ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ

ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಹೇಳಿದ್ದಾರೆ.

ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Rakesh Nayak Manchi

Updated on: Jun 18, 2023 | 4:27 PM

ಬೆಂಗಳೂರು: ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ರಾಜ್ಯದ ಬಿಜೆಪಿ (BJP) ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕಿ ಅಕ್ಕಿ ನೀಡುವಂತೆ ಮಾಡಬೇಕು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ಕಿ ಇದ್ದರೆ ಕೊಡಿಸಿ, ಬಡವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಯಾಕೆ ಅಂತಾ ಪ್ರಶ್ನಿಸಿದ್ದಾರೆ.

ಹೆಚ್ಚುವರಿ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಮೊದಲು ಭಾರತೀಯ ಆಹಾರ ನಿಗಮ ಅಕ್ಕಿ ನೀಡುವುದಾಗಿ ಹೇಳಿತ್ತು. ಜೂನ್​ 12ರಂದು ಎಫ್​​ಸಿಐ ಕೂಡ ಪತ್ರ ಬರೆದಿತ್ತು. ಆದರೆ ಇದೀಗ ಎಫ್​ಸಿಐ ಅಕ್ಕಿ ನೀಡಲಾಗಲ್ಲ ಎಂದು ಪತ್ರ ಬರೆದಿದೆ. ಬಡವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಯಾಕೆ? ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​​ ಕೊಟ್ಟ ಭರವಸೆಯಂತೆ 10 ಕೆಜಿ ಅಲ್ಲ 15 ಕೆಜಿ ಅಕ್ಕಿ ನೀಡಲಿ: ಬಿವೈ ವಿಜಯೇಂದ್ರ

ಕೇಂದ್ರದವರು ಅಕ್ಕಿ ಕೊಡಲ್ಲ ಅಂದಿದ್ದಾರೆ, ಎಫ್‌‌ಸಿಐ ಅಧಿಕಾರಿಗಳು ಕೊಡುತ್ತೇವೆ ಅಂತ ಹೇಳಿ ಕೊಡಲಿಲ್ಲ. ನಮಗೆ 14ಕ್ಕೆ ಅಕ್ಕಿ ಕೊಡಕ್ಕಾಗಲ್ಲ ಅಂತ ಹೇಳಿದ್ದಾರೆ. ಹೀಗಾಗಿ ಆಂಧ್ರಪ್ರದೇಶದ ಜೊತೆ ಮಾತಾಡಿದ್ದೇವೆ. ಅವರು ಪೂರೈಕೆ ಮಾಡುತ್ತೇವೆ ಅಂತ ಹೇಳಿಲ್ಲ. ತೆಲಂಗಾಣ ಸರ್ಕಾರ ಆಗಲ್ಲ ಅಂತ ಹೇಳಿದೆ. ಛತ್ತೀಸಗಢ ಸರ್ಕಾರ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಅಂದಿದ್ದಾರೆ, ಆದರೆ ನೀವು ಕೇಳಿದ 2.28 ಲಕ್ಷ ಮೆಟ್ರಿಕ್ ಟನ್ ಕೊಡಲು ಸಾಧ್ಯವಿಲ್ಲ ಅಂತ ತಿಳಿಸಿದ್ದಾಗಿ ಹೇಳಿದರು.

ಅಕ್ಕಿ ಇದ್ದರೆ ಕೊಡಿಸಿ: ಸಿದ್ದರಾಮಯ್ಯ

ನಮ್ಮ ರಾಜ್ಯದಲ್ಲಿ ಅಕ್ಕಿ ಇಲ್ಲ. ಅಕ್ಕಿ ಇದ್ದರೆ ಕೊಡಿಸಿ ನೀವೇ ಎಂದು ಹೇಳಿದ ಸಿದ್ದರಾಮಯ್ಯ, ರಾಯಚೂರಿನಲ್ಲಿ ಸೋನಾ ಮಸೂರಿ ಇರುವುದು. ಅದು ಒಂದು ಕೆ.ಜಿಗೆ 55 ರೂಪಾಯಿ ಅಂತ ಹೇಳುವ ಮೂಲಕ ರಾಜ್ಯದ ರೈತರಿಂದ ಅಕ್ಕಿ ಖರೀದಿಸಲ್ಲ ಅಂತ ಪರೋಕ್ಷವಾಗಿ ಹೇಳಿದರು. ಅಲ್ಲದೆ, ರಾಜ್ಯ ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಕೊಡಿಸಲಿ ಅಂತ ಸವಾಲು ಹಾಕಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Loading...
Unable to load recommendations.
Follow Us