ಬೆಂಗಳೂರು: ಜೂನ್ 27ರಂದು ಎಲ್ಲಾ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ (Kempe Gowda Jayanthi) ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಭೆ ಮಾಡಲಾಯಿತು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಆಚರಣೆಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ಕೆಂಪೇಗೌಡ ಪ್ರಾಧಿಕಾರದಿಂದ ನಡೆಯುವ ಕಾರ್ಯಕ್ರಮಕ್ಕೆ ಕಂದಾಯ ಇಲಾಖೆ ಸಹಭಾಗಿತ್ವ ಇರಲಿದೆ. ಬಿಬಿಎಂಪಿ ವಾರ್ಡ್ ಮಟ್ಟದಲ್ಲೂ ಹಿಂದೆ ಜಯಂತಿ ಆಚರಣೆ ನಡೆಯುತ್ತಿತ್ತು. ಎಲ್ಲಾ ಕ್ಷೇತ್ರದ 198 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲು ನಿರ್ಧಾರ ಮಾಡಿದ್ದು, ಬಿ.ಎಲ್.ಶಂಕರ್ ನೇತೃತ್ವದಲ್ಲಿ ಅರ್ಹ ವ್ಯಕ್ತಿಗಳ ಆಯ್ಕೆ ಮಾಡಲಾಗಿದೆ. ಹಾಸನದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿದೆ ಎಂದು ಹೇಳಿದರು.
ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪುಕ್ಸಟೆಯಾಗಿ ಯಾರ ಬಳಿಯೂ ನಾವು ಅಕ್ಕಿ ಕೇಳುತ್ತಿಲ್ಲ. ಬೇರೆ ರಾಜ್ಯದಿಂದ ಅಕ್ಕಿ ಖರೀದಿಸುವ ಬಗ್ಗೆ ಮಾತುಕತೆ ನಡೆದಿದೆ. ನಿಮ್ಮ ಪಕ್ಷಕ್ಕಿಂತ ನಮ್ಮ ಪಕ್ಷ ವಿಭಿನ್ನವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್ ದರ ಏರಿಕೆ ಮಾಡಿದ್ದಾರೆ; ಹೆಚ್ಡಿ ಕುಮಾರಸ್ವಾಮಿ ಆರೋಪ
ರಾಜ್ಯದ ಜನರಿಗೆ ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ಸಿಎಂ ಸಿದ್ಧರಾಮಯ್ಯ ಸಚಿವರು ದೆಹಲಿಯಲ್ಲಿ ಯಾರನ್ನು ಭೇಟಿಯಾದ್ರೋ ಗೊತ್ತಿಲ್ಲ. ನಾನು ದೆಹಲಿಗೆ ಹೋಗಿಲ್ಲ, ಹೋಗುವ ಟೈಂ ಬರುತ್ತದೆ ಹೋಗುತ್ತೇನೆ ಎಂದರು.
ಬಿಜೆಪಿಯವರು ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸಲಿಲ್ಲ. ನಮಗೆ ಬಡವರ ಬಗ್ಗೆ ಕಾಳಜಿ ಇದೆ. ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ಸಿಗರಿಗೆ ಜ್ಞಾನ ಇರಲಿಲ್ವಾ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನಿಡಿದ್ದು, ನಮಗೆ ಖಂಡಿತಾ ಜ್ಞಾನ ಇರಲಿಲ್ಲ, ಕುಮಾರಣ್ಣಗೆ ಜ್ಞಾನ ಇತ್ತಲ್ಲ ಸಾಕು ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಗ್ಯಾರಂಟಿ ಕಾರ್ಡುಗಳು ದೋಖಾ ಕಾರ್ಡುಗಳು: ಕಾಂಗ್ರೆಸ್ ವಿರುದ್ಧ ಆರ್ ಅಶೋಕ ವಾಗ್ದಾಳಿ
ಗ್ಯಾರಂಟಿ ಘೋಷಣೆಗೂ ಮುನ್ನ ಮೆದುಳು ಇರಲಿಲ್ವಾ ಎಂಬ ಕೇಂದ್ರ ಸಚಿವೆ ಶೋಭಾ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಹಿಂದೆ ಮೋದಿ ಎಲ್ಲರ ಖಾತೆಗೆ 15 ಲಕ್ಷ ರೂ. ಹಣ ಹಾಕುತ್ತೇವೆ ಎಂದಿದ್ದರು. ಬಿಜೆಪಿ ಹಿಂದೆ ಸಾಕಷ್ಟು ಭರವಸೆ ನೀಡಿತ್ತು, ಭರವಸೆ ಈಡೇರಿಸಿದೆಯಾ ಎಂದು ಪ್ರಶ್ನಿಸಿದರು. ಶೋಭಾ ಕರಂದ್ಲಾಜೆಯವರು ಮೊದಲು ಇದರ ಬಗ್ಗೆ ಮಾತಾಡಲಿ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:42 pm, Thu, 22 June 23