ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಿದ ಮಳೆ; ಬಿಜೆಪಿ, ಜೆಡಿಎಸ್ ಕಾರ್ಯಕ್ರಮಗಳು ಮೂಂದೂಡಿಕೆ

ಬಿಜೆಪಿಯ ಜನಸಂಕಲ್ಪ ಸಮಾವೇಶ ಮತ್ತು ಜೆಡಿಎಸ್​ನ ಪಂಚರತ್ನ ಯಾತ್ರೆ ಮೇಲೆ ಮಳೆಯ ಪರಿಣಾಮ ಬೀರಿದ್ದು, ಎರಡೂ ಕಾರ್ಯಕ್ರಮಗಳನ್ನು ಮುಂದೂಡಿಕೆ ಮಾಡಲಾಗಿದೆ.

ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಿದ ಮಳೆ; ಬಿಜೆಪಿ, ಜೆಡಿಎಸ್ ಕಾರ್ಯಕ್ರಮಗಳು ಮೂಂದೂಡಿಕೆ
ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಿದ ಮಳೆ; ಬಿಜೆಪಿ, ಜೆಡಿಎಸ್ ಕಾರ್ಯಕ್ರಮಗಳು ಮೂಂದೂಡಿಕೆ
Follow us
TV9 Web
| Updated By: Rakesh Nayak Manchi

Updated on:Dec 11, 2022 | 11:04 AM

ಬೆಂಗಳೂರು: ಚಳಿಗಾಲ ಮುಗಿಯುತ್ತಾ ಬಂದರೂ ಮಳೆಗಾಲ ಮಾತ್ರ ಮುಗಿಯುವಂತೆ ಕಾಣುತ್ತಿಲ್ಲ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದ್ದಾಗಲೇ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಮಾಂಡೌಸ್ ಚಂಡಮಾರುತ (Mandous Cyclone) ಬೀಸಿದ್ದು, ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕದ (Karnataka Rains) ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಇದರಿಂದಾಗಿ ಚುನಾವಣೆ ಸಮೀಪಿಸುತ್ತಿದ್ದಂತೆ ರ್ಯಾಲಿ, ಸಮಾವೇಶಗಳನ್ನು ನಡೆಸುತ್ತಿರುವ ರಾಜ್ಯ ರಾಜಕೀಯ ಪಕ್ಷಗಳ ಕಾರ್ಯಕ್ರಮಗಳ ಅಬ್ಬರಕ್ಕೆ ಕೊಂಚ ಬ್ರೇಕ್ ಹಾಕಿದಂತಾಗಿದೆ.

ರಾಜ್ಯದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆ ಬಿಜೆಪಿ ಜನಸಂಕಲ್ಪ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದು ನಿಗದಿಯಾಗಿದ್ದ ಸಮಾವೇಶ ಮುಂದೂಡಲಾಗಿದೆ. ಇನ್ನೊಂದೆಡೆ, ಮಕೂರು ಜಿಲ್ಲೆಯಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಚಿಕ್ಕನಾಯಕನಹಳ್ಳಿಯಿಂದ ಮತ್ತೆ ಶುರುವಾಗಬೇಕಿದ್ದ ಪಂಚರತ್ನ ರಥಯಾತ್ರೆ ನಾಲ್ಕು ದಿನ ಮುಂದೂಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಜೆಡಿಎಸ್​ ಕಾರ್ಯಕ್ರಮಕ್ಕೂ ಚಂಡಮಾರುತ ಎಫೆಕ್ಟ್: ​ಪಂಚರತ್ನ ರಥಯಾತ್ರೆ ಮುಂದೂಡಿಕೆ

ಸಿಎಂ ಚಾಮರಾಜನಗರ ಜಿಲ್ಲಾ ಪ್ರವಾಸದ ದಿನಾಂಕ ಬದಲಾವಣೆ

ಚಾಮರಾಜನಗರ: ಗುಜರಾತ್​​ ರಾಜ್ಯದಲ್ಲಿ ಮುಖ್ಯಮಂತ್ರಿ ಪದಗ್ರಹಣ ಡಿಸೆಂಬರ್ 12ರಂದು ನಡೆಯಲಿದ್ದು, ಆಹ್ವಾನ ಹಿನ್ನೆಲೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುಜರಾತ್​ಗೆ ತೆರಳಲಿದ್ದಾರೆ. ಹೀಗಾಗಿ ಡಿ.12ರಂದು ಇದ್ದ ಚಾಮರಾಜನಗರ ಜಿಲ್ಲಾ ಪ್ರವಾಸ ಒಂದು ದಿನ ಮುಂದೂಡಿಕೆಯಾಗಿದೆ. ಡಿ.12ರ ಬದಲು ಡಿ.13ರಂದು ಸಿಎಂ ಬೊಮ್ಮಾಯಿ ಅವರು ಚಾಮರಾಜನಗರಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಜೆ.ಪಿ.ನಡ್ಡಾ ರಾಜ್ಯ ಪ್ರವಾಸದಲ್ಲಿ ಬದಲಾವಣೆ

ಬಾಗಲಕೋಟೆ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇದರ ಭಾಗವಾಗಿ ಡಿ.15ರಂದು ನಿಗದಿಯಾಗಿದ್ದ ಬಾಗಲಕೋಟೆ ಭೇಟಿ ಇದೀಗ ರದ್ದಾಗಿದೆ. ಅಂದು ಬಾಗಲಕೋಟೆ ಬದಲು ಕೊಪ್ಪಳಕ್ಕೆ ನಡ್ಡಾ ಅವರು ಆಗಮಿಸಲಿದ್ದಾರೆ. ಡಿ.15ರಂದು ಬಾಗಲಕೋಟೆ ಬಿಜೆಪಿ ಕಚೇರಿ ಉದ್ಘಾಟನೆಗೆ ಆಗಮಿಸಬೇಕಿದ್ದ ಜೆ.ಪಿ.ನಡ್ಡಾ ಮತ್ತು ಸಿಎಂ ಬೊಮ್ಮಾಯಿ ಕಾರ್ಯಕ್ರಮವನ್ನು ಕೊಪ್ಪಳಕ್ಕೆ ಸ್ಥಳಾಂತರಿಸಲಾಗಿದೆ. ಕೊಪ್ಪಳದಿಂದಲೇ ವರ್ಚುವಲ್ ಮೂಲಕ ಬಾಗಲಕೋಟೆ ಮತ್ತು ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳ ಬಿಜೆಪಿ ಕಚೇರಿಗಳನ್ನು ಉದ್ಘಾಟನೆ ಮಾಡಲಾಗುತ್ತಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sun, 11 December 22