ದಳಪತಿ ದೇವೇಗೌಡ ಆರೋಗ್ಯ ವೃದ್ಧಿ, ಜೆಡಿಎಸ್ ಪಕ್ಷ ಬಲವರ್ಧನೆಗಾಗಿ 9 ದಿನ ಶತ ಚಂಡಿಕಾ ಯಾಗ

Karnataka Election 2023: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಅಲ್ಲದೆ, ಹಾಸನ ಕ್ಷೇತ್ರದಲ್ಲಂತೂ ಜೆಡಿಎಸ್ ಪಕ್ಷಕ್ಕೆ ವಿಘ್ನ ತಾಕಿದಂತಿದೆ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಶತ ಚಂಡಿಕಾ ಯಾಗ ನಡೆಸುತ್ತಿದೆ.

ದಳಪತಿ ದೇವೇಗೌಡ ಆರೋಗ್ಯ ವೃದ್ಧಿ, ಜೆಡಿಎಸ್ ಪಕ್ಷ ಬಲವರ್ಧನೆಗಾಗಿ 9 ದಿನ ಶತ ಚಂಡಿಕಾ ಯಾಗ
ದಳಪತಿ ದೇವೇಗೌಡ ಆರೋಗ್ಯ ವೃದ್ಧಿ, ಜೆಡಿಎಸ್ ಪಕ್ಷ ಬಲವರ್ಧನೆಗಾಗಿ ಹೆಚ್.ಡಿ.ಕುಮಾರಸ್ವಾಮಿ ಕುಟುಂಬದಿಂದ 9 ದಿನ ಶತ ಚಂಡಿಕಾ ಯಾಗ
Follow us
Rakesh Nayak Manchi
|

Updated on:Mar 03, 2023 | 6:02 PM

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿದಲ್ಲಿರುವಾಗಲೇ ದಳಪತಿ ಹೆಚ್.ಡಿ.ದೇವೇಗೌಡ (H.D.Deve Gowda) ಅವರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು, ಹಾಸನ ಕ್ಷೇತ್ರದಲ್ಲಂತೂ ಜೆಡಿಎಸ್ (JDS) ಪಕ್ಷಕ್ಕೆ ವಿಘ್ನ ತಾಕಿದಂತಿದೆ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ದೇವೇಗೌಡರ ಆರೋಗ್ಯ ವೃದ್ಧಿ ಹಾಗೂ ಪಕ್ಷ ಬಲವರ್ಧನೆಗಾಗಿ ಇಂದಿನಿಂದ 9 ದಿನಗಳ ಕಾಲ ಶತ ಚಂಡಿಕಾ ಯಾಗ ಹಾಗೂ ಕೋಟಿ ಮೃತ್ಯುಂಜಯ ಜಪ ಮಾಡುತ್ತಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಶೃಂಗೇರಿಯ 25 ಪುರೋಹಿತರ ನೇತೃತ್ವದಲ್ಲಿ ಈ ಯಾಗ ನಡೆಯುತ್ತಿದ್ದು, ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy), ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದಾರೆ. ಪೂಜೆಗಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕೂಡ ಆಗಮಿಸಿದ್ದು, ಕುಟುಂಬಸ್ಥರ ಹೊರತಾಗಿ ಇನ್ನಿತರರಿಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ಇರುವುದಿಲ್ಲ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇವೇಗೌಡರ ಅನಾರೋಗ್ಯ ಹಾಗೂ ಟಿಕೆಟ್ ಗದ್ದಲ ಜೆಡಿಎಸ್ ಪಕ್ಷವನ್ನು ಕಾಡುತ್ತಿದೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ ಅವರು ಕಾಲು ನೋವಿನಿಂದ ಬಳಲುತ್ತಿದ್ದು, ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನೊಂದೆಡೆ, ಟಿಕೆಟ್ ಘೋಷಣೆಯಾಗದ ವಿವಿಧ ಕ್ಷೇತ್ರಗಳಲ್ಲಿ ಟಿಕೆಟ್ ಗೊಂದಲ ಹೆಚ್ಚಾಗಿದೆ. ಹಾಸನ ಕ್ಷೇತ್ರದಲ್ಲಂತೂ ದಳ ಕುಟುಂಬದೊಳಗೆ ಜಟಾಪಟಿ ಜೋರಾಗಿದೆ. ದೇವೇಗೌಡರ ಆರೋಗ್ಯ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ ಎಂದು ಎರಡು ದಿನಗಳ ಹಿಂದೆಯೇ ಕುಮಾರಸ್ವಾಮಿ ತಿಳಿಸಿದ್ದರು. ಅಲ್ಲದೆ, ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆ ದೇವೇಗೌಡರ ಸಮ್ಮುಖದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದೂ ಹೇಳಿದ್ದರು.

ಇದನ್ನೂ ಓದಿ: ಅದ್ಯಾವ ಮುಖವಿಟ್ಟುಕೊಂಡು ಅಮಿತ್ ಶಾ ಕರ್ನಾಟಕದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತಾಡುತ್ತಿದ್ದಾರೋ? ಹೆಚ್ ಡಿ ಕುಮಾರಸ್ವಾಮಿ

ಈ ಎಲ್ಲಾ ಬೆಳವಣಿಗೆಗಳ ನಡುವೆ ಕುಮಾರಸ್ವಾಮಿ ಕುಟುಂಬ ದೇವೇಗೌಡರ ಆರೋಗ್ಯ ವೃದ್ಧಿ ಹಾಗೂ ಪಕ್ಷದ ಬಲವರ್ಧನೆಗಾಗಿ ಶತ ಚಂಡಿಕಾ ಯಾಗಾ ಮತ್ತು ಕೋಟಿ ಮೃತ್ಯುಂಜಯ ಜಪ ನಡೆಸಲು ಮುಂದಾಗಿದ್ದು, ಇಂದಿನಿಂದ 9 ದಿನಗಳ ಕಾಲ ಈ ಪೂಜಾ ಕಾರ್ಯಕ್ರಮ ನಡೆಯಲಿದೆ. ದೇವೇಗೌಡರ ಆರೋಗ್ಯ ವೃದ್ಧಿಗಾಗಿ ಇಂದು ಕುಟುಂಬಸ್ಥರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವೇಗೌಡರ ಕುಟುಂಬಕ್ಕೆ ಮಾತ್ರ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದ್ದು, ಇತರರಿಗೆ ನಿರ್ಬಂಧ ಹೇರಲಾಗಿದೆ.

ಈ ಹಿಂದೆ ಕುಮಾರಸ್ವಾಮಿ ಅವರು ತಮ್ಮ 64ನೇ ಜನ್ಮ ದಿನದ ಪ್ರಯುಕ್ತ ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರಲ್ಲದೆ, ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ್ದರು. ಈ ಕಾರ್ಯಕ್ರಮದಲ್ಲಿ ತಿರುಮಲ ದೇವಸ್ಥಾನದಿಂದ 80 ಜನ ಅರ್ಚಕರು ಆಗಮಿಸಿದ್ದರು. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೂ ಪಾಲ್ಗೊಳ್ಳುವ ಅವಕಾಶ ನೀಡಲಾಗಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Fri, 3 March 23

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ