ಪರಿಷತ್ ಉಪಸಭಾಪತಿ ಸ್ಥಾನ ಚುನಾವಣೆ; ಬಿಜೆಪಿಗೆ ‘ಸಂಖ್ಯಾ ಬಲ’, ಕಾಂಗ್ರೆಸ್-ಜೆಡಿಎಸ್ ಒಂದಾದರೆ ಬಿಜೆಪಿಗೆ ಟಫ್ ಫೈಟ್

ಇಂದು ವಿಧಾನಪರಿಷತ್​ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸಂಖ್ಯಾ ಬಲದ ಮೇಲೆ ಬಿಜೆಪಿಗೆ ಉಪಸಭಾಪತಿ ಸ್ಥಾನ ಒಲಿಯುವ ಸಧ್ಯತೆ ಇದೆ. ಇನ್ನೊಂದೆಡೆ ಕಾಂಗ್ರೆಸ್ -ಜೆಡಿಎಸ್ ಒಂದಾದರೆ ಬಿಜೆಪಿಗೆ ತೀವ್ರ ಪೈಪೋಟಿ ಏರಲಿದೆ.

ಪರಿಷತ್ ಉಪಸಭಾಪತಿ ಸ್ಥಾನ ಚುನಾವಣೆ; ಬಿಜೆಪಿಗೆ 'ಸಂಖ್ಯಾ ಬಲ', ಕಾಂಗ್ರೆಸ್-ಜೆಡಿಎಸ್ ಒಂದಾದರೆ ಬಿಜೆಪಿಗೆ ಟಫ್ ಫೈಟ್
ಎಂ.ಕೆ.ಪ್ರಾಣೇಶ್, ಅರವಿಂದ ಕುಮಾರ್ ಅರಳಿ
Follow us
TV9 Web
| Updated By: Rakesh Nayak Manchi

Updated on:Dec 23, 2022 | 9:18 AM

ಬೆಳಗಾವಿ: ವಿಧಾನ ಪರಿಷತ್​ ಉಪಸಭಾಪತಿ ಸ್ಥಾನಕ್ಕೆ ಇಂದು ಬೆಳಗ್ಗೆ 11 ಗಂಟೆಗೆ ಚುನಾವಣೆ (Legislative council Deputy Chairman election) ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ (M.K.Pranesh) ಗೆಲುವು ಬಹುತೇಕ ಖಚಿತವಾಗಿದೆ. ಪ್ರಾಣೇಶ್ ಪರಿಷತ್ ಸದಸ್ಯತ್ವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷವೂ ದಲಿತ ಅಭ್ಯರ್ಥಿಯನ್ನ ಕಣಕ್ಕಿಳಿಸಿ ರಾಜಕೀಯ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಆದರೆ ಚುನಾವಣೆಯಿಂದ ದೂರವೇ ಇರುವ ಜೆಡಿಎಸ್ ತಟಸ್ಥ ನೀತಿ ಅನುಸತಿಸಿದೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಚುನಾವಣೆ ತೀವ್ರ ಪೈಪೋಟಿ ಏರ್ಪಡಲಿದೆ.

ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ.ಪ್ರಾಣೇಶ್ ಕಣದಲ್ಲಿದ್ದರೆ, ಕಾಂಗ್ರೆಸ್​​ ಪಕ್ಷವು ಅರವಿಂದ ಕುಮಾರ್ ಅರಳಿ (Aravind Kumar Arali) ಅವರನ್ನು ಪ್ರತಿಸ್ಪರ್ಧಿಯನ್ನಾಗಿ ಕಣಕ್ಕಿಳಿಸಿದೆ. ಪರಿಷತ್​ನಲ್ಲಿ ಅತಿ ಹೆಚ್ಚು ಸಂಖ್ಯಾ ಬಲವನ್ನು ಹೊಂದಿರುವುದರಿಂದ ಗೆಲುವು ಬಿಜೆಪಿಯ ಪಾಲಾಗುವ ಸಾಧ್ಯತೆ ಇದೆ. ಆದರೆ ರಾಜಕೀಯ ಲೆಕ್ಕಾಚಾರವನ್ನು ಹಾಕಿರುವ ಕಾಂಗ್ರೆಸ್, ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ.

ಇದನ್ನೂ ಓದಿ: ಭಾನುವಾರ ಎಲ್ಲರೂ ಟಿವಿ ಮುಂದೆ ಕುತ್ಕೊಂಡ್ರೆ ಎಲ್ಲವೂ ಗೊತ್ತಾಗುತ್ತೆ: ಕುತೂಹಲ ಹೆಚ್ಚಿಸಿದ ಜನಾರ್ದನ ರೆಡ್ಡಿ ಮಾತುಗಳು

ಪ್ರಾಣೇಶ್ ಪ್ರತಿಸ್ಪರ್ಧಿಯಾಗಿ ಅರವಿಂದ ಕುಮಾರ್ ಅರಳಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಲಿದೆ. ಬಿಜೆಪಿಗೆ ಸಂಖ್ಯಾ ಬಲ ಇದ್ದರೂ ಅಭ್ಯರ್ಥಿ ಪ್ರಾಣೇಶ್ ಅವರ ಪರಿಷತ್ ಸದಸ್ಯತ್ವದ ಕುರಿತ ಪ್ರಕರಣ ನ್ಯಾಯಾಲಯದಲ್ಲಿ ಮುಂದುವರಿದಿದಿದೆ. ಹೀಗಾಗಿ ಎಂ.ಕೆ ಪ್ರಾಣೇಶ್ ಅನರ್ಹಗೊಂಡರೆ ಲಾಭ ಆಗಬಹುದು ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್ ಹಾಕಿಕೊಂಡಿದೆ.

ಇನ್ನೊಂದೆಡೆ, ಜೆಡಿಎಸ್ ‌ಬೆಂಬಲ ನೀಡುವ ಬಗ್ಗೆ ಮಾತುಕತೆ ಅಂತಿಮವಾಗಿಲ್ಲ. ಹೀಗಾಗಿ ಜೆಡಿಎಸ್ ನಾಯಕರು ತಟಸ್ಥರಾಗಿರಲು ನಿರ್ಧರಿಸಿದ್ದಾರೆ. ಒಂದೊಮ್ಮೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮೂಲಕ ಉಪಸಭಾಪತಿ ಚುನಾವಣೆಗೆ ಹೋದರೆ ಬಿಜೆಪಿಗೆ ಚುನಾವಣೆ ಟಫ್​ ಆಗಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Fri, 23 December 22

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ