ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಡಾ.ಮಂಜುನಾಥ್​​ಗೆ ಹೆಚ್ಚಿದ ಒತ್ತಡ: ಬೆಂಬಲ ಘೋಷಿಸಿದ ಕರವೇ ಪ್ರವೀಣ್ ಶೆಟ್ಟಿ

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕರ ಹೆಸರಾಂತ ಖ್ಯಾತ ವೈದ್ಯ ಡಾ. ಮಂಜುನಾಥ್ ಅವರನ್ನು ರಾಜಕಾರಣಕ್ಕೆ ಕರೆತರಲು ಜೆಡಿಎಸ್​ ಇನ್ನಿಲ್ಲದ ಕಸರತ್ತು ನಡೆಸಿದೆ. ದೇವೇಗೌಡರ ಅಳಿಯ ಆಗಿರುವ ಮಂಜುನಾಥ್ ಅವರನ್ನು ಈ ಬಾರಿ ಲೋಕಸಭಾ ಚುನಾವಣೆ ಕಣಕ್ಕಿಳಿಸಲು ಚರ್ಚೆಗಳು ನಡೆದಿವೆ. ಅಲ್ಲದೇ ಮಂಜುನಾಥ್ ಅವರು ಲೋಕಸಭಾ ಚುನಾವಣೆಗ ಸ್ಪರ್ಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ಸಹ ಒತ್ತಾಯಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಡಾ.ಮಂಜುನಾಥ್​​ಗೆ ಹೆಚ್ಚಿದ ಒತ್ತಡ: ಬೆಂಬಲ ಘೋಷಿಸಿದ ಕರವೇ ಪ್ರವೀಣ್ ಶೆಟ್ಟಿ
ಪ್ರವೀಣ್ ಶೆಟ್ಟಿ, ಡಾ.ಮಂಜುನಾಥ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 06, 2024 | 4:21 PM

ಬೆಂಗಳೂರು, (ಪೆಬ್ರವರಿ 06): ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕರ ಡಾ. ಮಂಜುನಾಥ್(Dr CN Manjunath)  ಅವರು ಈ ಬಾರಿ ಲೋಕಸಭಾ ಚುನಾವಣೆಗೆ (Loksabha Poll 2024)ಸ್ಪರ್ಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ(praveen shetty) ಅವರು ಒತ್ತಾಯಿಸಿದ್ದಾರೆ. ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸಹ ಕರ್ನಾಟಕ ರಕ್ಷಣಾ ವೇದಿಕೆ, ಎಲ್ಲಾ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರು ಅವರಿಗಾಗಿ ಕೆಲಸ ಮಾಡುತ್ತೇವೆ ಎಂದು ಬೆಂಬಲ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀಣ್ ಶೆಟ್ಟಿ, ಜಯದೇವ ಆಸ್ಪತ್ರೆಯನ್ನ ದೇಶವೇ ನೋಡುವಂತೆ ಮಾಡಿದ್ದಾರೆ. ದೇಶದ ಹಿತದೃಷ್ಟಿಯಿಂದ ಸೂಕ್ತವಾದ ಸಲಹೆ ನೀಡುತ್ತಾರೆ. ಪ್ರಧಾನ ಮಂತ್ರಿಗಳಿಗೆ ಮತ್ತು ಸಂಸದರಿಗೆ ಸಲಹೆ ನೀಡುತ್ತಾರೆ. ಹೀಗಾಗಿ ಅವರು ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಜಯದೇವ ಮಾಜಿ ನಿರ್ದೇಶಕ ಡಾ ಮಂಜುನಾಥ್ ಕರೆತರಲು ಜೆಡಿಎಸ್ ಕಸರತ್ತು

ಇದೀಗ ತಾನೇ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಹೃದ್ರೋಗ ತಜ್ಞರಾಗಿ ಸೇವೆ ಸಲ್ಲಿಸಿ ಡಾ. ಸಿಎನ್ ಮಂಜುನಾಥ್ ನಿವೃತ್ತರಾಗಿದ್ದಾರೆ. ಜಯದೇವ ಆಸ್ಪತ್ರೆಯನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ. ಜೆಡಿಎಸ್, ಕಾಂಗ್ರೆಸ್, ಅಥವಾ ಬಿಜೆಪಿ ಯಾವ ಪಕ್ಷದಿಂದ ಆದರೂ ಸಹ ಅವರು ಸ್ಪರ್ಧಿಸಬೇಕು. ಅವರ ಸೇವೆ ದೇಶಕ್ಕೆ ಅಗತ್ಯವಾಗಿದೆ ಎಂದು ಹೇಳಿದರು.

ಬೆಂಗಳೂರು ಉತ್ತರಕ್ಕೆ ಬನ್ನಿ ಅಥವಾ ರಾಜ್ಯದ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು. ಕರ್ನಾಟಕ ರಕ್ಷಣಾ ವೇದಿಕೆ, ಎಲ್ಲಾ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರು ಅವರಿಗಾಗಿ ಕೆಲಸ ಮಾಡುತ್ತೇವೆ. ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಂಡು ಬರುತ್ತೇವೆ. ನಿವೃತ್ತಿಯಾಗಿ ಮನೆಯಲ್ಲಿರುವುದು ರಾಜ್ಯಕ್ಕೆ ಶೋಭೆಯಲ್ಲ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿ, ನಿಮ್ಮ ಸೇವೆ ನಾಡಿಗೆ ಅವಶ್ಯಕವಾಗಿದೆ ಎಂದು ಒತ್ತಾಯಿಸಿದರು.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್