ಕರ್ನಾಟಕಕ್ಕೆ 5 ರಿಂದ 6 ಸಚಿವ ಸ್ಥಾನಗಳು ಸಿಗುವ ನಿರೀಕ್ಷೆ ಇದೆ: ಬಿವೈ ವಿಜಯೇಂದ್ರ
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿರುವುದು ಸಂತೋಷ ಆಗುತ್ತಿದೆ. ಕರ್ನಾಟಕದ ಮೈತ್ರಿ ಸಂಸದರಿಗೆ ಹಂತ ಹಂತವಾಗಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಹೆಚ್ಡಿ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಕ್ಕರಿಗೆ ನಮ್ಮೆಲ್ಲರಿಗೂ ಸಂತೋಷ ಆಗುತ್ತೆ. ಮೈತ್ರಿ ಪಕ್ಷದಲ್ಲಿ ಯಾರೇ ಸಚಿವರಾದರೂ ನಮಗೆ ಸಂತೋಷವಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ನವದೆಹಲಿ/ಬೆಂಗಳೂರು, ಜೂನ್ 09: ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು (ಜೂ.09) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕರ್ನಾಟಕಕ್ಕೆ 5 ರಿಂದ 6 ಸಚಿವ ಸ್ಥಾನಗಳು ಸಿಗುವ ನಿರೀಕ್ಷೆಯಲ್ಲಿದ್ದೇವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹೇಳಿದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಎಲ್ಲ ಬೂತ್ ಮಟ್ಟದಲ್ಲೂ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಕರ್ನಾಟಕದ ಬಗ್ಗೆ ಮೋದಿ ವಿಶೇಷ ಕಾಳಜಿ ವಹಿಸುತ್ತಾರೆ ಎಂದರು.
ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಬೇಕೆಂದು ಜನರು ನಿರ್ಧರಿಸಿದ್ದರು. ನರೇಂದ್ರ ಮೋದಿ ನಾಯಕತ್ವಕ್ಕೆ ಜನಮನ್ನಣೆ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜನ ಮತ ನೀಡಿದ್ದಾರೆ. ರಾಜ್ಯದ ಮೈತ್ರಿ ಸಂಸದರಿಗೆ ಯಾರಿಗೇ ಸಚಿವ ಸ್ಥಾನ ಸಿಕ್ಕರೂ ಸಂತಸ. ಹೆಚ್ಡಿಕೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸ ಇದೆ. ರಾಘವೇಂದ್ರ ಕೂಡ ಸಚಿವ ಸ್ಥಾನಕ್ಕೆ ಅರ್ಹ ನಾಯಕರು. ಸಚಿವ ಸ್ಥಾನದ ಬಗ್ಗೆ ಅಂತಿಮವಾಗಿ ಪಕ್ಷ ನಿರ್ಧಾರ ಕೈಗೊಳ್ಳುತ್ತೆ. ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.
ಎಷ್ಟು ಸಚಿವ ಸ್ಥಾನ ನೀಡುತ್ತಾರೆ ಗೊತ್ತಿಲ್ಲ: ಯಡಿಯೂರಪ್ಪ
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಕರ್ನಾಟಕಕ್ಕೆ ಎಷ್ಟು ಸಚಿವ ಸ್ಥಾನ ನೀಡುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ: ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ: ಡಾ. ಮಂಜುನಾಥ್
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ: ಜಗದೀಶ್ ಶೆಟ್ಟರ್
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗುತ್ತಿದ್ದಾರೆ. ಸರ್ಕಾರ ರಚಿಸುತ್ತೇವೆ ಅಂತ ಪ್ರತಿಪಕ್ಷದವರು ಹಗಲುಗನಸು ಕಾಣುತ್ತಿದ್ದಾರೆ. ನಾವು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಮೈತ್ರಿ ಸಂಸದರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಕೋಟ ಶ್ರೀನಿವಾಸ್ ಪೂಜಾರಿ
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿರುವುದು ಸಂತೋಷ ಆಗುತ್ತಿದೆ. ಕರ್ನಾಟಕದ ಮೈತ್ರಿ ಸಂಸದರಿಗೆ ಹಂತ ಹಂತವಾಗಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಹೆಚ್ಡಿ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಕ್ಕರಿಗೆ ನಮ್ಮೆಲ್ಲರಿಗೂ ಸಂತೋಷ ಆಗುತ್ತೆ. ಮೈತ್ರಿ ಪಕ್ಷದಲ್ಲಿ ಯಾರೇ ಸಚಿವರಾದರೂ ನಮಗೆ ಸಂತೋಷವಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಸಚಿವ ಸ್ಥಾನಕ್ಕಾಗಿ ಡಿಮ್ಯಾಂಡ್ ಮಾಡಿಲ್ಲ: ರಾಘವೇಂದ್ರ
ನಾನು ಯಾವುದೇ ಸಚಿವ ಸ್ಥಾನಕ್ಕಾಗಿ ಡಿಮ್ಯಾಂಡ್ ಮಾಡಿಲ್ಲ. ಅನೇಕ ಮಾಜಿ ಮಂತ್ರಿಗಳು ಸಂಸದರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಹಿರಿಯ ನಾಯಕರು ಸಂಸದರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಸಂಸದ ರಾಘವೇಂದ್ರ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ