ಕರಾವಳಿಯಿಂದ ಗೆದ್ದಿದ್ದು ಇಬ್ಬರೇ, ಒಬ್ಬರು ಸ್ಪೀಕರಾದರೆ ಮತ್ತೊಬ್ಬರು ಹೊಸಬರು; ಇನ್ಯಾರಿಗೆ ಸಚಿವ ಸ್ಥಾನ?

ದೆಹಲಿಯಲ್ಲಿ ಸಚಿವ ಸಂಪುಟ ಸರ್ಕಸ್ ಜೋರಾಗಿದೆ. ಈ ನಡುವೆ ಕರಾವಳಿ ಕೋಟಾದ ಸಚಿವ ಸ್ಥಾನಕ್ಕೆ ಲಾಬಿ ಹೆಚ್ಚಾಗಿದೆ. ದಕ್ಷಿಣಕನ್ನಡ - ಉಡುಪಿ ಜಿಲ್ಲೆಯಲ್ಲಿ ಕೇವಲ ಎರಡು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿದ್ದು, ಅದರಲ್ಲಿಯೂ ಯುಟಿ ಖಾದರ್‌‌ ಅವರನ್ನು ಸಭಾಧ್ಯಕ್ಷ ಸ್ಥಾನದಲ್ಲಿ ಕುಳ್ಳಿರಿಸಿದ್ದು ಇದೀಗ ಪರಿಷತ್ ಸದಸ್ಯರು ಮಿನಿಷ್ಟರ್ ರೇಸ್‌ನಲ್ಲಿದ್ದಾರೆ.

ಕರಾವಳಿಯಿಂದ ಗೆದ್ದಿದ್ದು ಇಬ್ಬರೇ, ಒಬ್ಬರು ಸ್ಪೀಕರಾದರೆ ಮತ್ತೊಬ್ಬರು ಹೊಸಬರು; ಇನ್ಯಾರಿಗೆ ಸಚಿವ ಸ್ಥಾನ?
ಯುಟಿ ಖಾದರ್ ಮತ್ತು ಅಶೋಕ್ ರೈ
Follow us
Ganapathi Sharma
|

Updated on: May 25, 2023 | 8:37 PM

ಬೆಂಗಳೂರು: ದೆಹಲಿಯಲ್ಲಿ ಸಚಿವ ಸಂಪುಟ ಸರ್ಕಸ್ ಜೋರಾಗಿದೆ. ಈ ನಡುವೆ ಕರಾವಳಿ ಕೋಟಾದ ಸಚಿವ ಸ್ಥಾನಕ್ಕೆ ಲಾಬಿ ಹೆಚ್ಚಾಗಿದೆ. ದಕ್ಷಿಣಕನ್ನಡ – ಉಡುಪಿ ಜಿಲ್ಲೆಯಲ್ಲಿ ಕೇವಲ ಎರಡು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿದ್ದು, ಅದರಲ್ಲಿಯೂ ಯುಟಿ ಖಾದರ್‌‌ (UT Khader) ಅವರನ್ನು ಸಭಾಧ್ಯಕ್ಷ ಸ್ಥಾನದಲ್ಲಿ ಕುಳ್ಳಿರಿಸಿದ್ದು ಇದೀಗ ಪರಿಷತ್ ಸದಸ್ಯರು ಮಿನಿಷ್ಟರ್ ರೇಸ್‌ನಲ್ಲಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯ ಸಂಪುಟ ಸರ್ಕಸ್ ದಿಲ್ಲಿಗೆ ಶಿಫ್ಟ್ ಆಗಿದೆ. ಯಾರಿಗೆ ಸಚಿವ ಸ್ಥಾನ ಸಿಗುತ್ತೆ, ಪೂರ್ಣ ಮಂತ್ರಿ ಮಂಡಲ ಯಾವಾಗ ಆಗುತ್ತೆ ಎಂಬ ಕುತೂಹಲ ಎಲ್ಲರಲ್ಲಿಯೂ ಇದೆ. ಇದರ ಜೊತೆ ಮಂಗಳೂರಿನ ಸೋಲಿಲ್ಲದ ಸರದಾರ ಯುಟಿ ಖಾದರ್ ಅವರನ್ನು ಸ್ಪೀಕರ್ ಸ್ಥಾನದಲ್ಲಿ ಕುಳ್ಳಿರಿಸಿದ ಬಳಿಕ ಕರಾವಳಿ ಕೋಟಾದ ಸಚಿವ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯರ ಲಾಬಿ ಜೋರಾಗಿಯೆ ನಡೆಯುತ್ತಿದೆ.

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ 13 ಸ್ಥಾನಗಳಲ್ಲಿ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿತ್ತು. ಅದರಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಮಂಗಳೂರು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಸಭಾಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ಹೀಗಾಗಿ ಕರಾವಳಿಯ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಜಿಜ್ಞಾಸೆ ಮತದಾರರಲ್ಲಿ ಮೂಡಿದೆ. ಆದ್ರೆ ಈ ಅವಕಾಶವನ್ನು ಪರಿಷತ್ ಸದಸ್ಯರು ಬಳಸಿಕೊಳ್ಳಲು ಮುಂದಾಗಿದ್ದು ಎಂ.ಎಲ್.ಸಿಯೂ ಆಗಿರುವ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಪಡೆಯುವ ಪ್ರಯತ್ನದಲ್ಲಿದ್ದಾರೆ. ಇವರ ಜೊತೆ ಎಂ.ಎಲ್.ಸಿ ಮಂಜುನಾಥ್ ಭಂಡಾರಿ ಹೆಸರು ಸಹ ಕೇಳಿಬಂದಿದೆ.

ಫಲಿತಾಂಶ ಬಂದ ದಿನ ಯುಟಿ ಖಾದರ್ ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಾರೆ. ಇದರ ಜೊತೆ ಯುಟಿ ಖಾದರ್‌‌ಗೆ ಉಪಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದು ಜನ ಅಂದುಕೊಂಡಿದ್ದರು. ಆದ್ರೆ ಅನೀರಿಕ್ಷಿತವಾಗಿ ನಡೆದ ಬೆಳವಣಿಗೆಯಲ್ಲಿ ಖಾದರ್ ಅವರನ್ನು ಸಭಾಧ್ಯಕ್ಷ ಸ್ಥಾನದಲ್ಲಿ ಕುಳ್ಳಿರಿಸಿದ್ದು ಜಿಲ್ಲೆಯ ಮತದಾರರಿಗೆ ಕೊಂಚ ಬೇಸರವನ್ನು ಮೂಡಿಸಿದೆ. ಈ ನಡುವೆಯೂ ಸ್ಪೀಕರ್ ಆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಸ್ಪೀಕರ್ ಯುಟಿ ಖಾದರ್‌ಗೆ ಗುರುವಾರ ಅದ್ದೂರಿ ಸ್ವಾಗತ ನೀಡಲಾಯಿತು. ಇದೇ ಸಂದರ್ಭ ಮಾತನಾಡಿದ ಯುಟಿ ಖಾದರ್ ರಾಜಕಾರಣದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು, ಸಭಾಧ್ಯಕ್ಷನಾದರೂ ನನ್ನ ಸೇವೆಗೆ ಯಾವುದೇ ಅಡ್ಡಿಯಾಗಲ್ಲ, ಕ್ಷೇತ್ರದ ಜನರ ಕಾರ್ಯಕರ್ತರ ಜೊತೆ ನಿಕಟ ಸಂಪರ್ಕ ಇರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: UT Khader Profile: ವಿಧಾನಸಭೆ ನೂತನ ಸ್ಪೀಕರ್ ಯುಟಿ ಖಾದರ್, ಇಲ್ಲಿದೆ ಕರಾವಳಿ ರಾಜಕಾರಣಿಯ ರಾಜಕೀಯ ಖದರ್

ಇದೆಲ್ಲದರ ನಡುವೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿರುವ ಮಾಜಿ ಸಚಿವ ರಮನಾಥ್ ರೈ‌ ಅವರನ್ನು ಎಂ.ಎಲ್.ಸಿ ಮಾಡಿ ಸಚಿವ ಸ್ಥಾನ ನೀಡಿ ಎಂಬ ಒತ್ತಾಯ ಕೂಡ ಕೇಳಿ ಬರುತ್ತಿದೆ. ಸದ್ಯ ಹೈಕಮಾಂಡ್ ಅಂಗಳದಲ್ಲಿ ಸಚಿವ ಸಂಪುಟದ ಚೆಂಡು ಇದ್ದು ಸದ್ಯದಲ್ಲೇ ಈ ಕುತೂಹಲಗಳಿಗೆ ತೆರೆ ಬೀಳುವ ಸಾಧ್ಯತೆಯಿದೆ.

ಅಶೋಕ್ ಟಿವಿ 9 ಮಂಗಳೂರು

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ