Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಅಡುಗೆ ಮಾಡಲು ಲಾಯಕ್ಕು: ಶಾಮನೂರು ಹೇಳಿಕೆ ಖಂಡಿಸಿದ ಡಿಕೆ ಶಿವಕುಮಾರ್

ಮಾತನಾಡಲು ಬಾರದ ಗಾಯತ್ರಿ ಸಿದ್ದೇಶ್ವರ್‌ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ಸಿಗರ ‘ಕೈ’ ಮೇಲಿದೆ ಎಂಬುದನ್ನು ನಾವು ತೋರಿಸಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದರು. ಇದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಖಂಡಿಸಿದ್ದಾರೆ.

ಮಹಿಳೆ ಅಡುಗೆ ಮಾಡಲು ಲಾಯಕ್ಕು: ಶಾಮನೂರು ಹೇಳಿಕೆ ಖಂಡಿಸಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​, ಶಾಮನೂರು ಶಿವಶಂಕರಪ್ಪ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 31, 2024 | 1:50 PM

ಬೆಂಗಳೂರು, ಮಾರ್ಚ್​​ 31: ಸಂಸದ ಸಿದ್ದೇಶ್ವರ್ (Siddeshwara) ಪತ್ನಿ ಗಾಯತ್ರಿ (Gayatri) ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂಬ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಣ್ಣು ಕುಟುಂಬದ ಕಣ್ಣು, ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಖಂಡನೀಯ. ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ, ಏನೋ ಲೆಕ್ಕಾಚಾರದಲ್ಲಿ ಮಾತಾಡಿದ್ದಾರೆ. ಆರು ಮಂದಿ ಹೆಣ್ಣು ಮಕ್ಕಳಿಗೆ ನಾವು ಟಿಕೆಟ್ ನೀಡಿದ್ದೇವೆ ಎಂದರು.

ಬಿಜೆಪಿ-ಜೆಡಿಎಸ್​ ಮೈತ್ರಿ ನೋಡಿ ನಾಚಿಕೆಯಾಗುತ್ತಿದೆ. ಅವತ್ತು ಹೆಚ್​ಡಿ ಕುಮಾರಸ್ವಾಮಿ ಸುಮಲತಾ ಮನೆಗೆ ಹೋಗಲ್ಲ ಎಂದು ಹೇಳಿದ್ದರು. ಇವತ್ತು ಸಂಸದೆ ಸುಮಲತಾ ಮನೆಗೆ ಹೋಗುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ತೆಗೆದವರನ್ನು ಹೆಚ್​ಡಿ ಕುಮಾರಸ್ವಾಮಿ ತಬ್ಬಿಕೊಂಡಿದ್ದಾರೆ. ನಾನು ವಿಷ ಹಾಕಿದೆ, ಬೆನ್ನಿಗೆ ಚೂರಿ ಹಾಕಿದೆ ಅಂತಾರೆ. ಕುಮಾರಸ್ವಾಮಿ ಅವರೆ ನಾನು ಯಾವ ಅನ್ಯಾಯ ಮಾಡಿದ್ದೆ? ಎಂದು ಪ್ರಶ್ನಿಸಿದರು.

ಶಿವಕಂರಪ್ಪ ಹೇಳಿಕೆಗೆ ಸೈನಾ ನೆಹ್ವಾಲ್​ ಖಂಡನೆ

ಶಾಸಕ ಶಾಮನೂರು ಶಿವಕಂರಪ್ಪ ಅವರ ಹೇಳಿಕೆಗೆ ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್​ ಅವರು ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ. “ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್​ ವಿರುದ್ಧ ಶಾಸಕ ಶಾಮನೂರು ಶಿವಂಕರಪ್ಪ ಅವರು ಕೀಳು ಅಭಿರುಚಿಯ ಹೇಳಿಕೆ ನೀಡಿದ್ದಾರೆ ಎಂದು ಎಕ್ಸ್​ (ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಬ್ಯಾಡ್ಮಿಂಟನ್​​ನಲ್ಲಿ ನಾನು ಭಾರತಕ್ಕಾಗಿ ಪದಕಗಳನ್ನು ಗೆದ್ದಾಗ ನಾನೇನಾಗಬೇಕು ಎಂದು ಕಾಂಗ್ರೆಸ್​ ಬಯಸಿತ್ತೋ ಗೊತ್ತಿಲ್ಲ. ಮಹಿಳೆಯರು ದೊಡ್ಡದನ್ನು ಸಾಧಿಸಲು ಹೊರಟಾಗ ಇಂಥ ಹೇಳಿಕೆಗಳನ್ನು ನೀಡುವುದರ ಹಿಂದಿನ ಮರ್ಮ ಏನೆಂಬುವುದು ತಿಳಿದಿಲ್ಲ” ಎಂದು ಪೋಸ್ಟ್​ ಹಾಕಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ವರದಿ ವಿರೋಧಿಸುತ್ತಿರುವವರ ವಿರುದ್ಧ ಸಿಡಿದೆದ್ದ ಶೋಷಿತ ಸಮುದಾಯ, ಶಾಮನೂರು ಶಿವಶಂಕರಪ್ಪಗೆ ನೇರ ಸವಾಲ್

“ಒಂದೆಡೆ ನಾರಿ ಶಕ್ತಿಗೆ ವಂದನೆ ಮಾಡುತ್ತಿದ್ದೇವೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲಾಗಿದೆ. ಆದರೆ ಮತ್ತೊಂದೆಡೆ ಮಹಿಳೆಯರಿಗೆ ಅಪಮಾನ ಮಾಡುತ್ತಿರುವುದು ನಿಜವಾಗಿಯೂ ವಿಪರ್ಯಾಸ” ಎಂದರು.

ಅಷ್ಟಕ್ಕೂ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

ದಾವಣಗೆರೆ ಬಂಟರ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕಾಂಗ್ರೆಸ್‌ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, ಗಾಯತ್ರಿ ಸಿದ್ದೇಶ್ವರ್‌ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಮಾತನಾಡಲು ಬಾರದ ಗಾಯತ್ರಿ ಸಿದ್ದೇಶ್ವರ್‌ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ಸಿಗರ ‘ಕೈ’ ಮೇಲಿದೆ ಎಂಬುದನ್ನು ನಾವು ತೋರಿಸಬೇಕು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Sun, 31 March 24

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ