ಕರ್ನಾಟಕಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ: ಸಿದ್ದರಾಮಯ್ಯ

ತೆಲಂಗಾಣ ಸರ್ಕಾರ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ. ಪಂಜಾಬ್​ನವರು ನವೆಂಬರ್​ನಿಂದ ಕೊಡುತ್ತೇವೆ ಅಂತಾ ಹೇಳಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕರ್ನಾಟಕಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ: ಸಿದ್ದರಾಮಯ್ಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ
Image Credit source: Hemant Mishra/Mint via Getty Images
Rakesh Nayak Manchi

Updated on: Jun 24, 2023 | 2:53 PM

ಬೆಂಗಳೂರು: ತೆಲಂಗಾಣ ಸರ್ಕಾರ ರಾಜ್ಯಕ್ಕೆ ಭತ್ತ ಕೊಡುವುದಾಗಿ ಹೇಳಿದ್ದಾರೆ. ಛತ್ತೀಸ​ಗಢ (Chhattisgarh)​ ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಂಜಾಬ್​ ಸರ್ಕಾರವೂ ನವೆಂಬರ್​ ತಿಂಗಳಿನಿಂದ ಕೊಡುವುದಾಗಿ ತಿಳಿಸಿದೆ. NCCF ಕೇಂದ್ರಿಯ ಭಂಡಾರ, ನಫೆಡ್​ನಿಂದ ಕೊಟೆಷನ್ ಕೇಳಿದ್ದೇವೆ. ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣ ನೋಡಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದರು.

ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ನೀಡಲು ಬೇರೆ ರಾಜ್ಯಗಳ ಸಂಪರ್ಕ ಮಾಡಲಾಗುತ್ತಿದೆ. ರಾಜ್ಯಕ್ಕೆ 2 ಲಕ್ಷದ 29 ಸಾವಿರ ಮೆಟ್ರಿಕ್​ ಟನ್ ಅಕ್ಕಿ ಬೇಕು. ಪಂಜಾಬ್​ನವರು ಬಳಿ ಸ್ಟಾಕ್ ಇಲ್ಲ, ಆಂಧ್ರಪ್ರದೇಶದವರ ಬಳಿಯೂ ಅಕ್ಕಿ ಸಿಗುತ್ತಿಲ್ಲ. ಹೀಗಾಗಿ ಸರ್ಕಾರಿ ಸಂಸ್ಥೆಗಳ ಕೊಟೇಷನ್ ಕರೆದಿದ್ದೇವೆ. ಇವತ್ತು ಮೂರು ಗಂಟೆಗೆ ಮೆಗೋಸಿಯೇಷನ್ ಇದೆ. ದರ ಎಷ್ಟು‌ ಏನು ಅನ್ನೋದರ ಬಗ್ಗೆ ಚರ್ಚಿಸಲು ಇಂದು 3 ಗಂಟೆಗೆ ಸಭೆ ಕರೆದಿದ್ದೇವೆ. ರಾಗಿ, ಜೋಗಿ ನಮ್ಮ ಬಳಿ ಇದೆ. ಆದರೆ ಇವು ಎರಡು ತಿಂಗಳಿಗೆ ಮಾತ್ರ ಸಾಕಾಗುತ್ತದೆ ಎಂದರು.

ಇದನ್ನೂ ಓದಿ: Anna Bhagya Scheme: ಅಕ್ಕಿ ಹೊಂದಿಸಲು ನೆರವಾಗುವಂತೆ ಕೇಂದ್ರಕ್ಕೆ ಮನವಿ ಮಾಡಲು ಹೋಗಿದ್ದ ಸಿಎಂ ಸಿದ್ದರಾಮಯ್ಯ ಬರಿಗೈಲಿ ವಾಪಸ್ಸು

ಮಳೆಯಿಂದಾಗುವ ಸಮಸ್ಯೆ ಎದುರಿಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕೆ ಇದೆ. ರಾಜ್ಯದಲ್ಲಿ ಬಿತ್ತನೆ ಕೆಲವೆಡೆ ಶುರುವಾಗಿದೆ, ಕೆಲವು ಕಡೆಯಾಗಿಲ್ಲ. ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆ‌ ಎಂದರು. ಮುಂಗಾರು ಮಳೆ ಹಿನ್ನೆಲೆ ಮುಂಜಾಗೃತಾ ಕ್ರಮ ಹಾಗೂ ಬಿತ್ತನೆಗೆ ಗುಣಮಟ್ಟದ ಬೀಜ ನೀಡುವಂತೆ ಸಿಎಂ ಮತ್ತು ಡಿಸಿಎಂ ಈಗಾಗಲೇ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರು ನೀಡಿದ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರತಿಭಟನೆ ಮಾಡಲು ಸ್ವಾತಂತ್ರ್ಯ ಇದೆ, ಆದರೆ ಪ್ರತಿಭಟಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಈಗಾಗಲೇ ನಾವು ಒಂದು ಯೋಜನೆಯನ್ನು ಜಾರಿ ಮಾಡಿದ್ದೇವೆ. ಜುಲೈ 1ರಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಲಿದೆ. ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರಿಂದ ಅನ್ನಭಾಗ್ಯ ವಿಳಂಬವಾಗುತ್ತಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Sat, 24 June 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us