ಸ್ಥಳಕ್ಕೊಂದು ವೇಷ, ಕ್ಷಣಕ್ಕೊಂದು ಸುಳ್ಳು, ಇದು ಬಿಜೆಪಿ ನಿಜ ಸ್ವರೂಪ; ಬಿಜೆಪಿ ವಿರುದ್ಧ ಎಚ್​​ಡಿಕೆ ಟೀಕಾ ಪ್ರಹಾರ

JDS ಸರ್ಕಾರ ಬಂದರೆ ಆರೂವರೆ ಕೋಟಿ ಕನ್ನಡಿಗರ ಎಟಿಎಂ ಆಗುತ್ತದೆ, ರೈತರು, ಕಾರ್ಮಿಕರು, ದೀನ ದಲಿತರು, ವಿಕಲಚೇತನರ ಎಟಿಎಂ ಆಗುತ್ತದೆ ಎಂದು ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಹೇಳಿದರು.

ಸ್ಥಳಕ್ಕೊಂದು ವೇಷ, ಕ್ಷಣಕ್ಕೊಂದು ಸುಳ್ಳು, ಇದು ಬಿಜೆಪಿ ನಿಜ ಸ್ವರೂಪ; ಬಿಜೆಪಿ ವಿರುದ್ಧ ಎಚ್​​ಡಿಕೆ ಟೀಕಾ ಪ್ರಹಾರ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ
Follow us
TV9 Web
| Updated By: Rakesh Nayak Manchi

Updated on:Dec 31, 2022 | 1:43 PM

ಬೆಂಗಳೂರು: ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ (H.D.Kumaraswamy) ಅವರು ಸರಣಿ ಟ್ವೀಟ್ (Tweet against BJP) ಮಾಡಿ ಟೀಕಾ ಪ್ರಹಾರ ನಡೆಸಿದ್ದಾರೆ. ಸ್ಥಳಕ್ಕೊಂದು ವೇಷ, ಕ್ಷಣಕ್ಕೊಂದು ಸುಳ್ಳು, ಇದು ಬಿಜೆಪಿ ನಿಜ ಸ್ವರೂಪವಾಗಿದೆ. ನೀವು ಸರ್ವಾಧಿಕಾರಿ ಹಿಟ್ಲರ್​ ಸಂಪುಟದ ಗೊಬೆಲ್ಲನ ಹೊಸ ಅವತಾರ, ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳುಬೇಕಾದ ಕರ್ಮ ನಿಮಗೇಕೆ ಬಂತು? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ, ಜೆಡಿಎಸ್ (JDS) ಗೆದ್ದರೆ ಒಂದು ಕುಟುಂಬದ ಎಟಿಎಂ ಆಗುತ್ತದೆ ಎಂದು ಹೇಳಿದ್ದೀರಿ. JDS ಸರ್ಕಾರ ಬಂದರೆ ಆರೂವರೆ ಕೋಟಿ ಕನ್ನಡಿಗರ ಎಟಿಎಂ ಆಗುತ್ತದೆ. ರೈತರು, ಕಾರ್ಮಿಕರು, ದೀನ ದಲಿತರು, ವಿಕಲಚೇತನರ ಎಟಿಎಂ ಆಗುತ್ತದೆ ಎಂದರು. ಬರೀ ಬೂಟಾಟಿಕೆ ಪಾರ್ಟಿ (ಬಿಜೆಪಿ) ಸುಳ್ಳುಕೋರರ ಸಂತೆ ಎನ್ನುವುದಕ್ಕೆ ಮಂಡ್ಯದಲ್ಲಿ ಸುಖಾಸುಮ್ಮನೆ ಅಲವತ್ತುಕೊಂಡ ನಿಮ್ಮ ಅಸತ್ಯದ ಹಾಹಾಕಾರದ ವರಸೆಯೇ ಸಾಕ್ಷಿ. ಸ್ಥಳಕ್ಕೊಂದು ವೇಷ, ಕ್ಷಣಕ್ಕೊಂದು ಸುಳ್ಳು. ಇದು ನಿಮ್ಮ ಪಕ್ಷದ ನಿಜ ಸ್ವರೂಪ ಎಂದು ಕುಮಾರಸ್ವಾಮಿ ಹೇಳಿದರು.

ನೀವು ಸರ್ವಾಧಿಕಾರಿ ಹಿಟ್ಲರನ ಸಂಪುಟದ ಗೊಬೆಲ್ಲನ ಹೊಸ ಅವತಾರ!! ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳಬೇಕಾದ ಕರ್ಮ ನಿಮಗೇಕೆ ಬಂತು ಅಮಿತ್ ಶಾ ಅವರೇ? ಜೆಡಿಎಸ್ ಗೆದ್ದರೆ ಕರ್ನಾಟಕ ಒಂದು ಕುಟುಂಬದ ಎಟಿಎಂ ಆಗುತ್ತದೆಂದು ಜಾಗಟೆ ಹೊಡೆದಿದ್ದೀರಿ. ಜೆಡಿಎಸ್ ಸರಕಾರ ಬಂದರೆ, ಅದು ಆರೂವರೆ ಕೋಟಿ ಕನ್ನಡಿಗರ ಎಟಿಎಂ ಆಗುತ್ತದೆ. ರೈತರ, ಕಾರ್ಮಿಕರ, ದೀನ ದಲಿತರ, ಅಶಕ್ತರ, ವಿಕಲಚೇತನರ ಎಟಿಎಂ ಆಗುತ್ತದೆ ಎಂದರು.

ಬಿಜೆಪಿ ಪಕ್ಷದ ಎಟಿಎಂಗಳ ಪಟ್ಟಿ ನೀಡಿದ ಎಚ್​ಡಿಕೆ

ಜೆಡಿಎಸ್ ಜನರ ಎಟಿಎಂ. ನಮ್ಮ ಪಾಲಿಗೆ ಎಟಿಎಂ ಎಂದರೆ ‘ಎನಿ ಟೈಮ್ ಮನುಷ್ಯತ್ವ’ ಎಂದು. ನಿಮ್ಮ ಪಾಲಿಗೆ ಅದು ‘ಎನಿ ಟೈಮ್ ಮೋಸ’. ಸುಳ್ಳಿನ ಜಾಗಟೆ ಹೊಡೆದೇ ದೇಶವನ್ನು ಅದೋಗತಿಗೆ ತಳ್ಳಿದ್ದೀರಿ. ಶಾ ಅವರೇ, ದೇಶದ ಮಾತು ಹಾಗಿರಲಿ; ಕರ್ನಾಟದಲ್ಲಿ ನಿಮ್ಮ ಪಕ್ಷದ ಎಟಿಎಂಗಳ ಪಟ್ಟಿ ಮೂಡಿದೆ ನೋಡಿ ಎಂದರು.

ಕರ್ನಾಟಕದ ಬಿಜೆಪಿ ಎಟಿಎಂಗಳು: 40% ಕಮೀಷನ್, ಪಿಎಸ್​​ಐ ಹಗರಣ, ಪ್ರಶ್ನೆಪತ್ರಿಕೆ ಸೋರಿಕೆ, ಸಹ ಪ್ರಾಧ್ಯಾಪಕರ ನೇಮಕ ಹಗರಣ, ವೈದ್ಯ ಪ್ರಾಧ್ಯಾಪಕರ ನೇಮಕ ಹಗರಣ, ಕೋವಿಡ್​​ನಲ್ಲಿ ಕೊಳ್ಳೆ, ಕಾಸಿಗಾಗಿ ಪೋಸ್ಟಿಂಗ್, ಗಂಗಾಕಲ್ಯಾಣ ಕರ್ಮಕಾಂಡ, ಚಿಲುಮೆ ಹಗರಣ. ಇದು ಅಪೂರ್ಣ ಪಟ್ಟಿ, ಅದು ಕೂಡ ದೊಡ್ಡದಿದೆ. ಬೇಕಾ ಅಮಿತ್ ಶಾ (Amit Shah) ಅವರೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ದೇವನಹಳ್ಳಿ ಆವತಿ ಗ್ರಾಮದಲ್ಲಿ ರಕ್ಷಣಾ ದಳ ವಸತಿ, ಆಡಳಿತ ಕಚೇರಿ ಉದ್ಘಾಟನೆ ಮಾಡಿದ ಅಮಿತ್ ಶಾ

ಕರ್ನಾಟಕದ ನಿಮ್ಮ ಬಿಜೆಪಿ ಸರಕಾರ ಕೇವಲ 40 ಪರ್ಸೆಂಟ್ ಸರಕಾರ ಅಲ್ಲವೇ ಅಲ್ಲ. ಅದು 55-60 ಪರ್ಸೆಂಟ್ ಸರಕಾರ!! ನಿಮಗೂ ಮಾಹಿತಿ ಇರುತ್ತದೆ, ಕರ್ನಾಟಕ ನಿಮ್ಮ ಪಕ್ಷಕ್ಕೂ ಎಟಿಎಂ ಹೌದಲ್ಲವೇ? ಈ ಸತ್ಯ ಯಾಕೆ ಮರೆಮಾಚಿದಿರಿ? ಮಂಡ್ಯ ಜನರ ಮುಂದೆ ನಿಮ್ಮ ದಮ್ಮು ತಾಕತ್ತು ನಡೆಯಲ್ಲ, ಅರಿತುಕೊಳ್ಳಿ ಎಂದರು.

ಬಿಜೆಪಿಯಲ್ಲಿನ ರಾಜಕೀಯ ಕುಟುಂಬದ ಪಟ್ಟಿ ನೀಡಿದ ಎಚ್​ಡಿಕೆ

ಇನ್ನು ಕುಟುಂಬದ ವಿಷಯ, ನಿಮ್ಮ ಪಕ್ಷದ ಕುಟುಂಬ ರಾಜಕಾರಣದ ಲೆಕ್ಕ ಗೊತ್ತಿಲ್ಲವೇ? ನಿಮ್ಮ ಸುಪುತ್ರ ಜಯ ಶಾ ಯಾವ ಸೀಮೆ ಕ್ರಿಕೆಟ್ ಪಂಡಿತರು ಎಂದು ಬಿಸಿಸಿಐನಲ್ಲಿ ಕೂತಿದ್ದಾರೆ? ಬಿಸಿಸಿಐನಲ್ಲಿ ಯಾರು ಇರಬೇಕು, ಇರಬಾರದೆಂದು ಸುಪ್ರೀಂ ಕೋರ್ಟಿನ ಸ್ಪಷ್ಟ ಆದೇಶವಿದೆ. ಆ ಆದೇಶಕ್ಕೆ ನಿಮ್ಮ ಮಗ ಅತೀತರೇ? ಈಗ ಹೇಳಿ, ಬಿಸಿಸಿಐ ಯಾರ ಪಾಲಿನ ಎಟಿಎಂ? ಎಂದರು.

ಕರ್ನಾಟಕ ಬಿಜೆಪಿ ಫ್ಯಾಮಿಲಿ ಪಾಲಿಟಿಕ್ಸ್ ಪಟ್ಟಿ ಇಲ್ಲಿದೆ ನೋಡಿ. ಯಡಿಯೂರಪ್ಪ ಮತ್ತು ಸನ್ಸ್, ರವಿಸುಬ್ರಮಣ್ಯ – ತೇಜಸ್ವಿ ಸೂರ್ಯ, ಅಶೋಕ್ -ರವಿ, ವಿ.ಸೋಮಣ್ಣ ಮತ್ತು ಸನ್, ಅರವಿಂದ ಲಿಂಬಾವಳಿ -ರಘು, ಎಸ್.ಆರ್.ವಿಶ್ವನಾಥ್ – ವಾಣಿ ವಿಶ್ವನಾಥ್, ಜಗದೀಶ್ ಶೆಟ್ಟರ್ – ಪ್ರದೀಪ್ ಶೆಟ್ಟರ್, ಮುರುಗೇಶ್ ನಿರಾಣಿ – ಹನುಮಂತ ನಿರಾಣಿ, ಜಿ ಎಸ್ ಬಸವರಾಜು – ಜ್ಯೋತಿ ಗಣೇಶ್, ಜಾರಕಿಹೊಳಿ ಮತ್ತು ಬ್ರದರ್, ಜೊಲ್ಲೆ ಮತ್ತು ಜೊಲ್ಲೆ, ಅಂಗಡಿ ಕುಟುಂಬ, ಉದಾಸಿ ಕುಟುಂಬ, ಶ್ರೀರಾಮುಲು ಕುಟುಂಬ, ರೆಡ್ಡಿ ಮತ್ತು ರೆಡ್ಡಿ. ಇದು ಕೂಡ ಅಪೂರ್ಣ ಪಟ್ಟಿಯೇ. ರಾಷ್ಟ್ರೀಯ ಪಟ್ಟಿ ಬೇಕಿದ್ದರೆ ಹೇಳಿ, ಇದರ ಹತ್ತರಷ್ಟಿದೆ ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ಇವತ್ತು ಬೆಂಗಳೂರಿನಿಂದ ಹೊರಡುವ ಮುನ್ನ ಇದಕ್ಕೆಲ್ಲಾ ಉತ್ತರ ಕೊಡಿ ಅಮಿತ್ ಶಾ ಅವರೇ. ಎಷ್ಟಾದರೂ ನೀವು ಸ್ವಯಂ ಘೋಷಿತ ಸಾಚಾ ಅಲ್ಲವೇ? ಉತ್ತರ ಹೇಳಿ ಹೋದರೆ ನಾವೂ ಧನ್ಯರಾಗುತ್ತೇವೆ. ಸತ್ಯ ಅಜರಾಮರ, ಅಸತ್ಯ ನಿಮ್ಮ ಹಣೆಬರ. ಸತ್ಯದ ಮುಂದೆ ದಮ್ಮು ತಾಕತ್ತು ದುರ್ಬಲ ಎಂದರು.

ಇದನ್ನೂ ಓದಿ: ಮಂಡ್ಯದವರನ್ನು ಮೋಸ ಮಾಡಲು ಆಗಲ್ಲ ಅಮಿತ್ ಶಾ ಜೀ, ಅಪರೇಷನ್ ಕಮಲಕ್ಕೆ ಯಾವ ಎಟಿಎಂನಿಂದ ಬಂತು? ಹೆಚ್​​ಡಿಕೆ ವಾಗ್ದಾಳಿ

ಪಂಚರತ್ನ ರಥಯಾತ್ರೆ ನಿಮ್ಮ ಕಣ್ಣು ಕುಕ್ಕಿದೆ. ಸಾಲಮನ್ನಾ ನಿಮ್ಮ ನಿದ್ದೆಗೆಡಿಸಿದೆ. ಎಷ್ಟೇ ಆದರೂ ಕೇಂದ್ರದ ಸಹಕಾರ ಸಚಿವರಾದ ನಿಮಗೆ ಸಾಲಮನ್ನಾ ದುಃಸ್ವಪ್ನದಂತೆ ಕಾಡುತ್ತಿದೆ ಎನ್ನುವುದು ಗೊತ್ತು. ಹೆಚ್.ಡಿ.ದೇವೇಗೌಡರು ಮತ್ತು ನನ್ನ ಸಾಧನೆಗಳು ನಿಮ್ಮ ಚಿಂತೆ ಹೆಚ್ಚಿಸಿವೆ. ಇನ್ನಾದರೂ ಸುಳ್ಳಿನ ಜಾಗಟೆ ಬಾರಿಸುವುದು ನಿಲ್ಲಿಸಿ ಎಂದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Sat, 31 December 22

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು