AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಲ್ಲ, ಜೂನ್​ 27ರಂದು ಎಲ್ಲಾ ತಾಲೂಕುಗಳಲ್ಲಿ ಆಚರಿಸುವಂತೆ ಡಿಸಿಎಂ ಸೂಚನೆ

ಜೂನ್​ 27ರಂದು ಎಲ್ಲಾ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು. ಎಲ್ಲಾ ಕ್ಷೇತ್ರದ 198 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲು ನಿರ್ಧಾರ ಮಾಡಲಾಗಿದೆ.

ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಲ್ಲ, ಜೂನ್​ 27ರಂದು ಎಲ್ಲಾ ತಾಲೂಕುಗಳಲ್ಲಿ ಆಚರಿಸುವಂತೆ ಡಿಸಿಎಂ ಸೂಚನೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಗಂಗಾಧರ​ ಬ. ಸಾಬೋಜಿ
|

Updated on:Jun 22, 2023 | 5:43 PM

Share

ಬೆಂಗಳೂರು: ಜೂನ್​ 27ರಂದು ಎಲ್ಲಾ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ (Kempe Gowda Jayanthi) ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು. ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಭೆ ಮಾಡಲಾಯಿತು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಆಚರಣೆಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

198 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ

ಕೆಂಪೇಗೌಡ ಪ್ರಾಧಿಕಾರದಿಂದ ನಡೆಯುವ ಕಾರ್ಯಕ್ರಮಕ್ಕೆ ಕಂದಾಯ ಇಲಾಖೆ ಸಹಭಾಗಿತ್ವ ಇರಲಿದೆ. ಬಿಬಿಎಂಪಿ ವಾರ್ಡ್ ಮಟ್ಟದಲ್ಲೂ ಹಿಂದೆ ಜಯಂತಿ ಆಚರಣೆ‌ ನಡೆಯುತ್ತಿತ್ತು. ಎಲ್ಲಾ ಕ್ಷೇತ್ರದ 198 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲು ನಿರ್ಧಾರ ಮಾಡಿದ್ದು, ಬಿ.ಎಲ್​.ಶಂಕರ್​ ನೇತೃತ್ವದಲ್ಲಿ ಅರ್ಹ ವ್ಯಕ್ತಿಗಳ ಆಯ್ಕೆ ಮಾಡಲಾಗಿದೆ. ಹಾಸನದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿದೆ ಎಂದು ಹೇಳಿದರು.

ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳು  

  • ಕೆಂಪೇಗೌಡ ಜಯಂತಿ ಕಾರ್ಯಕ್ರಮ ಯಾವುದೇ ಜಾತಿ ಧರ್ಮ ಮತ್ತು ಭಾಷೆಗೆ ಸೀಮಿತ ಅಲ್ಲ.
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಡೆಯಿಂದ ಜೂನ್ 27 ರಂದು ರಾಜ್ಯದ ಎಲ್ಲ ತಾಲೂಕಿನಲ್ಲೂ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಕಡ್ಡಾಯ ಆಚರಣೆಗೆ ಸೂಚನೆ.
  • ಮಾಗಡಿ ಯಲಹಂಕ, ಕೆಂಪಾಂಬುದಿ ಕೆರೆ ಲಾಲ್ ಬಾಗ್ ಸೇರಿದಂತೆ ನಗರದ 5 ಕಡೆಗಳಿಂದ ಜ್ಯೋತಿ ಹಿಡಿದು ವಿಧಾನಸೌಧಕ್ಕೆ ಜಾತ್ರಾ ಮೆರವಣಿಗೆ.
  • ಬೆಳಗ್ಗೆ 9 ಗಂಟೆಗೆ ಆರಂಭವಾಗಲಿರುವ ಮೆರವಣಿಗೆಯನ್ನು ಸಚಿವರಿಂದ ಉದ್ಘಾಟನೆ.
  • 12 ಗಂಟೆಗೆ ವಿಧಾನಸೌಧದ ಎದುರಿರುವ ಕೆಂಪೇಗೌಡ ಪ್ರತಿಮೆಯ ಬಳಿ ಮೆರವಣಿಗೆ ಆಗಮನ.
  • ಮಧ್ಯಾಹ್ನ 12 ಗಂಟೆಯ ನಂತರ ಬ್ಯಾಂಕ್ವೆಟ್ ಹಾಲ್​ನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ
  • ಬಿಎಲ್ ಶಂಕರ್ ನೇತೃತ್ವದಲ್ಲಿ ಸಾಧಕರ ಆಯ್ಕೆ ಮಾಡಿದ್ದು, ಮೂರು ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವ.
  • ಬೆಂಗಳೂರು ನಗರದಲ್ಲಿ 28 ರಿಂದ 5ರ ವರೆಗೆ ಶಾಸಕರ ಅನುಕೂಲಕ್ಕೆ ತಕ್ಕಂತೆ ಎಲ್ಲ ಬೆಂಗಳೂರಿನ ಎಲ್ಲ ಕ್ಷೇತ್ರದಲ್ಲೂ ಕಾರ್ಯಕ್ರಮ ಕಡ್ಡಾಯ ಆಚರಿಸಬೇಕು.
  • ಜುಲೈ 9ರಂದು ಬಿವಿಎಂಪಿ ವತಿಯಿಂದ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ
  • ಬಿಬಿಎಂಪಿ ವಾರ್ಡ್ ಮಟ್ಟದ ಪ್ರಶಸ್ತಿಗೆ 198 ಜನ ಸಾಧಕರನ್ನು ಆಯ್ಕೆ
  • ಎಲ್ಲ ಜಾತಿ ಧರ್ಮಗಳ ಸಾಧಕರಿಗೂ ಪ್ರಶಸ್ತಿ ನೀಡುವ ಉದ್ದೇಶ
  • ಕ್ರೀಡೆ ಸಾಹಿತಿ ಸಮಾಜಸೇವೆ ಮಾನದಂಡದ ಅಡಿಯಲ್ಲಿ ಸಾಧಕರ ಆಯ್ಕೆ
  • ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಸನದಲ್ಲೂ ಪ್ರತ್ಯೇಕ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ಕಾರ್ಯಕ್ರಮ ಹಾಗೆ ಮುಂದುವರೆಯಲಿದೆ.

ಪುಕ್ಸಟೆಯಾಗಿ ಯಾರ ಬಳಿಯೂ ನಾವು ಅಕ್ಕಿ ಕೇಳುತ್ತಿಲ್ಲ

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪುಕ್ಸಟೆಯಾಗಿ ಯಾರ ಬಳಿಯೂ ನಾವು ಅಕ್ಕಿ ಕೇಳುತ್ತಿಲ್ಲ. ಬೇರೆ ರಾಜ್ಯದಿಂದ ಅಕ್ಕಿ ಖರೀದಿಸುವ ಬಗ್ಗೆ ಮಾತುಕತೆ ನಡೆದಿದೆ. ನಿಮ್ಮ ಪಕ್ಷಕ್ಕಿಂತ ನಮ್ಮ ಪಕ್ಷ ವಿಭಿನ್ನವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ರಾಜ್ಯದ ಜನರಿಗೆ ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ಸಿಎಂ ಸಿದ್ಧರಾಮಯ್ಯ ಸಚಿವರು ದೆಹಲಿಯಲ್ಲಿ ಯಾರನ್ನು ಭೇಟಿಯಾದ್ರೋ ಗೊತ್ತಿಲ್ಲ. ನಾನು ದೆಹಲಿಗೆ ಹೋಗಿಲ್ಲ, ಹೋಗುವ ಟೈಂ ಬರುತ್ತದೆ ಹೋಗುತ್ತೇನೆ ಎಂದರು.

ಕುಮಾರಸ್ವಾಮಿ ಹೇಳಿಕೆಗೆ ಡಿ.ಕೆ.ಶಿವಕುಮಾರ್​ ಟಾಂಗ್

ಬಿಜೆಪಿಯವರು ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸಲಿಲ್ಲ. ನಮಗೆ ಬಡವರ ಬಗ್ಗೆ ಕಾಳಜಿ ಇದೆ. ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ಸಿಗರಿಗೆ ಜ್ಞಾನ ಇರಲಿಲ್ವಾ ಎಂಬ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್​ ಟಾಂಗ್​ ನಿಡಿದ್ದು, ನಮಗೆ ಖಂಡಿತಾ ಜ್ಞಾನ ಇರಲಿಲ್ಲ, ಕುಮಾರಣ್ಣಗೆ ಜ್ಞಾನ ಇತ್ತಲ್ಲ ಸಾಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಕಾರ್ಡುಗಳು ದೋಖಾ ಕಾರ್ಡುಗಳು: ಕಾಂಗ್ರೆಸ್ ವಿರುದ್ಧ ಆರ್​ ಅಶೋಕ ವಾಗ್ದಾಳಿ

ಶೋಭಾ ಕರಂದ್ಲಾಜೆಯವರು ಮೊದಲು ಇದರ ಬಗ್ಗೆ ಮಾತಾಡಲಿ

ಗ್ಯಾರಂಟಿ ಘೋಷಣೆಗೂ ಮುನ್ನ ಮೆದುಳು ಇರಲಿಲ್ವಾ ಎಂಬ ಕೇಂದ್ರ ಸಚಿವೆ ಶೋಭಾ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಹಿಂದೆ ಮೋದಿ ಎಲ್ಲರ ಖಾತೆಗೆ 15 ಲಕ್ಷ ರೂ. ಹಣ ಹಾಕುತ್ತೇವೆ ಎಂದಿದ್ದರು. ಬಿಜೆಪಿ ಹಿಂದೆ ಸಾಕಷ್ಟು ಭರವಸೆ ನೀಡಿತ್ತು, ಭರವಸೆ ಈಡೇರಿಸಿದೆಯಾ ಎಂದು ಪ್ರಶ್ನಿಸಿದರು. ಶೋಭಾ ಕರಂದ್ಲಾಜೆಯವರು ಮೊದಲು ಇದರ ಬಗ್ಗೆ ಮಾತಾಡಲಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:42 pm, Thu, 22 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ