AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

N Mahesh: ಕೊಳ್ಳೇಗಾಲದ ಬಿಎಸ್​ಪಿ ಉಚ್ಛಾಟಿತ ಶಾಸಕ ಎನ್. ಮಹೇಶ್ ಬಿಜೆಪಿಗೆ ಸೇರ್ಪಡೆ

N Mahesh Joins BJP: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಸಮ್ಮುಖದಲ್ಲಿ ಕೊಳ್ಳೇಗಾಲದ ಶಾಸಕ ಎನ್. ಮಹೇಶ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

N Mahesh: ಕೊಳ್ಳೇಗಾಲದ ಬಿಎಸ್​ಪಿ ಉಚ್ಛಾಟಿತ ಶಾಸಕ ಎನ್. ಮಹೇಶ್ ಬಿಜೆಪಿಗೆ ಸೇರ್ಪಡೆ
ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾದ ಶಾಸಕ ಎನ್. ಮಹೇಶ್
TV9 Web
| Updated By: ಸುಷ್ಮಾ ಚಕ್ರೆ|

Updated on:Aug 05, 2021 | 12:54 PM

Share

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಶಾಸಕ ಎನ್. ಮಹೇಶ್ (N Mahesh) ಇಂದು ಬಿಜೆಪಿ ಪಕ್ಷಕ್ಕೆ (Karnataka BJP)  ಸೇರ್ಪಡೆಯಾಗಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಿಎಂ ಬಸವರಾಜ ಬೊಮ್ಮಾಯಿ‌ (CM Basavaraj Bommai), ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರ ಸಮ್ಮುಖದಲ್ಲಿ ಎನ್. ಮಹೇಶ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಬಿಎಸ್​ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎನ್. ಮಹೇಶ್ ಗೆಲುವು ಸಾಧಿಸಿದ್ದರು. ಆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಬಿಎಸ್​ಪಿ ಮೈತ್ರಿ ಮಾಡಿಕೊಂಡಿತ್ತು. ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಬಿಎಸ್​ಪಿಯಿಂದ ಎನ್. ಮಹೇಶ್ ಶಾಸಕರಾಗಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದ್ದರು.

ಅದಾದ ಬಳಿಕ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಬಹುಮತ ಸಾಬೀತುಪಡಿಸಲು ವಿಫಲವಾಗಿದ್ದರಿಂದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಿ ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆ ಸರ್ಕಾರದಲ್ಲಿ ಎನ್. ಮಹೇಶ್ ಅವರಿಗೂ ಸಚಿವ ಸ್ಥಾನ ನೀಡಲಾಗಿತ್ತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್. ಮಹೇಶ್ 2018ರ ಅಕ್ಟೋಬರ್​ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ವೇಳೆ ಆಪರೇಷನ್ ಕಮಲಕ್ಕೆ ಒಳಗಾಗಿ 17 ಶಾಸಕರು ರಾಜೀನಾಮೆ ನೀಡಿದ್ದರಿಂದ ಮೈತ್ರಿ ಸರ್ಕಾರ ಪತನವಾಯಿತು.

MLA N Mahesh Joined BJP

ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾದ ಶಾಸಕ ಎನ್. ಮಹೇಶ್

ಮೈತ್ರಿ ಸರ್ಕಾರದ ಶಾಸಕರನ್ನು ಬಿಜೆಪಿಯವರು ಆಪರೇಷನ್ ಕಮಲದ ಮೂಲಕ ಮುಂಬೈಗೆ ಕರೆದುಕೊಂಡು ಹೋದ ಬಳಿಕ ಸದನದಲ್ಲಿ ವಿಶ್ವಾಸಮತ ಯಾಚನೆ ವೇಳೆಗೆ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಬೇಕೆಂದು ಬಿಎಸ್​ಪಿ ನಾಯಕರು ಎನ್. ಮಹೇಶ್​ಗೆ ಸೂಚನೆ ನೀಡಿದ್ದರೂ ಅವರು ತಟಸ್ಥರಾಗಿ ಉಳಿದಿದ್ದರಿಂದ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು. ಇದೀಗ ಎನ್. ಮಹೇಶ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಈಗಾಗಲೇ ಬಿಜೆಪಿಯಲ್ಲಿ ವಲಸಿಗರ ಸಂಖ್ಯೆ ಹೆಚ್ಚಾಗಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಎಲ್ಲ ಶಾಸಕರಿಗೂ ಬಿಜೆಪಿ ಸರ್ಕಾರದಲ್ಲಿ ಉತ್ತಮ ಸ್ಥಾನ ನೀಡಲಾಗಿದೆ. ಇದೀಗ ಬಿಎಸ್​ಪಿ ಉಚ್ಛಾಟಿತ ಶಾಸಕ ಎನ್. ಮಹೇಶ್ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ತಾವು ಯಾವುದೇ ಷರತ್ತುಗಳನ್ನೂ ಬಿಜೆಪಿಗೆ ವಿಧಿಸುವುದಿಲ್ಲ, ನಾನು ಯಾವುದೇ ಅಧಿಕಾರದ ಆಕಾಂಕ್ಷಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ: ಹೊಸ ಸಂಪುಟದಲ್ಲಿ ಮೈಸೂರು ಮೂಲೆಗುಂಪು; ಸಿದ್ಧರಾಮಯ್ಯ ಪ್ರಭಾವ ತಗ್ಗಿಸುವ ಅವಕಾಶ ಕೈಚೆಲ್ಲಿತೇ ಬಿಜೆಪಿ ಹೈಕಮಾಂಡ್?

(Kollegal MLA N Mahesh Joins BJP in Front of CM Basavaraj Bommai, BS Yediyurappa in Bengaluru Today)

Published On - 12:50 pm, Thu, 5 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ