Karnataka Bandh: ಲೋಕಾಯುಕ್ತ ಬಲೆಗೆ ಮಾಡಾಳ್ ಪುತ್ರ..; ‘ಕೈ’ಗೆ ಸಿಕ್ತು ಅಸ್ತ್ರ: ರಾಜ್ಯಾದ್ಯಂತ 2 ಗಂಟೆ ಬಂದ್​ಗೆ ಕರೆ ನೀಡಿದ ಕಾಂಗ್ರೆಸ್

ಒಂದು ಕಡೆ ಮಾಡಾಳ್​ಗೆ ಲೋಕಾಯುಕ್ತ ಬಿಗ್​ ಶಾಕ್​ ಕೊಟ್ಟಿದ್ರೆ, ಮತ್ತೊಂದೆಡೆ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಸಮರ ಸಾರಿರುವ ಕಾಂಗ್ರೆಸ್, ಮಾರ್ಚ್ 9ರಂದು ರಾಜ್ಯಾದ್ಯಂತ 2 ಗಂಟೆ ಬಂದ್​ಗೆ ಕರೆ ನೀಡಿದೆ.

Karnataka Bandh: ಲೋಕಾಯುಕ್ತ ಬಲೆಗೆ ಮಾಡಾಳ್ ಪುತ್ರ..; ‘ಕೈ’ಗೆ ಸಿಕ್ತು ಅಸ್ತ್ರ: ರಾಜ್ಯಾದ್ಯಂತ 2 ಗಂಟೆ ಬಂದ್​ಗೆ ಕರೆ ನೀಡಿದ ಕಾಂಗ್ರೆಸ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Mar 06, 2023 | 9:46 AM

ಬೆಂಗಳೂರು: ವಿಧಾಸಭೆ ಚುನಾವಣೆ (Karnataka Assembly Elections 2023) ಹೊತ್ತಲ್ಲಿ 40 ಪರ್ಸೆಂಟ್ ಕಮಿಷನ್ ಅಸ್ತ್ರವನ್ನೇ ಇಟ್ಕೊಂಡು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದ ಕಾಂಗ್ರೆಸ್​ಗೆ (Congress) ಇದೀಗ ಮತ್ತೊಂದು ಅಸ್ತ್ರ ಸಿಕ್ಕಿದೆ. ಭ್ರಷ್ಟಾಚಾರ(Corruption) ಸಮರ ಸಾರಿದ್ದ ಕೈ ಪಡೆಗೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪ್ರಕರಣವನ್ನು ಭಾರೀ ಅಸ್ತ್ರವಾಗಿ ಬಳಸಿಕೊಳ್ಳು ಕಾಂಗ್ರೆಸ್​ ಸನ್ನದ್ಧವಾಗಿದೆ. ಹೀಗಾಗಿಯೇ ಮಾರ್ಚ್ 9ರಂದು ರಾಜ್ಯಾದ್ಯಂತ 2 ಗಂಟೆ ಬಂದ್​ಗೆ ಕರ್ನಾಟಕ ಕಾಂಗ್ರೆಸ್​ ಕರೆ ಕೊಟ್ಟಿದೆ. ಮಾರ್ಚ್ 9ರಂದು ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್​ಗೆ (Karnataka Bandh) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. 2 ಗಂಟೆ ಕಾಲ ಅಂಗಡಿ ಮುಂಗಟ್ಟು ಮುಚ್ಚಿ ಬಂದ್​ಗೆ ಸಹಕರಿಸಲು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಹಗರಣ ಮುಚ್ಚಿಹಾಕಲೆಂದೇ ಲೋಕಾಯುಕ್ತ ಮುಚ್ಚಿಸಿದ್ದ ಸಿದ್ದರಾಮಯ್ಯ; ಸಿಎಂ ಬೊಮ್ಮಾಯಿ ವಾಗ್ದಾಳಿ

ಇಂದು(ಮಾರ್ಚ್ 05) ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಎಂ ಸಾಕ್ಷಿ ಕೋಡಿ ಅಂದಿದ್ದರು. ಲೋಕಾಯುಕ್ತದವರು ಇಂದು ಸಾಕ್ಷಿ ನೀಡಿದ್ದಾರೆ. ಲೋಕಾಯುಕ್ತರಿಗೆ ಅಭಿನಂದನೆ. ಸಿಎಂ ರಾಜೀನಾಮೆಗೂ ಒತ್ತಾಯಿಸಿ ಪ್ರತಿಭಟನೆ ಕೂಡ ಮಾಡಿದ್ದೇವೆ. ಬರುವ 9ರಂದು(ಮಾರ್ಚ್ 09) ಬಂದ್ ಕರೆ ನೀಡಲಾಗುತ್ತಿದೆ. ಬಂದ್ ವೇಳೆ ಯಾರಿಗೂ ತೊಂದರೆ ನೀಡಲ್ಲ. ಶಾಂತಿ ರೀತಿಯಿಂದ ಪ್ರತಿಭಟನೆ ಮಾಡಬೇಕು. ವ್ಯಾಪಾರವನ್ನ ಎರಡು ಗಂಟೆಗಳ‌ ಕಾಲ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿದರು.

ರಾಷ್ಟ್ರದ ನಾಯಕರು ಹಾಗೂ ರಾಜ್ಯದ ನಾಯಕರು ಬಳಿ ಚರ್ಚೆ ಮಾಡಲಾಗಿದೆ. ಇಡೀ ಕರ್ನಾಟಕ ರಾಜ್ಯಕ್ಕೆ ಕಳಂಕ ಬಂದಿದೆ. ಮೂರು ವರ್ಷಗಳಿಂದ ಭ್ರಷ್ಟಾಚಾರ ಬಗ್ಗೆ ಗಮನ ಸೆಳೆದಿದ್ದೆವೆ. ಕೋವಿಡ್ ,ಮಠ,ಕಾರ್ಪೋರೇಷನ್ ಗಳಲ್ಲಿ ಕಮಿಷನ್ ಬಗ್ಗೆ ಗಮನ ಸೆಳೆದಿದ್ದೆವೆ. ಗುತ್ತಿಗೆದಾರರ ಅಧ್ಯಕ್ಷ ಪಿಎಮ್ ಗೆ ಪತ್ರ ಬರೆದಿದ್ದರು. ಪಿಎಮ್ ನಾನು ತಿನ್ನಲ್ಲ,ತಿನ್ನೊಕು ಬಿಡುವುದಿಲ್ಲ ಅಂದಿದ್ದರು. ನಾವು ಜನಸಾಮಾನ್ಯರಿಗೆ ಆಗುವ ತೊಂದರೆ ಬಗ್ಗೆ ಗಮನ‌ ಸೆಳೆದಿದ್ದೆವೆ ಎಂದರು.

ನಾವು ಉತ್ತಮ ಸರ್ಕಾರ ಮಾಡುತ್ತೇವೆ. ಜನರು ನಮಗೆ ಸಹಕಾರ ನೀಡುತ್ತಾರೆ. ಅಮಿತ್ ಷಾ ಕಾರ್ಯಕ್ರಮ ಮುಂದೂಡಿಕೆ ಬಗ್ಗೆ ನಮಗೆ ಸಂಬಂಧ ಇಲ್ಲ. ಸಿಎಂ ರಾಜೀನಾಮೆ ನೀಡಬೇಕು ಆಗ್ರಹಿಸಿದರು.

Published On - 2:03 pm, Sun, 5 March 23

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ