ಬಿಜೆಪಿ ಎಂಎಲ್​ಸಿ ಆರ್ ಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಯತ್ನ; ಟಿಕೆಟ್ ನೀಡುವಂತೆ ಕೈ ನಾಯಕರಿಗೆ ಬೆಂಬಲಿಗರ ಒತ್ತಡ

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವಕೂ ಆರಂಭಗೊಂಡಿದೆ. ಇದೀಗ ಬಿಜೆಪಿ ಎಂಎಲ್​ಸಿ ಆರ್ ಶಂಕರ್ ಅವರು ತಮ್ಮ ಬೆಂಬಲಿಗರನ್ನು ಮುಂದೆಬಿಟ್ಟು ಕಾಂಗ್ರೆಸ್ ಸೇರುವ ಪ್ರಯತ್ನ ನಡೆಸುತ್ತಿದ್ದಾರೆ.

ಬಿಜೆಪಿ ಎಂಎಲ್​ಸಿ ಆರ್ ಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಯತ್ನ; ಟಿಕೆಟ್ ನೀಡುವಂತೆ ಕೈ ನಾಯಕರಿಗೆ ಬೆಂಬಲಿಗರ ಒತ್ತಡ
ಆರ್ ಶಂಕರ್ ಮತ್ತು ಡಿಕೆ ಶಿವಕುಮಾರ್
Follow us
Rakesh Nayak Manchi
|

Updated on:Mar 24, 2023 | 7:13 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವವೂ ಆರಂಭಗೊಂಡಿದೆ. ಇದೀಗ ಬಿಜೆಪಿ ಎಂಎಲ್​ಸಿ ಆರ್ ಶಂಕರ್ (R Shankar) ಅವರು ತಮ್ಮ ಬೆಂಬಲಿಗರನ್ನು ಮುಂದೆಬಿಟ್ಟು ಕಾಂಗ್ರೆಸ್ ಸೇರುವ ಪ್ರಯತ್ನ ನಡೆಸುತ್ತಿದ್ದಾರೆ. ಆರ್ ಶಂಕರ್ ಅವರ ಬೆಂಬಲಿಗರು ಇಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಿದ್ದು, ಕಾಂಗ್ರೆಸ್​ನಿಂದ ಆರ್ ಶಂಕರ್ ಅವರಿಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದ್ದಾರೆ. ಆರ್ ಶಂಕರ್ ಅವರಿಗೆ ಬಿಜೆಪಿಯಲ್ಲೇ ಉಳಿದುಕೊಳ್ಳುವ ಆಸಕ್ತಿ ಇದ್ದಂತಿಲ್ಲ, ಏಕೆಂದರೆ, ಯಾವುದೇ ಪಕ್ಷದಿಂದ ಟಿಕೆಟ್ ಕೊಟ್ಟರು ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಈ ಹಿಂದೆ ಹೇಳಕೆ ನೀಡಿದ್ದರು.

ಇನ್ನು, ಬಿಜೆಪಿ ಕಾರ್ಯಕ್ರಮಗಳಿಂದಲೂ ಶಂಕರ್ ಅವರು ಅಂತರ ಕಾಯ್ದುಕೊಂಡಿದ್ದಾರೆ. ಈ ಹಿಂದೆ ನಡೆದ ಜನಸಂಕಲ್ಪ ಸಮಾವೇಶಕ್ಕೆ ಶಂಕರ್ ಗೈರಾಗಿದ್ದರು. ಇದಕ್ಕೆ ಸ್ಪಷ್ಟನೆ ನೀಡಿದ್ದ ಅವರು, ನಗರದಲ್ಲಿ ಪೂರ್ವನಿಗದಿ ಹಿನ್ನೆಲೆ ಜನಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿಲ್ಲ ಎಂದಿದ್ದರು. ಅಲ್ಲದೆ, ಬಿಜೆಪಿ ಸರ್ಕಾರ ರಚನೆ ಮಾಡಿದಾಗಲೆಲ್ಲ ಪಕ್ಷೇತರರ ಅವಶ್ಯಕತೆ ಇತ್ತು. ಮುಂದಿನ ದಿನಗಳಲ್ಲಿ ಮತ್ತೆ ರಿಪೀಟ್ ಆಗಲಿದೆ ಎಂದು ಹೇಳಿಕೆ ನೀಡಿದ್ದರು.

ಇತ್ತೀಚೆಗೆ ಮತದಾರರಿಗೆ ಆಮಿಷವೊಡ್ಡಿದ ಪ್ರಕರಣ ಸಂಬಂಧ ಆರ್​.ಶಂಕರ್ ವಿರುದ್ಧ ಜಿಲ್ಲೆಯ ರಾಣೇಬೆನ್ನೂರು ಟೌನ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ. ಎಂಎಸ್​ಸಿ ಶಂಕರ್ ಅವರು ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್​ ಗುರು ಬಸವರಾಜ ಅವರು ಠಾಣೆಗೆ ದೂರು ನೀಡಿದ್ದು, ಮತದಾರರಿಗೆ ಕುಕ್ಕರ್​, ಸೀರೆ ಹಂಚಿಕೆ ಮಾಡಿದ್ದಾರೆಂದು ಉಲ್ಲೇಖಿಸಿದ್ದರು. ಮಾರ್ಚ್​ 14ರಂದು ರಾತ್ರಿ ಆರ್​.ಶಂಕರ್ ಕಚೇರಿ ಮೇಲೆ ಹಾವೇರಿ ಎಸಿ, ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸಿಕ್ಕ ಮಾಹಿತಿಯನ್ನು ಕಂದಾಯ ಇಲಾಖೆ ಕೋರ್ಟ್​ಗೆ ಸಲ್ಲಿಸಿತ್ತು. ಕೋರ್ಟ್ ಅನುಮತಿಯಂತೆ ದೂರು ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಪಕ್ಷಾಂತರ ಪರ್ವ; ಯಾರು ಎಲ್ಲಿಗೆ? ಇಲ್ಲಿದೆ ನೋಡಿ

ಚುನಾವಣೆ ಹಿನ್ನಲೆ ಎಂಎಲ್​ಸಿ ಶಂಖರ್ ಅವರು ಕುಕ್ಕರ್, ಸೀರೆ ಹಂಚಿಕೆ ಮಾಡಿ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಗುರು ಬಸವರಾಜ ಅವರು ದೂರು ನೀಡಿದ್ದರು. ಅದರಂತೆ ಪೊಲೀಸರು, ಕಲಂ 171 E ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಆರ್. ಶಂಕರ ಕಚೇರಿಯಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆ, ತಟ್ಟೆ, ಮಕ್ಕಳ ಸ್ಕೂಲ್ ಬ್ಯಾಗ್​ಗಳಿಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಕಚೇರಿ ಒಳಗೆ ಯಾರೂ ಹೋಗದಂತೆ ಶಹರ ಠಾಣೆ ಪೊಲೀಸರು ಕಟ್ಟೆಚ್ಚರವಹಿಸಿದ್ದರು.

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ನಡೆಸಿರುವುದಕ್ಕೆ ಆರ್​. ಶಂಕರ್ ಸ್ವಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ತಮ್ಮ ವಿರುದ್ಧ ಸಂಚು ಹೂಡಲಾಗಿದೆ ಎಂದು ಆರೋಪಿಸಿರುವ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ದೊರೆಯದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿದ್ದರು. ಬಿಜೆಪಿ ಮರಳಿ ಅಧಿಕಾರಕ್ಕೆ ಬರಲು ನಾನೂ ಕಾರಣ ಎಂದಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Fri, 24 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ