ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ: ಡಿಕೆ ಶಿವಕುಮಾರ್ ಹೇಳಿಕೆ

DK Shivakumar: ಕಾಂಗ್ರೆಸ್ ಈ ದೇಶಕ್ಕೆ ಅನಿವಾರ್ಯ ಎಂಬುದನ್ನ ನೆನಪಿಸಲು ಪ್ರಯತ್ನ ಮಾಡುತ್ತೇವೆ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ: ಡಿಕೆ ಶಿವಕುಮಾರ್ ಹೇಳಿಕೆ
ಡಿಕೆ ಶಿವಕುಮಾರ್
Follow us
TV9 Web
| Updated By: ganapathi bhat

Updated on: Nov 09, 2021 | 2:38 PM

ಬೆಂಗಳೂರು: ದೇವೇಂದ್ರಪ್ಪ ಕಾಂಗ್ರೆಸ್ ಸೇರ್ಪಡೆ ತಡವಾಗ್ತಾ ಇತ್ತು. ಆದರೆ ಆ ಗಳಿಗೆ ಈಗ ಕೂಡಿ ಬಂದಿದೆ. ಅವರ ಜತೆ ಬಂದ ಎಲ್ಲ ಬೆಂಬಲಿಗರಿಗೆ ಸ್ವಾಗತ ಕೋರುವೆ. ಬೇಷರತ್ತಾಗಿ ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬರಬಹುದು. ಷರತ್ತು ಹಾಕಿಕೊಂಡು ಬರುವವರಿಗೆ ಅವಕಾಶ ಇರಲ್ಲ. ಅಧಿಕಾರಕ್ಕಾಗಿ ಷರತ್ತು ಹಾಕಿದರೆ ನಾವು ಕೇಳೋದಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು (ನವೆಂಬರ್ 9) ಹೇಳಿಕೆ ನೀಡಿದ್ದಾರೆ.

12 ವರ್ಷದ ಬಳಿಕ ಸದಸ್ಯತ್ವ ಅಭಿಯಾನ ಮಾಡ್ತಿದ್ದೇವೆ. ಹೊಸದಾಗಿ 5 ರೂಪಾಯಿ ಕಟ್ಟಿ ನೋಂದಣಿ ಮಾಡಿಕೊಳ್ಳಬೇಕು. ನವೆಂಬರ್ 14 ರಂದು ಪ್ಯಾಲೇಸ್ ಗ್ರೌಂಡ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಸ್ತುವಾರಿಗಳಿರುತ್ತಾರೆ. ಕಾಂಗ್ರೆಸ್ ಈ ದೇಶಕ್ಕೆ ಅನಿವಾರ್ಯ ಎಂಬುದನ್ನ ನೆನಪಿಸಲು ಪ್ರಯತ್ನ ಮಾಡುತ್ತೇವೆ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಟ್ ಕಾಯಿನ್ ದಂಧೆ ವಿಚಾರವಾಗಿ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕ ಸಿ.ಟಿ. ರವಿಗೆ ಟಾಂಗ್ ಕೊಟ್ಟಿದ್ದಾರೆ. ದಂಧೆಯಲ್ಲಿ ಕಾಂಗ್ರೆಸ್‌ನವರು ಭಾಗಿಯಾಗಿದ್ರೆ ಗಲ್ಲಿಗೇರಿಸಿ. ನಾವು ಯಾರ ಬೆಂಬಲಕ್ಕೂ ನಿಂತಿಲ್ಲ ಎಂದು ಹೇಳಿದ್ದಾರೆ. ಯಾರನ್ನು ಬೇಕಾದರೂ ತನಿಖೆಗೊಳಪಡಿಸಲಿ. ಸಂದೀಪ್ ಪಾಟೀಲ್ ಸುದ್ದಿಗೋಷ್ಠಿ ನನಗೆ ನೆನಪಿದೆ. ಗೃಹ ಸಚಿವರು ಮಾತನಾಡಿರುವುದೂ ನನಗೆ ನೆನಪಿದೆ. ಅದೆಲ್ಲದರ ಬಗ್ಗೆ‌ಯೂ ಅವರು ತನಿಖೆ ಮಾಡಲಿ. ನಮ್ಮ ಬಳಿಯೂ ದಾಖಲೆ ಇವೆ, ತನಿಖೆ ಮಾಡಿಸ್ತಿದ್ದೇವೆ. ಆಂತರಿಕ ತನಿಖೆ ಮಾಡಿಸುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಸೂಕ್ತ ಸಮಯದಲ್ಲಿ ಈ ವಿಚಾರ ಬಹಿರಂಗಪಡಿಸ್ತೇವೆ. ಈಗ ನೀವು ಆಡಳಿತದಲ್ಲಿದ್ದೀರಿ ತನಿಖೆ ಮಾಡಿಸಿ. ಶ್ರೀಕಿಯನ್ನ ಈಗ ಏಕೆ ಅರೆಸ್ಟ್ ಮಾಡಲಾಯಿತು. ಅವನ ವಿರುದ್ಧ ಹೈಕೋರ್ಟ್‌ನಲ್ಲಿ ಕೇಸ್ ಇತ್ತು. ಅದೆಲ್ಲಾ ಏನಾಯ್ತು, ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿ. ಇದೆಲ್ಲವು ಕೂಡ ಸಾಕಷ್ಟು ಅನುಮಾನ ಸೃಷ್ಟಿಸುತ್ತಿದೆ. ಬಿಟ್ ಕಾಯಿನ್ ಪ್ರಕರಣ EDಗೆ ಕೊಟ್ಟಿದ್ದೇವೆ ಅಂತಾರೆ. ಆದರ ನೋಟಿಫಿಕೇಷನ್‌ನಲ್ಲಿ ಏನಿದೆ ಮಾಹಿತಿ ನೀಡಲಿ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶದ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದ್ದಾರೆ: ಡಿಕೆ ಶಿವಕುಮಾರ್

ಇದನ್ನೂ ಓದಿ: ಇಡೀ ಭಾರತದಲ್ಲಿ ಬದಲಾವಣೆ ಅಲೆ ಪ್ರಾರಂಭವಾಗಿದೆ: ಉಪಚುನಾವಣೆ ಫಲಿತಾಂಶದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ