪ ಅವರ ನಿವಾಸಕ್ಕೆ ಯಾರ್ಯಾರು ಭೇಟಿ ನೀಡುತ್ತಾರೆ ಮತ್ತು ಅವರ ವಿರುದ್ಧ ಯಾರಿದ್ದಾರೆ ಎಂಬುದನ್ನು ನೋಡುವುದರಲ್ಲೇ ಗ್ಯಾಂಗ್ ಮಗ್ನವಾಗಿದೆ ಎಂದು ರೇಣುಕಾಚಾರ್ಯ ದೂರಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?