AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸ್ಪೀಕರ್​ ರಮೇಶ್ ​​ಕುಮಾರ್ ‘ಕೈ‘ ಬಿಟ್ಟು, ಕೆ.ಹೆಚ್. ಮುನಿಯಪ್ಪಗೆ ಮಣೆ ಹಾಕಿ ಕಾಂಗ್ರೆಸ್ ಚುನಾವಣಾ ಸಮಿತಿ ರಚನೆ!

ಎಲೆಕ್ಷನ್ ಕಮಿಟಿಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸ್ಥಾನ ನೀಡಿಲ್ಲ. ಆದ್ರೆ ಕೆ.ಹೆಚ್.ಮುನಿಯಪ್ಪ ಸ್ಥಾನ ಪಡೆದಿದ್ದಾರೆ. ಈ ಮೂಲಕ ಹೈಕಮಾಂಡ್ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ.

ಮಾಜಿ ಸ್ಪೀಕರ್​ ರಮೇಶ್ ​​ಕುಮಾರ್ ‘ಕೈ‘ ಬಿಟ್ಟು, ಕೆ.ಹೆಚ್. ಮುನಿಯಪ್ಪಗೆ ಮಣೆ ಹಾಕಿ ಕಾಂಗ್ರೆಸ್ ಚುನಾವಣಾ ಸಮಿತಿ ರಚನೆ!
K.H.ಮುನಿಯಪ್ಪ, ಕೆ.ಆರ್.ರಮೇಶ್​​ಕುಮಾರ್
TV9 Web
| Updated By: ಆಯೇಷಾ ಬಾನು|

Updated on:Dec 15, 2022 | 12:47 PM

Share

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್(Congress) ಭರ್ಜರಿ ಸಿದ್ಧತೆ ನಡೆಸಿದೆ. ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಹಂಚಿಕೆಗೆ ಸಮಿತಿ ರಚನೆ ಮಾಡಿದೆ. 36 ಮಂದಿಯನ್ನು ಒಳಗೊಂಡ ಕರ್ನಾಟಕ ಪ್ರದೇಶ ಕಾಂಗ್ರೆಸ್ ಚುನಾವಣಾ ಸಮಿತಿ ರಚಿಸಲಾಗಿದೆ. ಆದ್ರೆ ಈ ಸಮಿತಿಯಲ್ಲಿ ಮಾಜಿ ಸ್ಪೀಕರ್ ಕೆ.ಆರ್.ರಮೇಶ್​​ಕುಮಾರ್​​ (KR Ramesh Kumar)  ಅವರ ಹೆಸರನ್ನು ಕೈಬಿಡಲಾಗಿದೆ. K.H.ಮುನಿಯಪ್ಪ(KH Muniyappa) ಹೈಕಮಾಂಡ್ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ.

ಎಲೆಕ್ಷನ್ ಕಮಿಟಿಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸ್ಥಾನ ನೀಡಿಲ್ಲ. ಆದ್ರೆ ಕೆ.ಹೆಚ್.ಮುನಿಯಪ್ಪ ಸ್ಥಾನ ಪಡೆದಿದ್ದಾರೆ. ಈ ಮೂಲಕ ಹೈಕಮಾಂಡ್ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಮುನಿಯಪ್ಪ ಮತ್ತಷ್ಟು ಪ್ರಭಾವಶಾಲಿಯಾಗುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಿಂತ ಕಿರಿಯರಿಗೆ ಎಲೆಕ್ಷನ್ ಕಮಿಟಿಯಲ್ಲಿ ಸ್ಥಾನ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ನಿಂದ​ ಭರದ ಸಿದ್ಧತೆ, ಟಿಕೆಟ್ ಹಂಚಿಕೆಗೆ ಸಮಿತಿ ರಚನೆ

ಸಮಿತಿಯಲ್ಲಿರುವ ನಾಯಕರ ಹೆಸರುಗಳು

ಈ ಸಮಿತಿಯಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್​, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್​, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಎಂ.ವೀರಪ್ಪ ಮೊಯ್ಲಿ, ಡಾ.ಜಿ.ಪರಮೇಶ್ವರ್​, ಆರ್.ವಿ.ದೇಶಪಾಂಡೆ, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಆರ್.ಧ್ರುವನಾರಾಯಣ, ಸಲಿಂ ಅಹ್ಮದ್, ರೆಹಮಾನ್ ಖಾನ್, ಮಾರ್ಗರೇಟ್ ಆಳ್ವಾ, ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಕೆ.ಗೋವಿಂದರಾಜ್, ಡಾ.ಹೆಚ್.ಸಿ.ಮಹದೇವಪ್ಪ, ಎನ್.ಚಲುವರಾಯಸ್ವಾಮಿ, ಬಸವರಾಜ ರಾಯರೆಡ್ಡಿ, ಬಿ.ಕೆ.ಸುರೇಶ್, ಎಲ್.ಹನುಮಂತಯ್ಯ, ನಾಸಿರ್ ಹುಸೇನ್, ಎಂ.ಆರ್.ಸೀತಾರಾಮ್, ಶಿವರಾಜ್ ತಂಗಡಗಿ, ವಿನಯ್ ಕುಲಕರ್ಣಿ, ವಿ.ಎಸ್.ಉಗ್ರಪ್ಪ, ಭೋಸರಾಜ್, ಶರಣಪ್ಪ ಸುನಗಾರ್ ವಿನಯ್ ಕುಮಾರ್, ಜಿ.ಪದ್ಮಾವತಿ, ಶಾಮನೂರು ಶಿವಶಂಕರಪ್ಪ ಇದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:47 pm, Thu, 15 December 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!