ಮತ್ತೆ ರಾಯಣ್ಣ ಬ್ರಿಗೇಡ್​ ಆರಂಭಿಸುವ ಸುಳಿವು ನೀಡಿದ ಈಶ್ವರಪ್ಪ

2018ರ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ಹುಟ್ಟು ಹಾಕಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್​. ಈ ರಾಯಣ್ಣ ಬ್ರಿಗೇಡ್​ ರಾಜ ಬಿಜೆಪಿಗೆ ಮಗ್ಗಲು ಮುಳ್ಳಾಗಿತ್ತು. ಇದೀಗ ಕೆಎಸ್​ ಈಶ್ವರಪ್ಪ ಮತ್ತೆ ರಾಯಣ್ಣ ಬ್ರಿಗೇಡ್​ ಆರಂಭಿಸಲು ಮುಂದಾಗಿದ್ದಾರೆ.

ಮತ್ತೆ ರಾಯಣ್ಣ ಬ್ರಿಗೇಡ್​ ಆರಂಭಿಸುವ ಸುಳಿವು ನೀಡಿದ ಈಶ್ವರಪ್ಪ
ಕೆಎಸ್​ ಈಶ್ವರಪ್ಪ
Follow us
Basavaraj Yaraganavi
| Updated By: ವಿವೇಕ ಬಿರಾದಾರ

Updated on: Apr 30, 2024 | 10:04 AM

ಶಿವಮೊಗ್ಗ, ಏಪ್ರಿಲ್​ 30: ಹಿಂದುಳಿದವರಿಗೆ, ಅತಿ ಹಿಂದುಳಿದವರಿಗೆ ನ್ಯಾಯ ಸಿಗಬೇಕು ಅಂತ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ (Rayanna Brigade) ಪ್ರಾರಂಭಿಸಿದ್ದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಬೇಕು ಅಂತ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಮತ್ತು ಕೇಂದ್ರ ಸಚಿವ ಅಮಿತ್ ಶಾ (Amit Shah) ಹೇಳಿದರು. ಮರು ಮಾತನಾಡದೆ ನಿಲ್ಲಿಸಿದೆ. ಆ ಸಂಘಟನೆ ಈಗ ಇದ್ದಿದ್ದರೆ ಹಿಂದುಳಿದವರಿಗೆ ನ್ಯಾಯ ಸಿಗುತ್ತಿತ್ತೇನೋ. ನಾನು ಯಾವಾಗಲೂ ಹಿರಿಯರ ಮಾತು‌ ಮೀರಿರಲಿಲ್ಲ ಹೀಗಾಗಿ ಕೈಬಿಟ್ಟೆ. ನಾನು ಆವಾಗಲೇ ಅವರ ಮಾತು ಮೀರಿದ್ದರೆ ಸರಿ ಹೋಗುತಿತ್ತು. ಚುನಾವಣೆ ಮುಗಿದ ನಂತರ ಹಿಂದುಳಿದವರ, ದಲಿತರ ರಾಜ್ಯ ಮಟ್ಟದ ಸಭೆ ಕರೆಯುತ್ತೇನೆ ಎಂದು ಮಾಜಿ ಸಚಿವ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ (KS Ehswarappa) ಹೇಳಿದರು. (ಹೀಗೆ ಹೇಳುವ ಮೂಲಕ ಕೆಎಸ್​ ಈಶ್ವರಪ್ಪ ಅವರು ಮತ್ತೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್​ ಆರಂಭಿಸುವ ಸುಳಿವು ನೀಡಿದ್ದಾರೆ).

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ. ಬಿಜೆಪಿ ನನ್ನ ಮಾತೃ ಸಂಸ್ಥೆ, ಈ ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ. ಕ್ಷೇತ್ರದಲ್ಲಿ ನನಗೆ ದಿನದಿಂದ ದಿನಕ್ಕೆ ಬೆಂಬಲ ಹೆಚ್ಚಾಗುತ್ತಿದೆ. ಜನ ನಿರೀಕ್ಷೆಗೆ ಮೀರಿ ಬೆಂಬಲ ಕೊಡುತ್ತಿದ್ದಾರೆ ಎಂದು ತಿಳಿಸಿದರು.

ಬಗರ್ ಹುಕಂ ಜಮೀನು ಸಮಸ್ಯೆ ಇನ್ನೂ ಹಾಗೆ ಇದೆ. ಸಾವಿರಾರು ಸಂತ್ರಸ್ತರಿಗೆ ಈವರೆಗೂ ಹಕ್ಕುಪತ್ರ ಸಿಕ್ಕಿಲ್ಲ. ಮಲೆನಾಡು ರೈತ ಹೋರಾಟ ಸಮಿತಿ ನನಗೆ ಬೆಂಬಲ ನೀಡಿದೆ. ಇವರ ಹೋರಾಟಕ್ಕೆ ನಾನು ಸಹ ಸಾಥ್ ನೀಡುತ್ತೇನೆ. ಚುನಾವಣೆ ಬಳಿಕವೂ ನನ್ನ ಹೋರಾಟ ಮುಂದುವರಿಯುತ್ತೆ. ಚುನಾವಣೆ ಬಳಿಕ ರಾಜ್ಯಮಟ್ಟದ ಸಭೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಮಾವ ಈಶ್ವರಪ್ಪಗಾಗಿ ಮನೆಮನೆ ತಿರುಗಿ ಕರಪತ್ರ ಹಂಚುತ್ತಾ ವೋಟು ಕೇಳುತ್ತಿರುವ ಶಾಲಿನಿ ಕಾಂತೇಶ್!

ಸಂಗೊಳ್ಳಿ ರಾಯಣ್ಣ ಬ್ರಿಗೇಡ್​

ಪಕ್ಷ ರಾಜಕಾರಣದಲ್ಲಿ ಅವರ ಅಸ್ತಿತ್ವ ಅಲುಗಾಡಿದಾಗ, ಬಿಜೆಪಿಗೆ ಹಿಂದುಳಿದ ವರ್ಗಗಳ ನಾಯಕರೊಬ್ಬರ ಅಗತ್ಯ ಉದ್ಭವಿಸಿದಾಗ, ಕಾಂಗ್ರೆಸ್​ನ ಹಿಂದುಳಿದ ವರ್ಗಗಳ, ಮುಖ್ಯವಾಗಿ ಕುರುಬ ಸಮುದಾಯದ ಸಿದ್ದರಾಮಯ್ಯನವರಿಗೆ ಪರ್ಯಾಯ ನಾಯಕತ್ವಕ್ಕಾಗಿ ಈಶ್ವರಪ್ಪ ಕಂಡುಕೊಂಡ ದಾರಿ ರಾಯಣ್ಣ ಬ್ರಿಗೇಡ್. 2016ರ ಡಿಸೆಂಬರ್​ನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿ ಮಾಜಿ ಸಚಿವ ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್​ ಆರಂಭಿಸಿದರು. 2018ರ ವಿಧಾನಸಭೆ ಚುನಾವಣೆಗೂ ಮುಂಚೆ ರಾಯಣ್ಣ ಬ್ರಿಗೇಡ್​ ಆಂಭವಾಗಿದ್ದು, ಬಿಜೆಪಿಗೆ ಮಗ್ಗಲು ಮುಳ್ಳಾಗಿತ್ತು.

ಈಗ ಮತ್ತೆ ಈಶ್ವರಪ್ಪನವರ ರಾಜಕೀಯ ಭವಿಷ್ಯ ಡೋಲಾಯಮಾನವಾಗಿರುವ ಸಂದರ್ಭದಲ್ಲಿ ಮತ್ತೆ ರಾಯಣ್ಣನ ಮೊರೆ ಹೋಗಿದ್ದಾರೆ. ಹೀಗಾಗಿ ಈಶ್ವರಪ್ಪ ಅವರು ರಾಯಣ್ಣ ಬ್ರಿಗೇಡ್​ಗೆ ಮರುಜೀವ ನೀಡಲು ಯತ್ನಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ