ಸರ್ಕಾರದಲ್ಲಿ ಭ್ರಷ್ಟಾಚಾರ ಬೇರೂರಿದೆ ಎಂಬುದಕ್ಕೆ ಇದಕ್ಕಿಂತ ಪುರಾವೆ ಬೇಕಾ? ರಾಯರೆಡ್ಡಿ ಪತ್ರ ಸಾಕ್ಷ್ಯ ಕೊಟ್ಟ ವಿಜಯೇಂದ್ರ
ಮರಳು ಮಾಫಿಯಾ ವಿರುದ್ಧ ಸಿಎಂ ಸಲಹೆಗಾರ ಬಸವರಾಜ ರಾಯರಡ್ಡಿ ಸಿಡಿದೆದ್ದಿದ್ದಾರೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಕೂಡ ಬರೆದಿದ್ದಾರೆ. ಸದ್ಯ ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರು, ಅಕ್ಟೋಬರ್ 21: ಅಕ್ರಮ ಮರಳು ದಂಧೆ (Sand Mafia) ವಿಚಾರವಾಗಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ (basavaraj rayareddi) ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವರ್ಗಾವಣೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಬರೆದಿರುವ ಪತ್ರ ಬಾರಿ ಸದ್ದು ಮಾಡುತ್ತಿದೆ. ಸದ್ಯ ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದು, ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಎಷ್ಟರ ಮಟ್ಟಿಗೆ ಆಳವಾಗಿ ಬೇರೂರಿದೆ ಎಂಬುದಕ್ಕೆ ಇದಕಿಂತ ಪುರಾವೆ ಬೇಕಾ? ಎಂದು ಪ್ರಶ್ನಿಸಿದ್ದಾರೆ.
ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮರಳು ಮಾಫಿಯಾ ಸಂಬಂಧ ರಾಜ್ಯದ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡಲಾಗುತ್ತಿದ್ದು, ಮತ್ತು ಪ್ರತಿ ವರ್ಷ ಜನರಿಂದ 400 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ದೋಚಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರಡ್ಡಿ ಅವರೇ ಒಪ್ಪಿಕೊಂಡಿದ್ದು, ಇದು ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತದಲ್ಲಿನ ಭ್ರಷ್ಟಾರವರನ್ನು ಬಹಿರಂಗಪಡಿಸುತ್ತದೆ. ಮರಳು ಮಾಫಿಯಾ ಬಹಿರಂಗವಾಗಿಯೇ ನಡೆಯುತ್ತಿದ್ದು, ಆದರೆ ಅಧಿಕಾರಿಗಳು ಸಚಿವರ ರಕ್ಷಣೆಯಲ್ಲಿ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್
What more proof does Karnataka need to see how deeply corruption has eaten into the @INCKarnataka government?
When even the Chief Minister’s own Economic Adviser admits that a mafia–official nexus is looting the State’s natural wealth, robbing over ₹400 crore every year from… pic.twitter.com/mmll3Xv2Gg
— Vijayendra Yediyurappa (@BYVijayendra) October 21, 2025
ಕಾಂಗ್ರೆಸ್ ಸರ್ಕಾರ ನಿಯಮದಡಿಯಲ್ಲಿ ವ್ಯವಸ್ಥೆಯ ಪ್ರತಿಯೊಂದು ಭಾಗವೂ ಅಕ್ರಮ ಗಣಿಗಾರಿಕೆ, ನೈಸರ್ಗಿಕ ಸಂಪನ್ಮೂಲಗಳ ಲೂಟಿ, ಲಂಚದಿಂದ ಕಲುಷಿತವಾಗಿದೆ. ಭ್ರಷ್ಟಾಚಾರವು ಸಾಮಾನ್ಯವಾಗಿದ್ದು, ಅಭಿವೃದ್ಧಿ ಹಿಂದೆ ಬಿದ್ದಿದೆ. ಅವ್ಯವಸ್ಥೆಯನ್ನು ಸ್ವಚ್ಛಗೊಳಿಸುವ ಬದಲು, ಅಧಿಕಾರದಲ್ಲಿರುವವರು ಅದರ ಭಾಗವಾಗಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ಗದಗಿನಲ್ಲಿ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ: ಪ್ರಶ್ನೆ ಮಾಡಿದ ರೈತನಿಗೆ ಮಾರಣಾಂತಿಕ ಹಲ್ಲೆ
ಒಂದು ವಲಯದಲ್ಲೇ ಈ ಪರಿಸ್ಥಿತಿ ಇದ್ದರೆ, ಇತರ ವಲಯಗಳಲ್ಲಿ ಏನಾಗುತ್ತಿರಬಹುದು? ಇದು ಕಾಂಗ್ರೆಸ್ ಆಡಳಿತದ ನಿಜವಾದ ಮುಖ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ್ ರಾಯರೆಡ್ಡಿ, ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಅಧಿಕಾರಿಳಿಗೆ ಶಾಕ್ ನೀಡಿದೆ. ರಾಯರೆಡ್ಡಿ ಇಡೀ ಪತ್ರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡಿ ಗ್ರೂಪ್ನಿಂದ ಇಡಿದು ಹಿರಿಯ ಅಧಿಕಾರಿಗಳು ನಡವಳಿಯನ್ನು ಉಲ್ಲೇಖಿಸಿದ್ದರು. ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ತುಂಗಭದ್ರಾ ನದಿಯಲ್ಲಿ ವ್ಯಾಪಕವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಪ್ರತಿದಿನ 85 ಕಿ.ಮೀ ದೂರದಿಂದ ಸುಮಾರು 100 ರಿಂದ 150 ಟ್ರಕ್‌ಗಳಷ್ಟು ಮರಳು ಮತ್ತು ಜಲ್ಲಿಕಲ್ಲು ಅನಧಿಕೃತವಾಗಿ ಸಾಗಾಟವಾಗುತ್ತಿದೆ. ಈ ದಂಧೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದಾರೆ. ಈ ಅಕ್ರಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: ಬಿಜೆಪಿಗರದ್ದು ಡೋಂಗಿ ಹಿಂದುತ್ವ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಆರೋಪ
ಇದೇ ವಿಚಾರವಾಗಿ ಸಿಎಂ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ ರಾಯರಡ್ಡಿ ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ 10ಕ್ಕೂ ಹೆಚ್ಚು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿ, ಅವರ ವರ್ಗಾವಣೆಗೆ ಕೋರಿ ಪತ್ರ ಬರೆದಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:10 pm, Tue, 21 October 25




