ಜೂ. 20ರಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್​

ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಜೂ. 20ರಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್​
ಡಿಕೆ ಶಿವಕುಮಾರ್
Follow us
ರಮೇಶ್ ಬಿ. ಜವಳಗೇರಾ
|

Updated on:Jun 16, 2023 | 12:46 PM

ಬೆಂಗಳೂರು: ಅಕ್ಕಿ ಖರೀದಿ ಬಗ್ಗೆ ಕರ್ನಾಟಕ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಜೋರಾಗಿದ್ದು, ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ (Narendra Modi) ಸರ್ಕಾರದ ವಿರುದ್ಧ ಕಾಂಗ್ರೆಸ್ (Congress) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನಿಡಿದೆ. ಜೂನ್ 20ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ಕರೆ ನೀಡಿದ್ದಾರೆ. ಈ ಬಗ್ಗೆ ಇಂದು(ಜೂನ್ 16) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೊದಲು ಅಕ್ಕಿ ಕೊಡುತ್ತೇವೆಂದಿದ್ದ FCI ನಂತರ ಸಾಧ್ಯವಿಲ್ಲವೆಂದು ಪತ್ರ ಬರೆದಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಇದು ಉದಾಹರಣೆಯಾಗಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ. ಭಾರತೀಯ ಜನತಾ ಪಕ್ಷದ ನಿರ್ಧಾರಕ್ಕೆ ನಾವು ಧಿಕ್ಕಾರ ಹೇಳಬೇಕು. ಹೀಗಾಗಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್​​ ಖಂಡಿಸುತ್ತೆ, ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಪತ್ರ ಮೂಲಕದ FCI ನವರು ಹೇಳಿದ್ದರು. ಜೂನ್ 12ರಂದು ೨ ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುತ್ತೇವೆ ಎಂದು ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಹೇಳಿತ್ತು. ಆಮೇಲೆ ಮತ್ತೊಂದು ಪತ್ರ ಬರೆದು ಕೊಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಕಾಂಗ್ರೆಸ್ಸಿಗೆ ಬಡವರು ಮತ ಹಾಕಿದ್ದು, ಅವರಿಗೆ ಧಿಕ್ಕಾರ‌ಮಾಡಲು ಬಿಜೆಪಿ ಹೊರಟಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಬೇಕಿದ್ದು, ಮುಂದಿನ ಮಂಗಳವಾರ(ಜೂನ್ 20) ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಹಾಘೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಆಯಾ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಭಾಗವಹಿಸಬೇಕು. ಕೆಪಿಸಿಸಿಯಿಂದ ನಾವು ಸೂಚನೆ ಕೊಡುತ್ತೇವೆ. ನಮ್ಮನ್ನು ಕೇಂದ್ರ ಸರ್ಕಾರ ಹೆದರಿಸುತ್ತಿದೆ. ಬಡವರ ಹೊಟ್ಟೆ ಮೇಲೆ ‌ಹೊಡೆಯುತ್ತಿದ್ದಾರೆ. ನಾವು ಇದರ ವಿರುದ್ಧ ಸಿಡಿಯುತ್ತೇವೆ. ಪ್ರತಿಭಟನೆ ಕೇಂದ್ರ ಸರ್ಕಾರ ಹಾಗೂ ಜನರ ಗಮನ ಸೆಳೆಯಬೇಕು ಎಂದು ಕಾರ್ಯಕರ್ಯರಿಗೆ ಹಾಗೂ ಮುಖಂಡರಿಗೆ ಕರೆ ನೀಡಿದರು.

ಜೆಪಿ ನಡ್ಡಾಗೆ ಅಭಿನಂದನೆ

ಕಾಂಗ್ರೆಸ್ ಸರ್ಕಾರ ಬಂದರೆ ಕೇಂದ್ರದ ಯೋಜನೆಗಳೂ ಸ್ಥಗಿತಗೊಳಿಸುತ್ತೇವೆ ಎಂದು ಜೆಪಿ ನಡ್ಡಾ ಹೇಳಿದ್ದರು. ನುಡಿದಂತೆ ನಡೆದಿದ್ದಾರೆ ಅವರಿಗೆ ಅಭಿನಂದನೆ. ಅವರ ಮಾತಿನ ಪ್ರಕಾರ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ. ಯೋಜನೆಗಳಿಗೆ ಸಹಕಾರ ಕೊಡುವುದಿಲ್ಲ ಎಂದು ಕೇಂದ್ರ ಬಿಜೆಪಿಯವರು ಮತದಾರರಿಗೆ ಬೆದರಿಕೆ ಹಾಕಿದ್ದರು. ಯಾವ ಬಡವರೂ ಹಸಿದುಕೊಂಡು ಇರಬಾರದು ಎನ್ನುವುದು ನಮ್ಮ ಉದ್ದೇಶ. ಬಿಜೆಪಿ ಬಂದ ಮೇಲೆ 7 ಕೆಜಿ ಅಕ್ಕಿಯಿಂದ 5 ಕೆಜಿಗೆ ಇಳಿಸಿದ್ದರು. ನಾವು ಅನ್ನ ಭಾಗ್ಯಕ್ಕೆ ಡೇಟ್ ಫಿಕ್ಸ್ ಮಾಡಿಕೊಳ್ಳುವ ಮೊದಲು ಪತ್ರ ಬರೆದಿದ್ದೆವು. ನಾವೇನು ಫ್ರೀ ಆಗಿ ಅಕ್ಕಿ ಕೊಡಿ ಅಂತ ಕೇಳಿಲ್ಲ. ಅದಕ್ಕೆ ತಗುಲುವ ಹಣವನ್ನೂ ಕೂಡ ನಾವು ನೀಡುವುದಕ್ಕೆ ಸಿದ್ದರಿದ್ದೇವೆ ಎಂದರು.

ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳನ್ನು ಜನರ ಮುಂದೆ ಇಟ್ಟಿದ್ದೇವೆ. ಗ್ಯಾರಂಟಿ ಅನುಷ್ಠಾನಕ್ಕೆ ಬರುತ್ತೋ ಇಲ್ವೋ ಅಂತಾ ಚರ್ಚೆ ಮಾಡುತ್ತಿದ್ದಾರೆ. ವಿಪಕ್ಷ ನಾಯಕರು ಟೀಕೆ ಟಿಪ್ಪಣಿ ಮಾಡಿಕೊಂಡು ಬಂದಿದ್ದಾರೆ. ಮೊದಲ ಸಂಪುಟದಲ್ಲೇ ತಾತ್ವಿಕ ಒಪ್ಪಿಗೆ ನೀಡಿ ಬದ್ಧತೆ ತೋರಿಸಿದ್ದೇವೆ. ಎರಡನೇ ಕ್ಯಾಬಿನೆಟ್​​​ನಲ್ಲಿ ಟೈಮ್​ ಲೈನ್ ಕೂಡ ನಿಗದಿ ಮಾಡಿದ್ದೇವೆ. ಇದರೊಂದಿಗೆ ನುಡಿದಂತೆ ನಡೆಯುತ್ತಿದ್ದೇವೆ. ವಿಪಕ್ಷ ನಾಯಕರು ಏನೇ ಚರ್ಚೆ ಮಾಡಿದರೂ ಉತ್ತರಿಸಲು ತಯಾರಿಲ್ಲ/ ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಮುಖ್ಯಮಂತ್ರಿ ಹಾಗೂ ಸಚಿವರು ದೆಹಲಿಗೆ ಹೋಗುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಪಾರ್ಟಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 21 ತಾರಿಕು ನಮ್ಮನ್ನ ಕರೆದಿದ್ದಾರೆ. ಹಾಗೇ ರಾಹುಲ್ ಗಾಂಧಿ ಅವರು ಸಹ ಕರೆದಿದ್ದಾರೆ. ಹೀಗಾಗಿ ನಾವು ಹೋಗುತ್ತಿದ್ದೇವೆ. ಆ ಸಂದರ್ಭದಲ್ಲಿ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಮಾವಕಾಶ ಕೇಳುತ್ತಿದ್ದೇವೆ. ರಾಜ್ಯ ಬಿಜೆಪಿ ಸಂಸದರ ನಮಗೆ ಸಹಾರ ನೀಡಲಿ. ಅಕ್ಕಿಯನ್ನ ರಾಜ್ಯಕ್ಕೆ ಕೊಡಿಸಿದ್ದೇವೆ ಎನ್ನುವ ಒಂದು ಕ್ರೆಡಿಟ್ ಅವರಿಗೂ ಹೋಗಲಿ. ಅವರ ಸಹಕಾರವನ್ನು ನಾವು ಕೇಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:14 pm, Fri, 16 June 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ