ಕೋಲಾರ ಕಾಂಗ್ರೆಸ್​ ಶಾಸಕರ ಸಂಧಾನ ಸಭೆ ಯಶಸ್ವಿ: ಹಾಗಾದ್ರೆ ಲೋಕಸಭೆ ಟಿಕೆಟ್ ಯಾರಿಗೆ..?

Kolar Congress Ticket Fight: ಕೋಲಾರ ಲೋಕಸಭಾ ಟಿಕೆಟ್​ ಸಂಬಂಧ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಅಸಮಾಧಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು (ಮಾರ್ಚ್ 28) ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಂಧಾನ ಸಭೆ ನಡೆದಿದ್ದು, ಅದು ಯಶಸ್ವಿಯಾಗಿದೆ. ಹಾಗಾದ್ರೆ, ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಯಾರು?

ಕೋಲಾರ ಕಾಂಗ್ರೆಸ್​ ಶಾಸಕರ ಸಂಧಾನ ಸಭೆ ಯಶಸ್ವಿ: ಹಾಗಾದ್ರೆ ಲೋಕಸಭೆ ಟಿಕೆಟ್ ಯಾರಿಗೆ..?
ಕೋಲಾರ ಕಾಂಗ್ರೆಸ್ ನಾಯಕರ ಸಭೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 28, 2024 | 6:34 PM

ಬೆಂಗಳೂರು, (ಮಾರ್ಚ್ 28): ಕರ್ನಾಟಕ ಕಾಂಗ್ರೆಸ್ ಪಾಳೆಯದಲ್ಲಿ ಕೋಲಾರ ಕಾಳಗದ (Kolar Congress Ticket Fight) ಕೋಲಾಹಲ ಎದ್ದಿದೆ. ಟಿಕೆಟ್ ಘೋಷಣೆ ಆಗ್ಬೇಕಿರೋ ಕೋಲಾರ ಲೋಕಸಭಾ(Kolar Loksabha Ticket)  ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವಿನ ಗುದ್ದಾಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಂದು(ಮಾರ್ಚ್ 28) ಮುಖ್ಯಮಂತ್ರಿ ಅವರ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸುವುದಾಗಿ ತಿಳಿಸಿದ್ದಾರೆ. ಸಿಎಂ, ಡಿಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸಿಎಂ, ಡಿಸಿಎಂ ನಿರ್ಧಾರಕ್ಕೆ ಬದ್ಧ ಎಂದ ಸಚಿವ ಸುಧಾಕರ್

ಸಭೆ ಬಳಿಕ ಸಿಎಂ ನಿವಾಸ ಕಾವೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಸಿ.ಸುಧಾಕರ್, ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸುವುದಾಗಿ ತಿಳಿಸಿದ್ದಾರೆ. ಸಿಎಂ, ಡಿಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ನಮ್ಮಿಂದ ಪಕ್ಷಕ್ಕೆ ಹಾನಿಯಾಗಲು ಅವಕಾಶ ನೀಡುವುದಿಲ್ಲ. ಪಕ್ಷದ ಆದೇಶಕ್ಕೆ ಗೌರವ ಕೊಟ್ಟು ಅವರು ಹೇಳಿದಂತೆ ನಡೆದುಕೊಳ್ಳುತ್ತೇವೆ. ನಿನ್ನೆ(ಮಾರ್ಚ್ 28) ಆದಂತ ಸಮಸ್ಯೆ ಬಗ್ಗೆ ಸಿಎಂ, ಡಿಸಿಎಂ ಬಳಿ ಹೇಳಿಕೊಂಡಿದ್ದೇವೆ. ರಾಜೀನಾಮೆ ನೀಡಲು ಮುಂದಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು.

ಕೊನೆಯ ಹಂತದಲ್ಲಿ ಈ ಗೊಂದಲಗಳು ಆಗಬಾರದಿತ್ತು. ನಾಯಕರ ಸೂಚನೆಗೆ ನಾವು ಬದ್ದ. ಇದು ಎಡಗೈ, ಬಲಗೈ ಸಂಘರ್ಷ ಅಲ್ಲ. ಕೆಲವರ ಅಭಿಪ್ರಾಯ ಸಂಖ್ಯೆ ಜಾಸ್ತಿ ಇದೆ ಕೊಡಿ ಅಂತ ಇತ್ತು. ಅದೊಂದು ಕೆಟ್ಟ ಘಳಿಗೆ. ಅಂತಿಮವಾಗಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು. ಈ ಘಟನೆಗೆ ವಿಶಾದ ವ್ಯಕ್ತಪಡಿಸುತ್ತೇವೆ. ಇದರಿಂದ ಪಕ್ಷಕ್ಕೆ ಮುಜುಗರ ಆಗಿದೆ. ನಾವು ಕ್ಷಮೆ ಕೇಳಿದ್ದೇವೆ, ಯಾವುದೇ ಅಭ್ಯರ್ಥಿ ಬಗ್ಗೆ ಚರ್ಚೆ ಆಗಿಲ್ಲ. ಆದ್ರೆ ಯಾರಿಗೆ ಟಿಕೆಟ್ ಕೊಟ್ರೂ ಒಂದಾಗಿ ಕೆಲಸ ಮಾಡ್ತೀವಿ. ನಮ್ಮ ಜಗಳ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆ ಲಾಭ ಆಗಲ್ಲ. ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೋಲಾರದಲ್ಲಿ ಕಾಂಗ್ರೆಸ್ ಶಾಸಕರ ರಾಜೀನಾಮೆ ನಿರ್ಧಾರಕ್ಕೆ ಖರ್ಗೆ ‘ಮಲತಾಯಿ ಧೋರಣೆ’ ಕಾರಣವಾಯ್ತಾ?

ಕೋಲಾರ ಉಸ್ತುವಾರಿ ಸಚಿವ ಹೇಳಿದ್ದೇನು?

ಇನ್ನು ಇದೇ ವೇಳೆ ಮಾತನಾಡಿರುವ ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಿಎಂ ಹಾಗೂ ಡಿಸಿಎಂ ಸಭೆ ಕರೆದ ಸಭೆಯಲ್ಲಿ ಕೋಲಾರ ಜಿಲ್ಲೆಯ ಪಕ್ಷದ ಎಲ್ಲಾ ಶಾಸಕರೂ ಭಾಗವಹಿಸಿದ್ದು, ಸಂಧಾನ ಸಭೆ ಯಶಸ್ವಿಯಾಗಿದೆ. ಹೈಕಮಾಂಡ್ ಆದೇಶಕ್ಕೆ ಬದ್ದ ಎಂದು ಶಾಸಕರು ಹೇಳಿದ್ದಾರೆ. ನಮ್ಮ ಶಾಸಕರಿಗೆ ಕನ್ಪೂಜನ್ ಇತ್ತು. ಈಗ ಸಿಎಂ ಡಿಸಿಎಂ ಆದೇಶಕ್ಕೆ ಬದ್ದ ಎಂದು ಹೇಳಿದ್ದಾರೆ. ಟಿಕೆಟ್ ವಿಚಾರದಲ್ಲಿ ಯಾವುದೇ ವ್ಯಕ್ತಿಯ ಹೆಸರು ಚರ್ಚೆ ಆಗಿಲ್ಲ, ಶಾಸಕರ ವಯಕ್ತಿಕ ಅಭಿಪ್ರಾಯವನ್ನು ಸಿಎಂ, ಡಿಸಿಎಂ ಹೇಳಿದ್ದಾರೆ. ಹೈಕಮಾಂಡ್ ಹೇಳಿದ್ದೆ ಪೈನಲ್ ಎಂದು ಶಾಸಕರು ಹೇಳಿದ್ದಾರೆ. ಅಲ್ಲದೇ ಬಹಿರಂಗ ಹೇಳಿಕೆ ನೀಡಬೇಡಿ ಎಂದು ಶಾಸಕರುಗಳಿಗೆ ಸಿಎಂ, ಡಿಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಹಾಗಾದ್ರೆ ಕೋಲಾರ ಕಾಂಗ್ರಸ್ ಅಭ್ಯರ್ಥಿ ಯಾರು?

ಸಚಿವ ಕೆಎಚ್​ ಮುನಿಯಪ್ಪ ಅಳಿಯನಿಗೆ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಖಚಿತವಾಗುತ್ತಿದ್ದಂತೆಯೇ ರಮೇಶ್ ಕುಮಾರ್ ಬಣದ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಕೆಲ ಶಾಸಕ, ವಿಧಾನಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ಕೋಲಾರ ನಾಯಕರ ಜೊತೆ ಸಂಧಾನ ಸಭೆ ಮಾಡಿದ್ದು, ಸಭೆ ಫಲಪ್ರದವಾಗಿದೆ. ಸಿಎಂ, ಡಿಸಿಎಂ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ರಮೇಶ್ ಕುಮಾರ್ ಬಣದ ನಾಯಕರು ಹೇಳುತ್ತಿದ್ದಾರೆ. ಆದ್ರೆ, ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ ಉಳಿದಿದೆ.

ಮುನಿಯಪ್ಪ ಅಳಿಯನಿಗೆ ಟಿಕೆಟ್​ ಎನ್ನುವ ಸುದ್ದಿ ಹರಿದಾಡಿದ ಬೆನ್ನಲ್ಲೇ ಇಷ್ಟೆಲ್ಲಾ ಕೋಲಾಹಲ ನಡೆದಿದೆ. ಹೀಗಾಗಿ ಹೈಕಮಾಂಡ್​, ಬೇರೆಯವರಿಗೆ ಟಿಕೆಟ್ ನೀಡುತ್ತೋ ಅಥವಾ ಅದೇ ಮುನಿಯಪ್ಪನವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಮಣೆ ಹಾಕುತ್ತೋ ಎನ್ನುವುದೇ ತೀವ್ರ ಕುತೂಹಲ ಮೂಡಿಸಿದೆ. ಒಂದು ವೇಳೆ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡಿದರೆ, ರಮೇಶ್​ ಕುಮಾರ್ ಬಣದ ನಾಯಕರು ಸುಮ್ಮನೆ ಇರುತ್ತಾರಾ ಅಥವಾ ಚುನಾವಣೆಯಲ್ಲಿ ಸೈಲೆಂಟ್ ಆಗುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:24 pm, Thu, 28 March 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ