AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಬದಲಾವಣೆ ವಿಚಾರ: ಕರ್ನಾಟಕ ರಾಜಕೀಯ ವಿಪ್ಲವದ ಬಗ್ಗೆ ಕೋಡಿಮಠದ ಶ್ರೀ ಭವಿಷ್ಯ

Kodi Matha Swamiji on Karnataka Politics: ಹೇಳಿದರೆ ಅದರ ಸಾವಿಗೆ ಕಾರಣ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಉಂಟಾಯಿತು. ಇದೇ ವಿಚಾರ ರಾಜಕೀಯದ ಬಗ್ಗೆ ಹೇಳಲು ತೊಡಕಾಗುತ್ತದೆ. ಆದರೆ ಸದ್ಯವೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದು ಶ್ರೀಗಳು ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ವಿಚಾರ: ಕರ್ನಾಟಕ ರಾಜಕೀಯ ವಿಪ್ಲವದ ಬಗ್ಗೆ ಕೋಡಿಮಠದ ಶ್ರೀ ಭವಿಷ್ಯ
ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು
TV9 Web
| Updated By: ganapathi bhat|

Updated on:Jul 21, 2021 | 3:47 PM

Share

ಕಾರವಾರ: ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ ಎಂದು ಕರ್ನಾಟಕ ರಾಜಕೀಯ (Karnataka Politics) ಕುರಿತು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಭವಿಷ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ. ಬೇಟೆಗಾರನೊಬ್ಬನಿಂದ ತಪ್ಪಿಸಿಕೊಂಡ ಜಿಂಕೆ ಓಡಿಹೋಗಿತ್ತು. ಸನ್ಯಾಸಿಯೊಬ್ಬನ ಎದುರು ಹಾದು ಜಿಂಕೆ ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ದ್ವಂದ್ವ ಉಂಟಾಯಿತು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಉಂಟಾಯಿತು. ಇದೇ ವಿಚಾರ ರಾಜಕೀಯದ ಬಗ್ಗೆ ಹೇಳಲು ತೊಡಕಾಗುತ್ತದೆ. ಆದರೆ ಸದ್ಯವೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದು ಶ್ರೀಗಳು ಹೇಳಿದ್ದಾರೆ.

ಸಂಕ್ರಾಂತಿಯ ಒಳಗೆ ಬಹುದೊಡ್ಡ ಅವಘಡ ಆಗಲಿದೆ. ಜಗತ್ತನ್ನು ತಲ್ಲಣಿಸುವ ಅವಘಡ ಆಗಲಿದೆ. ಆಗಸ್ಟ್ 3ನೇ ವಾರದಿಂದ ರೋಗ ರುಜಿನಗಳು ಹೆಚ್ಚಾಗಲಿವೆ. ಜನವರಿವರೆಗೂ ರೋಗ ರುಜಿನಗಳು ಹೀಗೆಯೇ ಇರಲಿವೆ. ಜನ ಭೀತಿಯಿಂದ ಸಾಯ್ತಿದ್ದಾರೆ ಹೊರತು ಕಾಯಿಲೆಯಿಂದಲ್ಲ ಎಂದು ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ. ನವೆಂಬರ್‌ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದೂ ಅವರು ನುಡಿದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಬದಲಾವಣೆ ವಿಚಾರವು ಹಿರಿದಾಗಿ ಬೆಳೆಯುತ್ತಿದೆ. ವಿವಿಧ ಮಠಾಧೀಶರು ಹಾಗೂ ರಾಜಕೀಯ ನಾಯಕರು ಈ ಬಗ್ಗೆ ಪರ-ವಿರೋಧ ಚರ್ಚೆಯಲ್ಲಿ ತೊಡಗಿದ್ದಾರೆ. ಈ ಮಧ್ಯೆ ವಿವಿಧ ಮಠದ ಶ್ರೀಗಳು ಯಡಿಯೂರಪ್ಪರನ್ನು ಭೇಟಿಯಾಗಿ ಮಾತನಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ. ಬಿಎಸ್‌ವೈ ಬದಲಾವಣೆ ಮಾಡಿದರೆ ಬಿಜೆಪಿ ಹುಡುಕಬೇಕಾಗುತ್ತೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಹುಡುಕಬೇಕಾಗುತ್ತದೆ ಎಂದು ಸಿಎಂ ಬಿಎಸ್‌ವೈ ಭೇಟಿ ಬಳಿಕ ಸ್ವಾಮೀಜಿಗಳು ಹೇಳಿಕೆ ನೀಡಿದ್ದಾರೆ.

ಅವರು ಮೋದಿ ಶಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಧಾರವಾಡದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಸುದ್ದಿಗೋಷ್ಠಿ ನಡೆಸಲಾಗಿದೆ. ಧಾರವಾಡ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಬಿಎಸ್‌ವೈ ಬದಲಾಯಿಸಬಾರದು. ಅವರು ಮೋದಿ ಶಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ. ವೈಯಕ್ತಿಕ ಶಕ್ತಿ ಮತ್ತು ವರ್ಚಸ್ಸಿನ ಮೇಲೆ ಅಧಿಕಾರಕ್ಕೆ ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ವೀರೇಂದ್ರ ಪಾಟೀಲರಿಗೆ ಹಿಂದೆ ಈ ರೀತಿ ಮಾಡಲಾಗಿತ್ತು. ಆಗಿನಿಂದ ಲಿಂಗಾಯತರು ಬಿಜೆಪಿಗೆ ಬೆಂಬಲಿಸುತ್ತ ಬಂದಿದ್ದಾರೆ. ಯಾರನ್ನೊ ಸಿಎಂ ಮಾಡಲು ಹೊರಟರೆ ಸಮಾಜ ಸಹಿಸುವುದಿಲ್ಲ. ವೀರಶೈವ ಸಮಾಜದ ನಾಯಕರನ್ನು ಛಿದ್ರ ಮಾಡುವ ಕೆಲಸ ಕೆಲ ನಾಯಕರು ಮಾಡುತ್ತಿದ್ದಾರೆ. ಶಿಸ್ತಿನ ಪಕ್ಷ ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕು. ಆದರೆ ನಮ್ಮ ಸಮಾಜದ ನಾಯಕರ ಮಧ್ಯ ಜಗಳ ಹಚ್ಚುತ್ತಿದ್ದಾರೆ. ಇದಕ್ಕೆ ನಮ್ಮ ಸಮಾಜದ ನಾಯಕರು ಬಲಿಪಶು ಆಗಬಾರದು ಎಂದು ಅವರು ಹೇಳಿದ್ದಾರೆ.

ಬಿಎಸ್‌ವೈ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಬಿಎಸ್‌ವೈ ಬಿಎಸ್‌ವೈ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಬಿಎಸ್‌ವೈ. ಅಂತಹ ಸಿಎಂ ಬಿಎಸ್‌ವೈರನ್ನ ಕೆಳಗಿಳಿಸಲು ಷಡ್ಯಂತ್ರ ನಡೆಸಲಾಗುತ್ತಿದೆ. ಸ್ವಪಕ್ಷೀಯರಿಂದಲೇ ಷಡ್ಯಂತ್ರ ನಡೆದಿರುವುದು ಬೇಸರ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಬಳಿಕ ಸ್ವಾಮೀಜಿಗಳು ಹೇಳಿಕೆ ನೀಡಿದ್ದಾರೆ. ಬಿಎಸ್‌ವೈರನ್ನ ಕೆಳಗಿಳಿಸಿದರೆ ಬಿಜೆಪಿಗೆ ಒಳ್ಳೆಯದಾಗಲ್ಲ. ರಾಜ್ಯದಲ್ಲಿ, ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಒಳ್ಳೆಯದಾಗುವುದಿಲ್ಲ ಎಂದು ಚಿಕ್ಕಮಗಳೂರಿನ ಜಯಬಸವಾನಂದ ಸ್ವಾಮೀಜಿ ಹೇಳಿದ್ದಾರೆ. ಬಿಎಸ್‌ವೈರನ್ನ ಸಿಎಂ ಆಗಿ ಮುಂದುವರಿಸಲು ಆಗ್ರಹಿಸುತ್ತೇವೆ. ನಾವೆಲ್ಲ ಮಠಾಧೀಶರು ಸಹಮತದಿಂದ ಆಗ್ರಹಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬದಲಾವಣೆ ಮಾಡಿದರೆ, ಕರ್ನಾಟಕದಲ್ಲಿ ಬಿಜೆಪಿಯನ್ನು ಹುಡುಕಬೇಕಾಗುತ್ತದೆ: ಯಡಿಯೂರಪ್ಪ ಭೇಟಿ ಬಳಿಕ ಸ್ವಾಮೀಜಿಗಳ ಹೇಳಿಕೆ

ಯಡಿಯೂರಪ್ಪ ಕೈಬಿಟ್ಟರೆ 6 ತಿಂಗಳಲ್ಲಿ ಸರ್ಕಾರ ಪತನ ಗ್ಯಾರಂಟಿ, ಬಿಜೆಪಿಗೆ ದೊಡ್ಡ ಪೆಟ್ಟು: ಮುರುಘಾ ಮಠದ ಸ್ವಾಮೀಜಿ ಎಚ್ಚರಿಕೆ

(Kodimatha Kodi Mutt Swamiji on Karnataka BJP Politics CM BS Yediyurappa issue)

Published On - 3:28 pm, Wed, 21 July 21

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು