AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂವಿಧಾನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ’; ಕೈ ನಾಯಕ ಪಟೇರಿಯಾ ವಿವಾದಾತ್ಮಕ ಹೇಳಿಕೆ

ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸುವ ಭರದಲ್ಲಿ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ, ಹತ್ಯೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದು, ಎಫ್​ಐಆರ್ ದಾಖಲಾಗಿದೆ.

‘ಸಂವಿಧಾನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ’; ಕೈ ನಾಯಕ ಪಟೇರಿಯಾ ವಿವಾದಾತ್ಮಕ ಹೇಳಿಕೆ
ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ
TV9 Web
| Edited By: Rakesh Nayak Manchi|

Updated on:Dec 12, 2022 | 12:54 PM

Share

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಟೀಕಾ ಪ್ರಹಾರ ನಡೆಸುವ ಭರದಲ್ಲಿ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ (Raja Pateriya) ಅವರು ಪ್ರಧಾನಿಯ ಹತ್ಯೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸಂವಿಧಾನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ರಾಜಾ ಪಟೇರಿಯಾ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ರಾಜಾ ಪಟೇರಿಯಾ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಅವರಲ್ಲಿ ಮನವಿ ಮಾಡಿದ್ದಾರೆ. ಗೃಹಸಚಿವರು ಹೇಳಿಕೆ ಸಂಬಂಧ ಎಫ್‌ಐಆರ್‌ ದಾಖಲಿಸಲು ಪನ್ನಾ ಪೊಲೀಸ್ ಠಾಣೆಗೆ ಆದೇಶಿಸಿದ್ದಾರೆ. ಅದರಂತೆ ಎಫ್​ಐಆರ್ (FIR) ದಾಖಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಜಾತಿ, ಧರ್ಮ, ಭಾಷೆ ಆಧಾರದಲ್ಲಿ ವಿಭಜನೆ ಮಾಡುತ್ತಿದ್ದಾರೆ. ದಲಿತ, ಆದಿವಾಸಿ, ಅಲ್ಪಸಂಖ್ಯಾತರಿಗೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಅವರ ಆಡಳಿತದಲ್ಲಿ ದಲಿತರು ಆತಂಕವನ್ನು ಎದುರಿಸುತ್ತಿದ್ದಾರೆ. ಪ್ರಸ್ತುತ ದೇಶದಲ್ಲಿ ಬದುಕುವುದಕ್ಕೂ ಆಗುತ್ತಿಲ್ಲ. ಹೀಗಾಗಿ ಮೋದಿ ಹತ್ಯೆಗೆ ಸಿದ್ಧವಾಗಿರಬೇಕು ಎಂದು ರಾಜಾ ಪಟೇರಿಯಾ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: Gujarat CM Oath Taking: ಗುಜರಾತ್ ಮುಖ್ಯಮಂತ್ರಿಯಾಗಿ ಇಂದು ಭೂಪೇಂದ್ರ ಪಟೇಲ್ ಪ್ರಮಾಣವಚನ; ಪ್ರಧಾನಿ ಮೋದಿ, ಬಿಜೆಪಿ ನಾಯಕರು ಭಾಗಿ

ರಾಜಾ ಪಟೇರಿಯಾ ಹೇಳಿಕೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹಸಚಿವರು, ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಕೆಳಮಟ್ಟದ ಟೀಕೆಗಳನ್ನು ಮಾಡಿದ್ದು ಇದೇ ಮೊದಲಲ್ಲ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರು ರಾವಣನಿಗೆ ಹೋಲಿಸಿದ್ದರು. ರಾಜಾ ನಾನು ರಾಜಾ ಪಟೇರಿಯಾ ಹೇಳಿಕೆಯನ್ನು ಗಮನಸಿದ್ದೇನೆ. ರಾಜಾ ಪಟೇರಿಯಾ ವಿರುದ್ಧ ಕೂಡಲೇ ಎಫ್‌ಐಆರ್‌ ದಾಖಲಿಸುವಂತೆ ಪೊಲೀಸ್ ಅಧೀಕ್ಷಕರಿಗೆ ಸೂಚನೆ ನೀಡುತ್ತಿದ್ದೇನೆ. ಸದ್ಯ ದೇಶದಲ್ಲಿರುವುದು ಗಾಂಧಿಯ ಕಾಂಗ್ರೆಸ್ ಅಲ್ಲ, ಇಟಲಿ ಕಾಂಗ್ರೆಸ್ ಇದೆ ಎಂದರು.

ಹೇಳಿಕೆ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಜಾ ಪಟೇರಿಯಾ ಅವರು ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ನಾನು ಗಾಂಧಿಯನ್ನು ನಂಬುವ ಮನುಷ್ಯನಾಗಿದ್ದು, ಆ ರೀತಿ ಮಾಡಲಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಮೋದಿ ಅವರನ್ನು ಸೋಲಿಸುವ ಅರ್ಥದಲ್ಲಿ ಕೊಲ್ಲಿ ಎಂದು ಹೇಳಿದ್ದೇನೆ. ದಲಿತರು, ಆದಿವಾಸಿಗಳ ರಕ್ಷಣೆ ಮತ್ತು ನಿರುದ್ಯೋಗವನ್ನು ತೊಡೆದುಹಾಕಲು ಮೋದಿಯನ್ನು ಸೋಲಿಸುವುದು ಅವಶ್ಯಕ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Mon, 12 December 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ