ಕಾಂಗ್ರೆಸ್​ನಲ್ಲಿ ಅಲ್ಪಸಂಖ್ಯಾತ ನಾಯಕರ ನಡುವೆ ಸಮರ: ಶಾಸಕ ಶಾಸಕ ಜಮೀರ್ ಅಹ್ಮದ್​ಗೆ ಮಣೆ; ಸಿ ಎಂ ಇಬ್ರಾಹಿಂ ದೂರ

Karnataka Politics: ಉತ್ತರ ಪ್ರದೇಶ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿರುವ ಕ್ಷೇತ್ರಗಳಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಂದ ಪ್ರಚಾರ ನಡೆಸುವ ಜವಾಬ್ದಾರಿ ನೀಡುವ ಸಾಧ್ಯತೆಯಿದೆ. ಶಾಸಕ ಜಮೀರ್ ಅಹ್ಮದ್​ಗೆ ಜವಾಬ್ದಾರಿ ನೀಡಿದಲ್ಲಿ ಅಸಾದುದ್ದೀನ್ ಓವೈಸಿಗೆ ತಿರುಗೇಟು ನೀಡಲು ಸಾಧ್ಯ ಎಂಬ ಲೆಕ್ಕಾಚಾರ ಕೆಲಸ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್​ನಲ್ಲಿ ಅಲ್ಪಸಂಖ್ಯಾತ ನಾಯಕರ ನಡುವೆ ಸಮರ: ಶಾಸಕ ಶಾಸಕ ಜಮೀರ್ ಅಹ್ಮದ್​ಗೆ ಮಣೆ; ಸಿ ಎಂ ಇಬ್ರಾಹಿಂ ದೂರ
ಸಿ ಎಂ ಇಬ್ರಾಹಿಂ ಮತ್ತು ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ನಾಯಕರ ನಡುವೆ ಶೀತಲ ಸಮರ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನವನ್ನು ಪಕ್ಷದ ವರಿಷ್ಠರ ಬಳಿ ಬೇಡಿಕೆಯಿಟ್ಟಿದ್ದರು. ಆದರೆ ಸಿ.ಎಂ.ಇಬ್ರಾಹಿಂ ಬೇಡಿಕೆಯನ್ನು ಈವರೆಗೂ ಕಾಂಗ್ರೆಸ್ ನಾಯಕರು ಅಷ್ಟಾಗಿ ಪರಿಗಣಿಸಿಲ್ಲ. ಹೀಗಾಗಿ ಸಿ.ಎಂ.ಇಬ್ರಾಹಿಂ ನಿಧಾನವಾಗಿ ಕಾಂಗ್ರೆಸ್​ನಿಂದ ದೂರ ಸರಿಯುತ್ತಿದ್ದಾರೆ ಎಂದ ಹೇಳಲಾಗಿದೆ. ಅಲ್ಲದೇ ಅವರು ಇತ್ತೀಚಿಗೆ ಜೆಡಿಎಸ್ ಜತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಸಹ ಲಭ್ಯವಾಗಿದೆ.

ಇನ್ನೊಂದೆಡೆ ಕಾಂಗ್ರೆಸ್ ಪಕ್ಷದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಮಣೆ ಹಾಕಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಗೆ ಶಾಸಕ ಜಮೀರ್ ಅಹ್ಮದ್ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಪರಿಚಯ ಮಾಡಿಕೊಟ್ಟಿದ್ದಾರೆ. ಶಾಸಕ ಜಮೀರ್ ಅಹಮದ್ ಖಾನ್ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಪ್ರಿಯಾಂಕಾ ಗಾಂಧಿ ಕಚೇರಿಯಿಂದ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಈಗಾಗಲೇ ಕರೆ ಬಂದಿದ್ದು, ಉತ್ತರ ಪ್ರದೇಶ ಚುನಾವಣೆಯ ಜವಾಬ್ದಾರಿಯನ್ನು ಜಮೀರ್ ಅಹ್ಮದ್​ಗೆ ವಹಿಸಲು ಪ್ರಿಯಾಂಗಾ ಗಾಂಧಿ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿರುವ ಕ್ಷೇತ್ರಗಳಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಂದ ಪ್ರಚಾರ ನಡೆಸುವ ಜವಾಬ್ದಾರಿ ನೀಡುವ ಸಾಧ್ಯತೆಯಿದೆ. ಶಾಸಕ ಜಮೀರ್ ಅಹ್ಮದ್​ಗೆ ಜವಾಬ್ದಾರಿ ನೀಡಿದಲ್ಲಿ ಅಸಾದುದ್ದೀನ್ ಓವೈಸಿಗೆ ತಿರುಗೇಟು ನೀಡಲು ಸಾಧ್ಯ ಎಂಬ ಲೆಕ್ಕಾಚಾರ ಕೆಲಸ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಹಾಗೂ ಮುಂದಿನ ವರ್ಷ ನಡೆಯಲಿರುವ ರಾಜ್ಯ ಚುನಾವಣೆಗಳ ಬಗ್ಗೆ ಮಾತುಕತೆ ನಡೆಸುವ ಸಲುವಾಗಿ ಅಕ್ಟೋಬರ್ 16 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಬಗ್ಗೆ ಕೆ.ಸಿ. ವೇಣುಗೋಪಾಲ್ ಇಂದು (ಅಕ್ಟೋಬರ್ 9) ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಸಭೆಯು ಅಕ್ಟೋಬರ್ 16, ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪಕ್ಷದ ಮುಖ್ಯ ಕಚೇರಿ ದೆಹಲಿಯಲ್ಲಿ ಈ ಸಭೆ ನಡೆಯಲಿದೆ ಎಂದು ಹೇಳಿಕೆ ಬಿಡುಗಡೆಗೊಳಿಸಲಾಗಿದೆ. ದೇಶದ ರಾಜಕೀಯ ಪರಿಸ್ಥಿತಿ, ಮುಂಬರುವ ಚುನಾವಣೆ, ಇತ್ಯಾದಿ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: 

ಸೋನಿಯಾ ಗಾಂಧಿ ನನ್ನನ್ನು ರಾಷ್ಟ್ರ ರಾಜಕೀಯಕ್ಕೆ ಕರೆದಿಲ್ಲ: ಸಿದ್ದರಾಮಯ್ಯ

ನನಗೆ ರಾಜಕೀಯ ಸಹವಾಸವೇ ಬೇಡ, ಇರುವಷ್ಟು ದಿನ ಹಿಂದುತ್ವಕ್ಕಾಗಿ ಹೋರಾಡುತ್ತೇನೆ -ಪ್ರಮೋದ್ ಮುತಾಲಿಕ್

Read Full Article

Click on your DTH Provider to Add TV9 Kannada