ಚುನಾವಣೆ ಸಮೀಪಿಸುತ್ತಿದ್ದಂತೆಯೇ 5 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನ ನೇಮಿಸಿದ ಕಾಂಗ್ರೆಸ್
ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಜೋರಾಗಿದ್ರೆ, ಮತ್ತೊಂದೆಡೆ ಕಾಂಗ್ರೆಸ್ ಎಲೆಕ್ಷನ್ಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಮಧ್ಯೆ ಈ ಐದು ಜಿಲ್ಲಾಧ್ಯಕ್ಷರ ನೇಮಕ ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೇನು ಆರು ತಿಂಗಳು ಬಾಕಿ ಇದ್ದು, ಕಾಂಗ್ರೆಸ್ ಈ ಬಾರಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿಯಬೇಕೆಂದು ಕಾಂಗ್ರೆಸ್ ಸನ್ನದ್ಧವಾಗಿದೆ. ಇದಕ್ಕೆ ಬೇಕಾದ ಎಲ್ಲಾ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಇನ್ನು ಇದರ ಮಧ್ಯೆ ಕೆಪಿಸಿಸಿ(Karnataka Pradesh Congress Committee) ಇಂದು(ನ.24) ರಾಜ್ಯದ 5 ಜಿಲ್ಲೆಗಳಿಗೆ ನೂತನ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿ.ಆರ್.ಗೌಡ, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಶೇಖರ್ ಗೌಡ, ಹಾಸನಕ್ಕೆ E.H.ಲಕ್ಷ್ಮಣ, ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಬಸರೆಡ್ಡಿ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಅವರನ್ನು ನೇಮಕ ಮಾಡಿದೆ.
ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಜೋರಾಗಿದ್ರೆ, ಮತ್ತೊಂದೆಡೆ ಕಾಂಗ್ರೆಸ್ ಎಲೆಕ್ಷನ್ಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಮಧ್ಯೆ ಈ ಐದು ಜಿಲ್ಲಾಧ್ಯಕ್ಷರ ನೇಮಕ ತೀವ್ರ ಕುತೂಹಲ ಮೂಡಿಸಿದೆ.
ಟಿಕೆಟ್‌ಗಾಗಿ 1,250 ಕ್ಕೂ ಹೆಚ್ಚು ಅರ್ಜಿ
ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ಗಾಗಿ (Ticket) ಘಟಾನುಘಟಿ ನಾಯಕರುಗಳು ಸೇರಿದಂತೆ 1,250 ಕ್ಕೂ ಹೆಚ್ಚು ಮಂದಿ ಪದಾಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಶುಲ್ಕದ ಬಾಬತ್ತಿನಲ್ಲಿ ಪಕ್ಷದ ನಿಧಿ ತುಂಬಿದ್ದು, ಸುಮಾರು 25 ಕೋಟಿ ರೂಪಾಯಿ ಹಣ ಹರಿದುಬಂದಿದೆ.
ಟಕೆಟ್ಗಾಗಿ ತಂದೆ-ಮಕ್ಕಳಿಂದ ಅರ್ಜಿ
ಅರ್ಜಿದಾರರಲ್ಲಿ ಹಲವಾರು ಶಾಸಕರ ಪುತ್ರರು ಮತ್ತು ಪುತ್ರಿಯರು ಸೇರಿದ್ದಾರೆ. ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತಾ ಪಾಟೀಲ್ ಅವರು ಬಸವನ ಬಾಗೇವಾಡಿಯಿಂದ ಟಿಕೆಟ್ ಬಯಸಿದ್ದಾರೆ. ಪ್ರಸ್ತುತ ಶಿವಾನಂದ ಪಾಟೀಲ್ ಅವರು ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಇನ್ನು ಮಾಜಿ ಸಚಿವ ಹೆಚ್ ಮಹದೇವಪ್ಪ ಮತ್ತು ಅವರ ಪುತ್ರ ಸುನೀಲ್ ಬೋಸ್ ಅವರು ಕ್ರಮವಾಗಿ ಮೈಸೂರಿನ ನಂಜನಗೂಡು ಮತ್ತು ಟಿ ನರಸೀಪುರದಿಂದ ಟಿಕೆಟ್ ಬಯಸಿದ್ದಾರೆ. ಬಳ್ಳಾರಿ ನಗರ ಸ್ಥಾನಕ್ಕೆ ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಹಾಗೂ ಅವರ ಪುತ್ರ ಹಾಗೂ ಮಾಜಿ ಸಚಿವ ದಿವಾಕರ್ ಬಾಬು ಹಾಗೂ ಅವರ ಪುತ್ರ ಹನುಮ ಕಿಶೋರ್ ಅರ್ಜಿ ಸಲ್ಲಿಸಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ