ರಾಜಭವನ ತಲುಪಿದ ಕೋಲಾರ ಬಿಜೆಪಿ ಸಂಸದ ಮುನಿಸ್ವಾಮಿ-ಕಾಂಗ್ರೆಸ್​ ಶಾಸಕ ನಾರಾಯಣಸ್ವಾಮಿ ಜಟಾಪಟಿ

ಕೋಲಾರದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಮತ್ತು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್​.ನಾರಾಯಣಸ್ವಾಮಿ ನಡುವಿನ ಜಟಾಪಟಿ ಇದೀಗ ರಾಜಭವನ ತಲುಪಿದೆ. ಸಂಸದ ಮುನಿಸ್ವಾಮಿ ಅವರು ಇಂದು ನಾರಾಯಣಸ್ವಾಮಿ ವಿರುದ್ಧ ದೂರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ರಾಜಭವನ ತಲುಪಿದ ಕೋಲಾರ ಬಿಜೆಪಿ ಸಂಸದ ಮುನಿಸ್ವಾಮಿ-ಕಾಂಗ್ರೆಸ್​ ಶಾಸಕ ನಾರಾಯಣಸ್ವಾಮಿ ಜಟಾಪಟಿ
ಸಂಸದ ಮುನಿಸ್ವಾಮಿ ಮತ್ತು ಶಾಸಕ ಎಸ್​ ನಾರಾಯಸ್ವಾಮಿ ನಡುವೆ ಜಟಾಪಟಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Sep 27, 2023 | 2:21 PM

ಬೆಂಗಳೂರು,/ಕೋಲಾರ (ಸೆಪ್ಟೆಂಬರ್ 27): ಕೋಲಾರದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ((MP Muniswamy) ಮತ್ತು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್​.ನಾರಾಯಣಸ್ವಾಮಿ (SN Narayanaswamy) ನಡುವೆ ಜಟಾಪಟಿ ನಡೆದಿದ್ದು, ಇದೀಗ ಈ ಗಲಾಟೆ ರಾಜಭವನ ತಲುಪಿದೆ. ಕೋಲಾರದಲ್ಲಿ ಜನತಾ ದರ್ಶನದ ವೇಳೆ ನಡೆದಿದ್ದ ಗಲಾಟೆ ಬಗ್ಗೆ ಸಂಸದ ಮುನಿಸ್ವಾಮಿ ಅವರು ಇಂದು (ಸೆಪ್ಟೆಂಬರ್ 27) ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಮತ್ತು ಕೇಶವ ಪ್ರಸಾದ್ ಅವರೊಂದಿಗೆ ರಾಜಭವನಕ್ಕೆ ತೆರಳಿ ಕೈ ಶಾಸಕ ನಾರಾಯಣಸ್ವಾಮಿ ವಿರುದ್ಧ ದೂರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ಸಂಸದ ಮುನಿಸ್ವಾಮಿ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಇಬ್ಬರು ವೇದಿಕೆ ಮೇಲೆ ಜಗಳ ಮಾಡಿಕೊಂಡಿದ್ದು, ಇಬ್ಬರ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಕೂಡಲೇ ಮಧ್ಯ ಪ್ರವೇಶಿಸಿದ್ದ ಪೊಲೀಸರು ಇಬ್ಬರು ನಾಯಕರನ್ನು ವೇದಿಕೆಯಿಂದ ಕೆಳಗೆ ಕರೆದುಕೊಂಡು ಬಂದು ಸಮಾಧಾನ ಮಾಡಿದ್ದರು. ಇಷ್ಟಕ್ಕೆ ಸುಮ್ಮನಾಗದ ಸಂಸದ ಮುನಿಸ್ವಾಮಿ, ನಾರಾಯಣಸ್ವಾಮಿ ವಿರುದ್ಧ ರಾಜಭವನದ ಮೆಟ್ಟಿಲೇರಿದ್ದು, ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಕೋಲಾರದಲ್ಲಿ ಸಂಸದ-ಶಾಸಕರ ನಡುವೆ ಜಟಾಪಟಿ, ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿದ ಮುನಿಸ್ವಾಮಿ

ಗಲಾಟೆ ಹಿನ್ನೆಲೆ

ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ, ಭೂಗಳರನ್ನ ಇಟ್ಕೊಂಡು ಕಾರ್ಯಕ್ರಮ ಮಾಡುತ್ತಿದ್ದೀರಾ ಅಂತ ಕಿಡಿಕಾರಿದ್ದರು. ಈ ಮಾತು ಕೇಳುತ್ತಿದ್ದಂತೆ, ಶಾಸಕ ನಾರಾಯಣಸ್ವಾಮಿ ರೊಚ್ಚಿಗೆದ್ದರು. ಇಂತಹ ಕಾರ್ಯಕ್ರಮದಲ್ಲಿ ಹೀಗೆಲ್ಲ ಯಾಕೆ ಮಾತನಾಡುತ್ತೀರಿ, ಒತ್ತುವರಿ ಮಾಡಿರುವವ ಹೆಸರು ಹೇಳಿ ಎಂದು ರೊಚ್ಚಿಗೆದ್ದರು.ಇದು ನಂತರ ಪರಸ್ಪರ ಕಾದಾಟದ ಹಂತಕ್ಕೆ ಹೋಯ್ತು. ಇಬ್ಬರೂ ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡಿದ್ದು, ಕೈ ಕೈಮಿಲಾಯಿಸುವ ಹಂತಕ್ಕೆ ಹೋಗಿತ್ತು. ಅಲ್ಲದೇ ಬೋ.. ಮಗನೇ, ಅಪ್ಪನಿಗೆ ಹುಟ್ಟಿದ್ರೆ ಸಾಬೀತು ಮಾಡು ಎಂದು ನಾರಾಯಣಸ್ವಾಮಿ ಕೂಗಾಡಿದ್ದರು.

ಕೊನೆಗೆ ಇಬ್ಬರ ಮಾತಿನ ವಾಕ್ಸಮರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಕೂಡಲೇ ಮಧ್ಯ ಪ್ರವೇಶ ಮಾಡಿದ ಎಸ್​ಪಿ ನಾರಾಯಣ್, ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದಿಂದ ಹೊರಗೆ ಕರೆದುಕೊಂಡು ಹೋಗಿದ್ದರು. ಇತ್ತ ಸಚಿವ ಬೈರತಿ ಸುರೇಶ್ ಅವರು ಶಾಸಕರನ್ನು ಸಮಾಧಾನಗೊಳಿಸಿದ್ದರು. ಇನ್ನು ಕಾರ್ಯಕ್ರಮ ಮುಗಿದ ಮೇಲೆ ಶಾಸಕ ನಾರಾಯಣಸ್ವಾಮಿ ಮಾತನಾಡಿ, ನನ್ನ ಮೇಲೆ ಮಾಡಿರುವ ಆರೋಪ ಸಾಬೀತು ಪಡಿಸಿದರೆ ನಿಮ್ಮ ಮನೆಯಲ್ಲಿ ಜೀತ ಮಾಡುತ್ತೇನೆ ಎಂದು ಸವಾಲು ಹಾಕಿದ್ದರು.

ಜನಪ್ರತಿನಿಧಿಗಳು ಎನ್ನುವುದನ್ನು ನೋಡದೇ ಅಧಿಕಾರಿಗಳು ಮತ್ತು ಸಾರ್ವಜನಿಕರ ಮುಂದೆ ಉಭಯ ನಾಯಕರು ಕಿತ್ತಾಡಿಕೊಂಡ ವಿಡಿಯೋವನ್ನು ಜನರು ತಮ್ಮ ಮೊಬೈಲ್​ಗಳಲ್ಲಿ ಸೆರೆ ಹಿಡಿದಿದ್ದು, ಇದೀಗ ಆ ವಿಡಿಯೋ ವೈರಲ್ ಆಗುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್