AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal: ಪೊಲೀಸರು ತಡೆದರೂ ಆಟೋ ಚಾಲಕನ ಮನೆಗೆ ತೆರಳಿ ಊಟ ಮಾಡಿದ ದೆಹಲಿ ಸಿಎಂ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅಹಮದಾಬಾದ್‌ನಲ್ಲಿ ಆಟೋ ಡ್ರೈವರ್‌ಗೆ ನೀಡಿದ ಭರವಸೆಯನ್ನು ಉಳಿಸಿಕೊಂಡರು.

Arvind Kejriwal: ಪೊಲೀಸರು ತಡೆದರೂ ಆಟೋ ಚಾಲಕನ ಮನೆಗೆ ತೆರಳಿ ಊಟ ಮಾಡಿದ ದೆಹಲಿ ಸಿಎಂ ಕೇಜ್ರಿವಾಲ್
Arvind Kejriwal
TV9 Web
| Edited By: |

Updated on:Sep 13, 2022 | 10:26 AM

Share

ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅಹಮದಾಬಾದ್‌ನಲ್ಲಿ ಆಟೋ ಡ್ರೈವರ್‌ಗೆ ನೀಡಿದ ಭರವಸೆಯನ್ನು ಉಳಿಸಿಕೊಂಡರು. ಮತ್ತು ತಡರಾತ್ರಿ ಅವರ ಮನೆಗೆ ತೆರಳಿ ಊಟ ಮಾಡಿದರು. ಆದರೆ, ಆಟೋ ಚಾಲಕನ ಮನೆಗೆ ತಲುಪುವ ಮುನ್ನವೇ ಸಿಎಂ ಕೇಜ್ರಿವಾಲ್ ಮತ್ತು ಅಹಮದಾಬಾದ್ ಪೊಲೀಸರ ನಡುವೆ ಹೈವೋಲ್ಟೇಜ್ ಡ್ರಾಮಾ ನಡೆದಿದೆ.

ಅರವಿಂದ್ ಕೇಜ್ರಿವಾಲ್ ಕೇಜ್ರಿವಾಲ್ ಮುಂದೆ ಹೋಗದಂತೆ ಪೊಲೀಸರು ತಡೆದಿದ್ದರು. ವಾಸ್ತವವಾಗಿ, ಅಹಮದಾಬಾದ್ ಪೊಲೀಸರು ಅರವಿಂದ್ ಕೇಜ್ರಿವಾಲ್ ಅವರನ್ನು ಆಟೋ ಚಾಲಕ ವಿಕ್ರಮ್ ದಾಂತನಿಯ ಮನೆಗೆ ಹೋಗದಂತೆ ತಡೆದಿದ್ದರು.

ಭದ್ರತಾ ಕಾರಣಗಳನ್ನು ಉಲ್ಲೇಖಿಸಿ, ಪ್ರೋಟೋಕಾಲ್ ಪ್ರಕಾರ ಅರವಿಂದ್ ಕೇಜ್ರಿವಾಲ್​ರನ್ನು ತಡೆಯಲಾಯಿತು ಎಂದು ಪೊಲೀಸರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಗುಜರಾತ್ ಪೊಲೀಸ್ ಅಧಿಕಾರಿಗಳ ನಡುವೆ ತೀವ್ರ ವಾಗ್ವಾದವೂ ನಡೆಯಿತು.

ಆದಾಗ್ಯೂ, ಇದರ ಹೊರತಾಗಿಯೂ, ಅರವಿಂದ್ ಕೇಜ್ರಿವಾಲ್ ಬಿಗಿ ಭದ್ರತೆಯ ನಡುವೆ ಆ ಆಟೋ ಚಾಲಕನ ಮನೆಗೆ ತಲುಪಿದರು ಮತ್ತು ಆಹಾರವನ್ನೂ ಸೇವಿಸಿದರು.

ಕೇಜ್ರಿವಾಲ್ ಎರಡು ದಿನಗಳ ಗುಜರಾತ್ ಪ್ರವಾಸ ಗುಜರಾತ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್ ಅಹಮದಾಬಾದ್‌ಗೆ ಎರಡು ದಿನಗಳ ಭೇಟಿಯಲ್ಲಿದ್ದಾರೆ.

ಸೋಮವಾರ, ಅವರು ಆಟೋ ಚಾಲಕರೊಂದಿಗೆ ಸಭೆ ನಡೆಸಿದರು, ಇದರಲ್ಲಿ ವಿಕ್ರಮ್ ದಾಂತನಿ ಎಂಬ ವ್ಯಕ್ತಿ ಕೇಜ್ರಿವಾಲ್ ಅವರನ್ನು ತಮ್ಮ ಮನೆಗೆ ಊಟಕ್ಕೆ ಆಹ್ವಾನಿಸಿದ್ದಾರೆ.

ಅವರ ಆಮಂತ್ರಣವನ್ನು ಸ್ವೀಕರಿಸಿದ ಸಿಎಂ ಅವರ ಮನೆಗೆ ತೆರಳಿ ಊಟ ಮಾಡಿದರು. ಈ ಸಂದರ್ಭದಲ್ಲಿ ಗುಜರಾತ್ ಆಮ್ ಆದ್ಮಿ ಪಕ್ಷದ ಸ್ಥಳೀಯ ನಾಯಕರು ಕೂಡ ಕೇಜ್ರಿವಾಲ್ ಜೊತೆಗಿದ್ದರು.

ಕೇಜ್ರಿವಾಲ್ ಟ್ವಿಟರ್‌ನಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ವಿಕ್ರಮ್ ಅವರ ಮನೆಯಲ್ಲಿ ಊಟ ಮಾಡಿದ ನಂತರ, ಕೇಜ್ರಿವಾಲ್ ಅವರು ಚಿತ್ರವನ್ನು ಕ್ಲಿಕ್ ಮಾಡಿದರು ಮತ್ತು ನಂತರ ಅವರು ಆ ಚಿತ್ರಗಳನ್ನು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇಜ್ರಿವಾಲ್ ಈ ಚಿತ್ರಗಳೊಂದಿಗೆ ಬರೆದಿದ್ದಾರೆ, ಅಹಮದಾಬಾದ್‌ನಲ್ಲಿರುವ ಆಟೋ ಡ್ರೈವರ್ ವಿಕ್ರಂಭಾಯ್ ದಾಂತಾನಿ ಅವರು ಬಹಳ ಪ್ರೀತಿಯಿಂದ ತಮ್ಮ ಮನೆಗೆ ಊಟಕ್ಕೆ ಕರೆದೊಯ್ದರು, ಇಡೀ ಕುಟುಂಬಕ್ಕೆ ಅವರನ್ನು ಪರಿಚಯಿಸಿದರು, ರುಚಿಯಾದ ಆಹಾರವನ್ನು ನೀಡಿದರು.

ಈ ಅಪಾರ ಪ್ರೀತಿಗಾಗಿ ವಿಕ್ರಮಭಾಯ್ ಮತ್ತು ಗುಜರಾತ್ ಜನರು ಹಾಗೂ ಎಲ್ಲಾ ಆಟೋ ಚಾಲಕ ಸಹೋದರರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:25 am, Tue, 13 September 22

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​