ವಿ. ಸೋಮಣ್ಣ ಕಾಂಗ್ರೆಸ್ಗೆ ಹೋಗಲ್ಲ, ಸಂಸದೆ ಸುಮಲತಾ ಬಿಜೆಪಿ ಪರ ಇದ್ದಾರೆ: ಪ್ರಲ್ಹಾದ್ ಜೋಶಿ
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಚಿವ ವಿ.ಸೋಮಣ್ಣ ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಲ್ಹಾದ್ ಜೋಶಿ, ಸಚಿವರು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಅದೇ ರೀತಿ ಸಂಸದೆ ಸುಮಲತಾ ಅವರು ಬಿಜೆಪಿ ಪರ ಇದ್ದಾರೆ ಎಂದರು.
ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ವಿ.ಸೋಮಣ್ಣ ಮತ್ತು ಸಂಸದೆ ಸುಮಲತಾ ಅಂಬರೀಷ್ ನಡೆ ಬಗ್ಗೆ ಚರ್ಚೆಯಾಗುತ್ತಿದೆ. ಸೋಮಣ್ಣ ಅವರು ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ, ಇನ್ನೊಂದೆಡೆ, ಮಂಡ್ಯದಿಂದ ಪಕ್ಷೇತರವಾಗಿ ಸ್ಪರ್ಧಿಸಿ ಗೆದ್ದಿರುವ ಸಂಸದೆ ಸುಮಲತಾ ಅವರು ಬಿಜೆಪಿ ಸೇರುತ್ತಾರೆ ಎಂಬ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಆದರೆ ಸೋಮಣ್ಣ ಅವರು ಕಾಂಗ್ರೆಸ್ ಸೇರಲ್ಲ, ಸುಮಲತಾ ಅವರು ಬಿಜೆಪಿ ಪರ ಇದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. “ಸಚಿವ ವಿ. ಸೋಮಣ್ಣ (V.Somanna) ಅವರು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಅವರು ಬಿಜೆಪಿಯಲ್ಲೇ ಮುಂದುವರಿಯುವ ಇಚ್ಚೆ ಹೊಂದಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ವಿ. ಸೋಮಣ್ಣ ಅವರು ನನ್ನ ಸಂಪರ್ಕದಲ್ಲಿದ್ದಾರೆ. ನಾನು ಸೋಮಣ್ಣ ಅವರೊಂದಿಗೆ ಮಾತಾಡಿದ್ದೇನೆ. ಬಿಜೆಪಿಯ ಕಾರ್ಯಕ್ರಮಗಳಲ್ಲಿ ಸೋಮಣ್ಣ ಅವರು ಸಕ್ರೀಯವಾಗಿ ಭಾಗವಹಿಸಲಿದ್ದಾರೆ. ಈ ಕುರಿತಂತೆ ಸೋಮಣ್ಣ ಅವರ ಜೊತೆ ಮಾತನಾಡಿರುವುದಾಗಿ ಸ್ಪಷ್ಟಪಡಿಸಿದರು.
ಇನ್ನು, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿದ್ದು, ಕೇಸರಿ ಪಡೆ ಸೇರುತ್ತಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ. ಈ ಬಗ್ಗೆಯೂ ಪ್ರತಿಕ್ರಿಯಿಸಿದ ಪ್ರಲ್ಹಾದ್ ಜೋಶಿ, ಸುಮಲತಾ ಅಂಬರೀಷ್ ಅವರು ಬಿಜೆಪಿ ಪರವೇ ಇದ್ದಾರೆ ಎಂದರು. ಮಂಡ್ಯದ ಮದ್ದೂರಿನಲ್ಲಿ ಮಾರ್ಚ್ 12 ರಂದು ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಸಭೆಯ ತಯಾರಿ ಕುರಿತಂತ ಪರಿಶೀಲನೆಗಾಗಿ ನಾನು ಮಂಡ್ಯಕ್ಕೆ ಮೊನ್ನೆ ಭೇಟಿ ನೀಡಿದ್ದೆ. ಮಂಡ್ಯ ಸಂಸದೆಯಾಗಿ ಸಮುಲತಾ ಅವರು ನನ್ನ ಸ್ವಾಗತಿಸಿದ್ದರು. ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಯ ಸರ್ಕಾರಿ ಕಾರ್ಯಕ್ರಮ ಕೂಡ ಇದೆ.
ಇದನ್ನೂ ಓದಿ: ಮೋದಿ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಬಿಜೆಪಿಗೆ? ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಿಯಾಕ್ಷನ್ ಇಲ್ಲಿದೆ
ಸುಮಲತಾ ಅವರು ಬಿಜೆಪಿ ಪಕ್ಷ ಸೇರ್ಪಡೆ ಆಗುತ್ತಾರಾ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಲ್ಹಾದ್ ಜೋಶಿ, ಲೋಕಸಭೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತವಿದ್ದರೂ, ಸುಮಲತಾ ಅಂಬರೀಷ್ ಅವರು ಲೋಕಸಭೆಯಲ್ಲಿ ಬಿಜೆಪಿಯ ಹಲವು ನಿರ್ಣಯಗಳನ್ನ ಬೆಂಬಲಿಸುತ್ತಾ ಬಂದಿದ್ದಾರೆ. ಹೀಗಾಗಿ ಸುಮಲತಾ ಅವರು ಬಿಜೆಪಿ ಪರವೇ ಇದ್ದಾರೆ ಎಂದಷ್ಟೇ ಹೇಳಿದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Sun, 5 March 23