AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ ಆರೋಪ

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿದೆ. ಆಡಳಿತಾತ್ಮಕ ಸಮಸ್ಯೆ ಊಹೆಗೆ ನಿಲುಕದಷ್ಟು ಹದಗೆಟ್ಟಿದೆ. ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ ಎಂದು ಬಿಜೆಪಿ ಎಂಎಲ್​ಸಿ ಕೋಟ ಶ್ರೀನಿವಾಸ್ ಪೂಜಾರಿ ಆರೋಪಿಸಿದ್ದಾರೆ. ಯಾವ ಕಾರಣಕ್ಕೆ ಇಂಥ ಅನಾಹುತಗಳನ್ನು ಮಾಡುತ್ತಿದ್ದೀರಿ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ ಆರೋಪ
ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಸಿದ್ದರಾಮಯ್ಯ
TV9 Web
| Edited By: Rakesh Nayak Manchi|

Updated on: Oct 16, 2023 | 5:29 PM

Share

ಉಡುಪಿ, ಅ.16: ಸಿದ್ದರಾಮಯ್ಯ (Siddaramaiah) ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿವೆ. ಆಡಳಿತಾತ್ಮಕ ಸಮಸ್ಯೆ ಊಹೆಗೆ ನಿಲುಕದಷ್ಟು ಹದಗೆಟ್ಟಿದೆ. ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ ಎಂದು ಬಿಜೆಪಿ ಎಂಎಲ್​ಸಿ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojary) ಆರೋಪಿಸಿದ್ದಾರೆ. ಯಾವ ಕಾರಣಕ್ಕೆ ಇಂಥ ಅನಾಹುತಗಳನ್ನು ಮಾಡುತ್ತಿದ್ದೀರಿ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 12,500 ಮದ್ಯದಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ. ಅಂಗಡಿಯ ವರ್ಗಾವಣೆಗೆ 18 ಲಕ್ಷ ರೂಪಾಯಿ ಸರಕಾರಕ್ಕೆ ಪಾವತಿಸುವ ನಿಯಮವಿದೆ. ಹೆಚ್ಚುವರಿ 25 ಲಕ್ಷ ರೂಪಾಯಿಗೆ ಅಧಿಕಾರಿಗಳು ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್​ಗೆ 1000 ಕೋಟಿ ರೂ. ಟಾರ್ಗೆಟ್: ಯಾವ ರಾಜ್ಯಕ್ಕೆ ಎಷ್ಟು? ಬಿಜೆಪಿ ಟ್ವೀಟ್

ಹೊಸ ಸನ್ನದಿಗೆ 10 ಲಕ್ಷದ ಬದಲು 75 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯಿಂದ 42,000 ಕೋಟಿ ರೂಪಾಯಿ ಆದಾಯ ಬರುತ್ತದೆ. ಅಬಕಾರಿ ಇಲಾಖೆ ಅಧಿಕಾರಿಗಳು ಭ್ರಷ್ಟಾಚಾರದ ಕೋಪವಾಗಿ ವ್ಯಾಪಾರಿಗಳನ್ನು ಕಾಡುತ್ತಿದ್ದಾರೆ. ಲಂಚ ಕೊಡದೆ ಯಾವ ಕೆಲಸವು ಆಗುದಿಲ್ಲ. ಅಧಿಕಾರಿಗಳು ಮಾಹಿತಿ ಹಕ್ಕಿನ ಏಜೆಂಟ್​​ಗಳಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ದಯವಿಟ್ಟು ಈ ಪತ್ರದ ಹಿನ್ನೆಲೆಯಲ್ಲಿ ತನಿಖೆ ಆಗಬೇಕು. ಅಬಕಾರಿ ಇಲಾಖೆ ಅಧಿಕಾರಿಗಳು ಅಬಕಾರಿ ಸಚಿವರ ತನಿಖೆ ಆಗಬೇಕು. ಮುಖ್ಯಮಂತ್ರಿಗಳ ಕೃಪಾಕಟಾಕ್ಷದ ಅಡಿಯಲ್ಲೇ ಇದೆಲ್ಲವೂ ನಡೆಯುತ್ತಿದೆಯೇ? ಮುಖ್ಯಮಂತ್ರಿಯಾಗಿ ತಾವು ತೆಗೆದುಕೊಂಡ ಕ್ರಮವನ್ನು ಜನತೆ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್