AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನಿಂದ ಅಂತಾ ತಪ್ಪು‌ ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್

ದಾವಣಗೆರೆ ಬೈಎಲೆಕ್ಷನ್ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್​ ಹೈಕಮಾಂಡ್​ ದೊಡ್ಡ ಶಾಕ್​ ನೀಡಿದೆ. ದಾವಣಗೆರೆ ಬೈಎಲೆಕ್ಷನ್ ಪ್ರಚಾರದಿಂದ ದೂರ ಉಳಿದಿರುವುದು, ಷಡ್ಯಂತ್ರದ ಆರೋಪದಲ್ಲಿ ಇಬ್ಬರ ತಲೆದಂಡ ಆಗಿದೆ. KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನಿಂದ ಅಂತಾ ತಪ್ಪು‌ ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್
ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್Image Credit source: tv9 kannada
Anil Kalkere
| Edited By: |

Updated on: Apr 11, 2026 | 5:29 PM

Share

ಬೆಂಗಳೂರು, ಏಪ್ರಿಲ್ 11: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಾವಣಗೆರೆ ಕಾಂಗ್ರೆಸ್ (congress) ಅಭ್ಯರ್ಥಿ ಸಮರ್ಥ್​​ ವಿರುದ್ಧ ಷಡ್ಯಂತ್ರ ಆರೋಪ ಸಂಬಂಧ ರಾಜೀನಾಮೆ ಕೊಡುವ ಪರಿಸ್ಥಿತಿ ಬಂದಿದೆ. ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿ ಆರೋಪ ಸಂಬಂಧ ಹೈಕಮಾಂಡ್​ ಕೈಗೆ ವರದಿ ತಲುಪುತ್ತಿದ್ದಂತೆ ಖಡಕ್ ಆಗಿ ರಾಜೀನಾಮೆ ಕೊಡಿ ಅಂತಾ ಎಐಸಿಸಿ ಸೂಚನೆ ಕೊಟ್ಟಿದೆ. ಅದರಂತೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ (Abdul Jabbar) ರಾಜೀನಾಮೆ ಕೊಟ್ಟಿದ್ದಾರೆ.

ನನ್ನಿಂದ ಅಂತಾ ತಪ್ಪು‌ ಏನಾಗಿದೆ: ಅಬ್ದುಲ್‌ ಜಬ್ಬಾರ್

ಬೆಂಗಳೂರಿನಲ್ಲಿ ಟಿವಿ9ಗೆ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್​​ ಪ್ರತಿಕ್ರಿಯಿಸಿದ್ದು, ಏಪ್ರಿಲ್‌ 3ರಂದೇ KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವೆ. ಪಕ್ಷದ ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧ. ನನ್ನಿಂದ ಅಂತಾ ತಪ್ಪು‌ ಏನಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಈ ತಕ್ಷಣವೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ಅತಿ ಬುದ್ಧಿವಂತಿಕೆ ಒಳ್ಳೆಯದಲ್ಲ. ಬೀಳಿಸಿ ಕಾಲು ಎಳೆಯುವ ಕೆಲಸ ಬೇಡ. ಹೈಕಮಾಂಡ್ ಹುದ್ದೆ ಕೊಟ್ಟಿತ್ತು, ಅರ್ಹತೆ ಇಲ್ಲದೆ ಏಕೆ ಕೊಡುತ್ತಾರೆಂದು ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಬಿಟ್ಟು ನಾನು ಬೇರೆ ಪಕ್ಷದ ಕಡೆ ಯೋಚನೆ ಮಾಡಲ್ಲ. ಪಕ್ಷದಲ್ಲಿ ನ್ಯಾಯ ನೀತಿ‌ ಇತ್ತು, ಅದನ್ನ ಮುಂದುವರಿಸಿ ಹೋಗಬೇಕು. ಸಮುದಾಯಕ್ಕಾಗಿ ಕಾಂಗ್ರೆಸ್‌ ಪಕ್ಷವನ್ನ ವಿರೋಧ ಮಾಡುವುದಕ್ಕೆ ಆಗಲ್ಲ. ಇನ್ನು ಅವರು ಸಚಿವ ಸ್ಥಾನಕ್ಕಾಗಿಯೇ ಒಡಕು ಮೂಡಿಸುತ್ತಿದ್ದಾರೆ. ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಿಲ್ಲ. ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಕೊಡಿ ಅಂತಾ ಪತ್ರದಲ್ಲಿ ಬರೆದಿದ್ದೇವೆ ಎಂದು ಹೇಳಿದ್ದಾರೆ.

ಅದನ್ನ ಪ್ರಶ್ನಿಸಿದ್ದೇ ತಪ್ಪಾ?

ಇನ್ನು ಬೈಎಲೆಕ್ಷನ್ ಸಂಬಂಧ ಯಾವೊಬ್ಬ ನಾಯಕರೂ ನನ್ನ ಜತೆ ಚರ್ಚಿಸಿಲ್ಲ. ನನ್ನ ಬಿಟ್ಟು ಚುನಾವಣೆಗೆ ಹೋಗಿದ್ದಾರೆ, ಆದರೂ ಗೆಲ್ಲಲಿ ಅಂತಾ ಹಾರೈಸುವೆ. ಕುರುಬ ಸಮುದಾಯ ಸೇರಿ ಬೇರೆಯವರಿಗೆ ಟಿಕೆಟ್ ಕೊಡಿ ಅಂದಿದ್ದೆ. ಒಂದೇ ಮನೆಯಲ್ಲಿ ನಾಲ್ವರಿಗೆ ಟಿಕೆಟ್ ಕೊಟ್ಟರೆ ಹೇಗೆ? ಅದನ್ನ ಪ್ರಶ್ನಿಸಿದ್ದೇ ತಪ್ಪಾ? ಸಚಿವ ಜಮೀರ್ ಬಂದ್ಮೇಲೆ ಶೇ.50ರಷ್ಟು ವಿರೋಧ ಕಡಿಮೆಯಾಗಿತ್ತು. ಯಾವ ನಾಯಕರೂ ಸ್ಪಷ್ಟೀಕರಣ ಕೇಳಿಲ್ಲ ಎಂದು ಅಬ್ದುಲ್‌ ಜಬ್ಬಾರ್ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು