ರಾಜಕೀಯ ತರಬೇತಿ ಸಂಸ್ಥೆ ಸ್ಥಾಪನೆಗೆ ಸ್ಪೀಕರ್ ಯುಟಿ ಖಾದರ್ ಪ್ರಸ್ತಾವ; ಹೀಗಿರಲಿದೆ ಕೋರ್ಸ್

ರಾಜಕೀಯ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗುವ ಕೋರ್ಸ್ ಒಂದು ವರ್ಷದ ಅವಧಿಯದ್ದಾಗಿದ್ದು, ಆರು ತಿಂಗಳ ಕಾಲ ಥಿಯರಿ ತರಗತಿಗಳು ನಡೆಯಲಿವೆ. ಮುಂದಿನ ಆರು ತಿಂಗಳು ಪ್ರಾಯೋಗಿಕ ತರಬೇತಿ ನೀಡಲಾಗುವುದು. ಕೋರ್ಸ್ ಇಂಟರ್ನ್‌ಶಿಪ್ ಪ್ರೋಗ್ರಾಂ ಅನ್ನು ಸಹ ಒಳಗೊಂಡಿರುತ್ತದೆ ಎಂದು ಖಾದರ್ ಹೇಳಿದ್ದಾರೆ.

ರಾಜಕೀಯ ತರಬೇತಿ ಸಂಸ್ಥೆ ಸ್ಥಾಪನೆಗೆ ಸ್ಪೀಕರ್ ಯುಟಿ ಖಾದರ್ ಪ್ರಸ್ತಾವ; ಹೀಗಿರಲಿದೆ ಕೋರ್ಸ್
ಯುಟಿ ಖಾದರ್
Follow us
Ganapathi Sharma
|

Updated on: Jun 30, 2023 | 4:18 PM

ಮಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಬಯಸುವ, ಪದವಿ ಪಡೆದಿರುವವರಿಗಾಗಿ ಕರ್ನಾಟಕದಲ್ಲಿ ರಾಜಕೀಯ ತರಬೇತಿ ಸಂಸ್ಥೆಯನ್ನು (Political Training Institute) ಸ್ಥಾಪಿಸುವ ಬಗ್ಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಪ್ರಸ್ತಾವಿಸಿದ್ದಾರೆ. ಈ ಪ್ರಸ್ತಾವನೆಯನ್ನು ಸದ್ಯದಲ್ಲಿಯೇ ಜಾರಿಗೆ ತರಲಾಗುವುದು ಮತ್ತು ಪಠ್ಯಕ್ರಮವನ್ನು ಸಿದ್ಧಪಡಿಸಲು ಪುಣೆ ಮೂಲದ ಸರ್ಕಾರಿ ಶಾಲೆಯೊಂದನ್ನು ವಿನಂತಿಸಲಾಗುವುದು ಎಂದು ಖಾದರ್ ಗುರುವಾರ ಮಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜಕೀಯ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗುವ ಕೋರ್ಸ್ ಒಂದು ವರ್ಷದ ಅವಧಿಯದ್ದಾಗಿದ್ದು, ಆರು ತಿಂಗಳ ಕಾಲ ಥಿಯರಿ ತರಗತಿಗಳು ನಡೆಯಲಿವೆ. ಮುಂದಿನ ಆರು ತಿಂಗಳು ಪ್ರಾಯೋಗಿಕ ತರಬೇತಿ ನೀಡಲಾಗುವುದು. ಕೋರ್ಸ್ ಇಂಟರ್ನ್‌ಶಿಪ್ ಪ್ರೋಗ್ರಾಂ ಅನ್ನು ಸಹ ಒಳಗೊಂಡಿರುತ್ತದೆ ಎಂದು ಖಾದರ್ ಹೇಳಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಸಂಸ್ಥೆಯು ಪೂರ್ಣಾವಧಿಗೆ ಬೋಧಕ ಸಿಬ್ಬಂದಿಯನ್ನು ಹೊಂದಿರಲಿದೆ ಮತ್ತು ಮಹತ್ವಾಕಾಂಕ್ಷಿ ಯುವಕರಿಗೆ ರಾಜಕೀಯ ಮತ್ತು ಆಡಳಿತದಲ್ಲಿ ತರಬೇತಿ ನೀಡಲಿದೆ. ಪದವೀಧರರು ಪರಿಣಾಮಕಾರಿ ನಾಯಕರಾಗಲು, ಶಾಸಕರು ಮತ್ತು ಮಂತ್ರಿಗಳ ಜೊತೆಗೆ ಕೆಲಸ ಮಾಡಲು ರಾಜಕೀಯ ನಾಯಕರು ಹಾಗೂ ತಜ್ಞರು ತರಬೇತಿಯನ್ನು ಸಹ ನೀಡಲಿದ್ದಾರೆ ಎಂದು ಖಾದರ್ ಹೇಳಿದ್ದಾರೆ.

ಪದವಿ ಪೂರ್ಣಗೊಳಿಸಿದ ಎಲ್ಲರೂ ಕೋರ್ಸ್‌ಗೆ ಸೇರಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳನ್ನು ರಾಜಕಾರಣಿಗಳು, ಸಹಾಯಕ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಮತ್ತು ಸರ್ಕಾರಿ ನೌಕರರನ್ನಾಗಿ ರೂಪಿಸುವ ರೀತಿಯಲ್ಲಿ ಪಠ್ಯಕ್ರಮವನ್ನು ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: UT Khader Profile: ವಿಧಾನಸಭೆ ನೂತನ ಸ್ಪೀಕರ್ ಯುಟಿ ಖಾದರ್, ಇಲ್ಲಿದೆ ಕರಾವಳಿ ರಾಜಕಾರಣಿಯ ರಾಜಕೀಯ ಖದರ್

ಸರಕಾರದ ಜತೆ ಚರ್ಚಿಸಿ ಸಂಸ್ಥೆಗೆ ಸೂಕ್ತ ಸ್ಥಳ ನಿಯೋಜನೆ ಮಾಡಲಾಗುವುದು ಎಂದೂ ಖಾದರ್ ತಿಳಿಸಿದ್ದಾರೆ.

ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರವನ್ನು ಕೆಲವು ದಿನಗಳ ಹಿಂದಷ್ಟೇ ಖಾದರ್ ಹಮ್ಮಿಕೊಂಡಿದ್ದರು. ಈ ಶಿಬಿರಕ್ಕೆ ಕರೆಸಿದ್ದ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ಚರ್ಚೆಯಾಗಿತ್ತು. ಇದೀಗ ಖಾದರ್ ರಾಜಕೀಯ ತರಬೇತಿ ಸಂಸ್ಥೆಯ ಸ್ಥಾಪನೆ ಬಗ್ಗೆ ಪ್ರಸ್ತಾವಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ