AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಸಚಿವಾಕಾಂಕ್ಷಿಗಳಿಗೆ ನಿರಾಸೆ; ಸದ್ಯ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅನುಮಾನ

ಸದ್ಯ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡೌಟು ಎಂದೇ ಹೇಳಲಾಗುತ್ತಿದೆ.

Karnataka Politics: ಸಚಿವಾಕಾಂಕ್ಷಿಗಳಿಗೆ ನಿರಾಸೆ; ಸದ್ಯ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅನುಮಾನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 25, 2021 | 3:18 PM

Share

ಬೆಂಗಳೂರು: ಕರ್ನಾಟಕ ಅಧಿವೇಶನದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆಯ ಅಲೆ ಬಂದೆರಗಿದೆ. ಬಿಜೆಪಿಯ ವರಿಷ್ಠರು ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಬಗ್ಗೆ ಸದ್ಯ ಗಮನ ಹರಿಸುತ್ತಿಲ್ಲ. ಬಿ.ಎಸ್.ಯಡಿಯೂರಪ್ಪ ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ನೇಮಿಸಿದ ಕಾರಣ ಒಂದು ಮಟ್ಟಿಗಿ ಅಸಮಾಧಾನ, ಅಸಂತುಷ್ಟಿ ಕಡಿಮೆಯಾಗಿದ್ದು, ಪದೇ ಪದೇ ಕರ್ನಾಟಕ ಬಿಜೆಪಿಯ ಆಂತರಿಕ ವಿಷಯಗಳತ್ತ ಲಕ್ಷ್ಯ ಹರಿಸಲು ಬಿಜೆಪಿಯ ಉನ್ನತ ಮಟ್ಟದ ನಾಯಕರು ಸಿದ್ಧರಿಲ್ಲ ಎನ್ನಲಾಗಿದೆ.

ಅಷ್ಟೇ ಅಲ್ಲದೇ, ಈ ಮಧ್ಯೆ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ನಿಗದಿಯಾಗಲಿರುವ ಕಾರಣ ರಾಜ್ಯದಲ್ಲಿ ಪಕ್ಷದ ಸಂಘಟನಾ ಪ್ರವಾಸ ಸಹ ನಡೆಯುತ್ತಿದೆ. ಹೀಗಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದು ಬಹುತೇಕ ಅನುಮಾನ ಎನ್ನಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಿಂದ ಕೈಬಿಡಲಾಗಿದ್ದ ಹಲವು ಮುಖಂಡರು ಸದ್ಯ ಮಾಜಿಗಳಾಗಿದ್ದು, ಮತ್ತೊಮ್ಮೆ ಹಾಲಿ ಸಚಿವರಾಗಿ ಭಡ್ತಿ ಹೊಂದಲು ಯೋಜನೆ ರೂಪಿಸುತ್ತಿದ್ದಾರೆ ಎಂಬುದು ಬಿಜೆಪಿಯ ಒಳಪಾಳಯದಲ್ಲಿ ಖಚಿತವಾಗಿದೆ. ಆದರೆ ಬಿಜೆಪಿ ವರಿಷ್ಠರ ಸದ್ಯದ ಮನಸ್ಥಿತಿ ಮತ್ತು ಯೋಚನೆಗಳು ಈ ಮುಖಂಡರುಗಳಿಗೆ ಪೂರಕವಾಗಿಲ್ಲ. ಹೀಗಾಗಿ ಸದ್ಯ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡೌಟು ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: 

Bharat Bandh: ಬಂದ್​ಗೆ ಯಾವುದೇ ರಾಜಕೀಯ ಪಕ್ಷಗಳ ಬೆಂಬಲ ಕೋರಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ

Punjab CM: ಪಂಜಾಬ್ ನೂತನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಛನ್ನಿ ಯಾರು? ರಾಜಕೀಯ ಹಿನ್ನೆಲೆ ಏನು?

(Karnataka Politics CM Basavaraj Bommai Cabinet Expansion is doubt soon)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ