AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಬಿ.ಎಸ್.ಯಡಿಯೂರಪ್ಪ ಅವರಲ್ಲಿ ನನಗೆ ಪ್ರೀತಿಯೂ ಇಲ್ಲ, ದ್ವೇಷವೂ ಇಲ್ಲ: ಸಿದ್ದರಾಮಯ್ಯ

Karnataka Politics: ರಸ್ತೆಗುಂಡಿಗೆ ಬಿದ್ದು ಅಹಿತಕರ ಘಟನೆಗಳು ನಡೆಯುತ್ತಿವೆ. ಆ ಸಮಸ್ಯೆ ಬಗೆಹರಿಸುವ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ. ಆದರೆ ತಾವು ದೇಶಭಕ್ತರು ಎಂದು ಹೇಳಿಕೊಳ್ಳುತ್ತಾರೆ ಎಂದು ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Siddaramaiah: ಬಿ.ಎಸ್.ಯಡಿಯೂರಪ್ಪ ಅವರಲ್ಲಿ ನನಗೆ ಪ್ರೀತಿಯೂ ಇಲ್ಲ, ದ್ವೇಷವೂ ಇಲ್ಲ: ಸಿದ್ದರಾಮಯ್ಯ
ಜನ್ಮದಿನದಂದು ಮಾತ್ರ ಸಿದ್ದರಾಮಯ್ಯ ಜೊತೆ ಭೇಟಿ ಮಾಡಿದ್ದೆನಷ್ಟೇ; ಆನಂತರ ಅವರ ಭೇಟಿ ಮಾಡುವ ಅಗತ್ಯವೂ ನನಗಿಲ್ಲ: ಯಡಿಯೂರಪ್ಪ ಟ್ವೀಟ್​
TV9 Web
| Edited By: |

Updated on: Oct 11, 2021 | 1:27 PM

Share

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನನಗೆ ಪ್ರೀತಿಯೂ ಇಲ್ಲ ದ್ವೇಷವೂ ಇಲ್ಲ. ನಾನು ರಾಷ್ಟ್ರ ರಾಜಕಾರಣಕ್ಕೆ ತೆರಳುವ ಬಗ್ಗೆ ನನ್ನ, ಸೋನಿಯಾ ಗಾಂಧಿಯ (Sonia Gandhi) ನಡುವೆ ಆ ಚರ್ಚೆ ಆಗಿಲ್ಲ. ಜತೆಗೆ ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯೂ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಬೆಂಗಳೂರು ನಗರ ಉಸ್ತುವಾರಿಗಾಗಿ ಕಿತ್ತಾಟ ಶುರುವಾಗಿದೆ.ಇವರಿಗೆ ಬೇರೆ ಲಾಭ ಇದೆ ಹೀಗಾಗಿ ಪೈಪೋಟಿ ಬೀಳುತ್ತಾರೆ. ರಸ್ತೆಗುಂಡಿಗೆ ಬಿದ್ದು ಅಹಿತಕರ ಘಟನೆಗಳು ನಡೆಯುತ್ತಿವೆ. ಆ ಸಮಸ್ಯೆ ಬಗೆಹರಿಸುವ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ. ಆದರೆ ತಾವು ದೇಶಭಕ್ತರು ಎಂದು ಹೇಳಿಕೊಳ್ಳುತ್ತಾರೆ ಎಂದು ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣದಲ್ಲಿ ತೊಡಗಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದರು. ಆದರೆ, ಸಿದ್ದರಾಮಯ್ಯ ಮಾತ್ರ ರಾಜ್ಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಸ್ಪಷ್ಟನೆ ನೀಡಿದ್ದು ಕುತೂಹಲ ಮೂಡಿಸಿತ್ತು. ಇದೀಗ ಕಾಂಗ್ರೆಸ್  ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ರಾಹುಲ್ ಗಾಂಧಿ (Rahul Gandhi) ಪರ ಬ್ಯಾಟಿಂಗ್ ಮಾಡಿರುವ ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂಬುದು ನಮ್ಮ ಪಕ್ಷದ ಎಲ್ಲರ ಆಸೆ ಎಂದಿದ್ದಾರೆ. ಹಾಗೇ, ಕರ್ನಾಟಕದಲ್ಲಿ ಬಿಜೆಪಿಯ ವಾಸ್ತವ ಸ್ಥಿತಿ, ಜೆಡಿಎಸ್​ ಕುಟುಂಬ ರಾಜಕಾರಣ, ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ.

2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿರುವ ಸಿದ್ದರಾಮಯ್ಯ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಂಡೆ ಗಾರ್ಡಿಯನ್​ಗೆ ಸಂದರ್ಶನ ನೀಡಿರುವ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆ, ಕರ್ನಾಟಕದ ರಾಜಕಾರಣ ಮುಂತಾದ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಹೈಕಮಾಂಡ್​ನಿಂದ ಆಹ್ವಾನ ಬಂದರೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿಸಿಕೊಳ್ಳದಿರುವ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ, ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ ಎಂದು ನಾನು ಈ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾಗ, ಅವರು ನನ್ನನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಆಹ್ವಾನಿಸಿದರು. ನಾನು ಈ ಹಿಂದೆ 2 ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ, ಆದರೆ ಜನರು ನನ್ನನ್ನು ಬೆಂಬಲಿಸಲಿಲ್ಲ. ಬಹುಶಃ ನಾನು ರಾಜ್ಯದ ರಾಜಕಾರಣದಲ್ಲಿ ಮುಂದುವರಿಯಬೇಕೆಂದು ಕರ್ನಾಟಕದ ಜನರು ಬಯಸುತ್ತಾರೆ. ನಾನು ಎಂದಿಗೂ ಪ್ರಧಾನಿ ಹುದ್ದೆಯ ಕನಸು ಕಂಡಿಲ್ಲ. ರಾಷ್ಟ್ರ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ನಮ್ಮ ಪಕ್ಷದಲ್ಲಿ ಅನೇಕ ಅರ್ಹ ನಾಯಕರು ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: 

Raghavendra Hitnal: ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ; ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿಕೆ

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ವೀಕ್ ಆಗಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು